ಪ್ರವಾಹ ಭೀತಿಯಲ್ಲಿ ಕಾವೇರಿ,ಕೃಷ್ಣಾ ನದಿಪಾತ್ರ
Team Udayavani, Aug 18, 2018, 6:00 AM IST
ಬೆಂಗಳೂರು: ಕಳೆದು ಎರಡು ದಿನಗಳಿಗೆ ಹೋಲಿಸಿದರೆ ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಕಡಿಮೆಯಾಗಿದ್ದರೂ, ಈ ಭಾಗದ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನದಿಪಾತ್ರದ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‌ಡಿಆರ್‌ಎಫ್ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಕೃಷ್ಣಾ ನದಿಯಲ್ಲಿ ಪ್ರವಾಹ ಮುಂದುವರಿದಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1.66 ಲಕ್ಷ ಕ್ಯುಸೆಕ್‌ನಷ್ಟು ನೀರನ್ನು ಹರಿಬಿಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ತುಂಗಭದ್ರಾ ಜಲಾಶಯದಿಂದ ನದಿಗೆ 2.30 ಲಕ್ಷ ಕ್ಯುಸೆಕ್ ನೀರು ಬಿಡಲಾಗಿದ್ದು, ಕಂಪ್ಲಿ-ಕೋಟೆ ಪ್ರದೇಶದ 26 ಮನೆಗಳಿಗೆ ನೀರು ನುಗ್ಗಿದೆ. 32 ಕುಟುಂಬಗಳನ್ನು ಸಮೀಪದ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿದ್ದು, 130ಕ್ಕೂ ಅಧಿಕ ಸಂತ್ರಸ್ತರಿಗೆ ಗಂಜಿಕೇಂದ್ರದ ವ್ಯವಸ್ಥೆ ಕಲ್ಪಿಸಲಾಗಿದೆ. ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆ, ದೇವಸ್ಥಾನಗಳು, ಸಂಪರ್ಕ ರಸ್ತೆಗಳು ಜಲಾವೃತಗೊಂಡಿವೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ತಾಲೂಕಿನ ಅಂಬಳೆ ಗ್ರಾಮದಲ್ಲಿ ಜಯಮ್ಮ ಎಂಬುವರ ಮನೆ ಕುಸಿದಿದೆ. ಬಾಳೆಹೊನ್ನೂರು ತಾಲೂಕಿನ ಕುಂಜುವಳ್ಳಿ ಗ್ರಾಮದಲ್ಲಿ ಗುಡ್ಡ ಕುಸಿದು ಜಮೀನುಗಳು ಜಲಾವೃತಗೊಂಡಿವೆ. ಕರಾವಳಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿಯಲ್ಲಿ ನೆರೆ ಮುಂದುವರಿದಿದ್ದು, ನದಿ ತೀರದ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ.
ಸಾವಿರಾರು ಎಕರೆ ಬೆಳೆ ಜಲಾವೃತ
ಕಾವೇರಿಯಲ್ಲಿ ಪ್ರವಾಹ ಮುಂದುವರಿದಿದ್ದು, ಶ್ರೀರಂಗಪಟ್ಟಣದ ಚಂದ್ರವನ ಆಶ್ರಮ ಜಲಾವೃತಗೊಂಡಿದೆ. ಸ್ವಾಮೀಜಿಯನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಲಕ್ಷಣತೀರ್ಥ ನದಿ ಉಕ್ಕಿ ಹರಿಯುತ್ತಿದ್ದು, ಹುಣಸೂರು ತಾಲೂಕಿನಲ್ಲಿ ಸಾವಿರಾರು ಎಕರೆ ಪ್ರದೇಶದ ಬೆಳೆ ಜಲಾವೃತವಾಗಿದೆ. ಹಲವು ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ಕೆಆರ್‌ಪೇಟೆ ತಾಲೂಕಿನ ಹೇಮಗಿರಿ ಬೆಟ್ಟದ ಪಕ್ಕದಲ್ಲಿನ ಹೇಮಾವತಿ ದಡದಲ್ಲಿ ದಶಕಗಳಿಂದ ನೆಲೆನಿಂತಿದ್ದ ದೇಶ, ವಿದೇಶದ ಸಾವಿರಾರು ಪಕ್ಷಿಗಳು ಕಟ್ಟಿದ್ದ ಗೂಡುಗಳು ಕೊಚ್ಚಿಕೊಂಡು ಹೋಗಿವೆ. ಈ ಮಧ್ಯೆ, ನದಿ ಕಡೆ ಹೋಗದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದ್ದು, ನದಿ ಸುತ್ತಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಕೆಲವೆಡೆ, ಎನ್‌ಡಿಆರ್‌ಎಫ್ ತಂಡ ಬೀಡು ಬಿಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.