ರಾಜ್ಯಾದ್ಯಂತ ಭಾರಿ ಮಳೆ: ಮೂವರ ಸಾವು, 9 ಮಂದಿಗೆ ಗಾಯ

Team Udayavani, Oct 12, 2017, 6:00 AM IST

Ban12.jpg

ಬೆಂಗಳೂರು: ರಾಜಧಾನಿ ಬೆಂಗಳೂರು, ಕೋಲಾರ, ಚಾಮರಾಜನಗರ, ವಿಜಯಪುರ, ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರವೂ ಭಾರೀ ಮಳೆಯಾಗಿದೆ.

ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ಮೂವರು ಅಸುನೀಗಿದ್ದರೆ, 9 ಮಂದಿ ಗಾಯಗೊಂಡಿದ್ದಾರೆ.ಇದೇ ವೇಳೆ, ಚಾಮರಾಜನಗರ ಜಿಲ್ಲೆ ಹನೂರು ಸಮೀಪ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಯುವಕನನ್ನು ರಕ್ಷಿಸಲಾಗಿದೆ. ಅಲ್ಲದೆ, ಕೋಲಾರ ಸಮೀಪದ ಕೋರ್‌-ಇನ್‌ ಶಾಲೆ ಜಲಾವೃತಗೊಂಡಿದ್ದು, ಶಾಲೆಯೊಳಗಡೆ ಸಿಕ್ಕಿಹಾಕಿಕೊಂಡಿದ್ದ 100 ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಹಲವೆಡೆ ಆಸ್ತಿಪಾಸ್ತಿಗಳಿಗೆ ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ವಿಜಯಪುರ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ಹೂವಿನಹಿಪ್ಪರಗಿ ಹೋಬಳಿಯ ಬೈರವಾಡಗಿ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ಮನೆಯ ಗೋಡೆ ಕುಸಿದು ಮನೆಯಲ್ಲಿ ಮಲಗಿದ್ದ ಶಂಕ್ರಮ್ಮ ರಾಮಚಂದ್ರ ಔರಾದಿ (60) ಹಾಗೂ ಅವರ ಮಗಳು ಮಹಾದೇವಿ ರಾಮಚಂದ್ರ ಔರಾದಿ (30) ಎಂಬುವರು ಮೃತಪಟ್ಟಿದ್ದಾರೆ. ಮನೆಯ ಹೊರಗಡೆ ಮಲಗಿದ್ದ ಮಗ ಶಿವಪುತ್ರ ಎಂಬುವರು ಪ್ರಾಣಾಪಾಯದಿಂದ  ಪಾರಾಗಿದ್ದಾರೆ.

ಈ ಮಧ್ಯೆ, ಹಳೆ ಮೈಸೂರು ಕರ್ನಾಟಕ ಭಾಗದಲ್ಲಿ ಮಳೆ ಅಬ್ಬರಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರ ಸಮೀಪದ ಗಂಟಕನದೊಡ್ಡಿಯಲ್ಲಿ ಮಂಗಳವಾರ ರಾತ್ರಿ ನೆರೆಯ ನೀರಲ್ಲಿ ಆಟೋವೊಂದು ಕೊಚ್ಚಿ ಹೋಗಿದ್ದು, ಬೆಂಗಳೂರಿನ ಬನಶಂಕರಿ ಎರಡನೇ ಹಂತದ ಸಂತೋಷ (26) ಎಂಬ ಯಿವಕ ನೀರಲ್ಲಿ ಕೊಚ್ಚಿ ಹೋಗಿದ್ದಾನೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾರೋಹಳ್ಳಿಯ ಕೋಟೆ ಭಾಗದಲ್ಲಿ ಮನೆಯೊಂದು ಕುಸಿದಿದ್ದು, ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅರಣ್ಯ ಇಲಾಖೆಯ ಕಚೇರಿಗಳಿಗೆ ನೀರು ನುಗ್ಗಿದೆ.

ನೀರಲ್ಲಿ ಕೊಚ್ಚಿ ಹೋಗುತ್ತಿದ್ದವನ ರಕ್ಷಣೆ:
ಚಾಮರಾಜನಗರ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸಿದ್ದು, ಹನೂರು ಸಮೀಪದ ಉಡುತೊರೆಹಳ್ಳದಲ್ಲಿ ಮಂಗಳವಾರ ಸಂಜೆ ಕೊಚ್ಚಿಹೋಗುತ್ತಿದ್ದ ರುದ್ರ (21) ಎಂಬ ಯುವಕನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿನ ನಂದನವನ, ಮಜ್ಜನದ ಬಾವಿ, ತೆಪ್ಪೋತ್ಸವದ ದೊಡ್ಡಕೆರೆ, ಚಿಕ್ಕಕೆರೆಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಬುಧವಾರ ಬೆಳಗಿನ ಅಭಿಷೇಕದ ಪೂಜೆಗಾಗಿ ಸಾಲೂರು ಬೃಹನ್ಮಠದಿಂದ ನೀರು ತರಲಾಯಿತು. ಇದೇ ವೇಳೆ, ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ 7 ಮಂದಿ ಗಾಯಗೊಂಡಿದ್ದಾರೆ.

100 ಮಕ್ಕಳ ರಕ್ಷಣೆ:
ಈ ಮಧ್ಯೆ, ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಕೋಲಾರ ತಾಲೂಕಿನ ಕೋರ-ಇನ್‌ ಶಾಲೆಗೆ ಬುಧವಾರ ನೀರು ನುಗ್ಗಿದ್ದು, ಬೋಟ್‌ಗಳ ಸಹಾಯದಿಂದ ಶಾಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ರಕ್ಷಿಸಲಾಗಿದೆ. ಬೇತಮಂಗಲ ಸಮೀಪದ ಪೋತರಾಜನಹಳ್ಳಿ ಗ್ರಾಮದ ಬಳಿ ಇರುವ ಎಟಿಬಿ ಇಟ್ಟಿಗೆ ಕಾರ್ಖಾಣೆಯ ಚಿಮಣಿ ಕುಸಿದು ಬಿದ್ದಿದ್ದು, ಅಂದಾಜು 8 ಲಕ್ಷ ರೂ.ಗಳಷ್ಟು ನಷ್ಟ ಸಂಭವಿಸಿದೆ. ಇದೇ ವೇಳೆ, ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಮಾರ್ಗೋನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಅಂಬೇಡ್ಕರ್‌ ಬಡಾವಣೆಯಲ್ಲಿ ಮನೆಯ ಗೋಡೆ ಕುಸಿದು ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.ಮೈಸೂರಿನಲ್ಲಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಪ್ಪಣ್ಣ ಪಾರ್ಕ್‌ನಲ್ಲಿ ನೆರೆಯ ನೀರಿನೊಂದಿಗೆ ಮೊಸಳೆಯೊಂದು ಬಂದಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತು. ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಅದನ್ನು ಸೆರೆ ಹಿಡಿದರು. ಇದೇ ವೇಳೆ, ಚಿಕ್ಕಬಳ್ಳಾಪುರ, ಶಿರಸಿ, ಉಡುಪಿ, ಮಡಿಕೇರಿ, ಮಂಗಳೂರು ಸೇರಿದಂತೆ ರಾಜ್ಯದ ಇತರೆಡೆಯೂ ಮಳೆಯಾದ ವರದಿಯಾಗಿದೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

“40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress: “40 ಪರ್ಸೆಂಟ್‌ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್‌

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.