ರಾಜ್ಯದಲ್ಲಿ 40 ಡಿಗ್ರಿ ಸೆ. ದಾಟಿದ ಉಷ್ಣತೆ

Team Udayavani, Mar 27, 2017, 2:30 AM IST

Temperature-Symbolic-650.jpg

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಾಪಮಾನ 40 ಡಿ.ಸೆ. ದಾಟಿದೆ. ರವಿವಾರ ಕಲಬುರಗಿಯಲ್ಲಿ 40.7 ಡಿ.ಸೆ. ಉಷ್ಣತೆ ದಾಖಲಾಗಿದ್ದು, ಇದು ರಾಜ್ಯದಲ್ಲಿಯೇ ಗರಿಷ್ಠವಾಗಿದೆ. ಶನಿವಾರ ಇಲ್ಲಿ 40.3 ಡಿ.ಸೆ. ದಾಖಲಾಗಿತ್ತು. ತಾಪಮಾನ ಇನ್ನೂ ಕೆಲವು ದಿನ ಏರುಗತಿಯಲ್ಲಿಯೇ ಇರಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಬೆಂಗಳೂರು ಹಾಗೂ ಹಾಸನದಲ್ಲಿ ಕ್ರಮವಾಗಿ 37.2 ಡಿಗ್ರಿ ಸೆಲ್ಸಿಯಸ್‌ ಹಾಗೂ 36.6 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದ್ದು, ಇದು ಕಳೆದೆರಡು ದಶಕಗಳಲ್ಲಿ ಮಾರ್ಚ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ. ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್‌ ಮತ್ತು ಹಾಸನದಲ್ಲಿ 4 ಡಿಗ್ರಿ ಸೆಲ್ಸಿಯಸ್‌ ಹೆಚ್ಚು ಉಷ್ಣಾಂಶ ದಾಖಲಾಗಿದೆ. 1996ರ ಮಾ. 29 ಹಾಗೂ 30ರಂದು ಬೆಂಗಳೂರಿನಲ್ಲಿ 37.3 ಡಿಗ್ರಿ ಸೆಲ್ಸಿಯಸ್‌ ಹಾಗೂ ಹಾಸನದಲ್ಲಿ 37.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇತ್ತು. ಇದು ಮಾರ್ಚ್‌ ತಿಂಗಳ ಸಾರ್ವಕಾಲಿಕ ದಾಖಲೆಯಾಗಿದೆ. ತಿಂಗಳಾಂತ್ಯಕ್ಕೆ ಇನ್ನೂ ಐದು ದಿನಗಳು ಬಾಕಿ ಇದ್ದು, ಬಿಸಿಲೂ ಏರುಗತಿಯಲ್ಲಿ ಸಾಗಿದ್ದರಿಂದ ಈ ದಾಖಲೆ ಸರಿಗಟ್ಟುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಹೆಚ್ಚುತ್ತಿರುವ ವಾಹನಗಳ ದಟ್ಟಣೆ, ಕಾರ್ಖಾನೆಗಳು ಉಗುಳುವ ಹೊಗೆ, ಕಾಂಕ್ರೀಟ್‌ ಕಾಡು ಮತ್ತಿತರ ಕಾರಣಗಳು ಹಾಗೂ ಮಳೆ ಬಿದ್ದ ಅವಧಿಯಲ್ಲಿ ಸಾಕಷ್ಟು ಅಂತರ ಇವೆಲ್ಲದರಿಂದ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದ ಉಷ್ಣಾಂಶ ಕಂಡುಬರುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸಮುದ್ರದ ಕಡೆಯಿಂದ ಗಾಳಿ ಬೀಸಬೇಕಿತ್ತು. ಆದರೆ, ಗಾಳಿ ಬರುತ್ತಿಲ್ಲ. ಬಂದರೂ ನಗರದ ಒಳಗೆ ಬರಲು ಕಟ್ಟಡಗಳು, ಹೊಗೆ ತಡೆಯೊಡ್ಡುತ್ತಿವೆ. ಈ ಮಧ್ಯೆ ಬೇಸಗೆ ಕಾಲವಾಗಿದ್ದರಿಂದ ಬಿಸಿಲಿನ ಧಗೆ ಹೆಚ್ಚುತ್ತಿದೆ. ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ಹೆಚ್ಚು – ಕಡಿಮೆ ಇದ್ದರೆ ಅಷ್ಟೇನೂ ಸಮಸ್ಯಾತ್ಮಕವಲ್ಲ. ಆದರೆ, ಬೆಂಗಳೂರು ಸಹಿತ ರಾಜ್ಯದಲ್ಲಿ ಉಷ್ಣಾಂಶ ವಿಪರೀತಕ್ಕೆ ಹೋಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಎಸ್‌.ಎಂ. ಮೆಟ್ರಿ ಹೇಳುತ್ತಾರೆ. ಉಷ್ಣಾಂಶ ಹೆಚ್ಚು ದಾಖಲಾಗುವುದಕ್ಕೆ ಬರೀ ಬಿಸಿಲು ಮಾತ್ರ ಪರಿಗಣನೆಗೆ ಬರುವುದಿಲ್ಲ. ಯಾವ ಭಾಗದಲ್ಲಿ ಮೋಡಗಳಿವೆ? ಗಾಳಿ ಯಾವ ದಿಕ್ಕಿನಿಂದ ಬೀಸುತ್ತಿದೆ? ವಾತಾವರಣದಲ್ಲಿ ತೇವಾಂಶ ಇಲ್ಲದಿರುವುದೂ ಮುಖ್ಯವಾಗುತ್ತದೆ. ಸಮುದ್ರದ ಕಡೆಯಿಂದ ಗಾಳಿ ಬೀಸಿದರೆ, ವಾತಾವರಣದಲ್ಲಿ ತೇವಾಂಶ ಇರುತ್ತದೆ. ಆದರೆ, ಆ ಸೂಚನೆಗಳು ಕಾಣಿಸುತ್ತಿಲ್ಲ ಎಂದು ಹವಾಮಾನ ಇಲಾಖೆಯ ನಿವೃತ್ತ ನಿರ್ದೇಶಕ ಪುಟ್ಟಣ್ಣ ಅಭಿಪ್ರಾಯಪಡುತ್ತಾರೆ.

ಕರಾವಳಿಯಲ್ಲಿಯೂ ಏರುತ್ತಿದೆ ತಾಪಮಾನ
ರಾಜ್ಯದ ಇತರೆಡೆಯಂತೆ ಕರಾವಳಿಯಲ್ಲಿಯೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದೆ. ಗಾಳಿ ಕಡಿಮೆ ಇರುವುದರಿಂದ ವಿಪರೀತ ಸೆಕೆ ಇದೆ. ರಾತ್ರಿ ವೇಳೆ ಮೋಡ ಕಾಣಿಸಿಕೊಂಡರೂ ಉಷ್ಣತೆಯಲ್ಲಿ ಹೆಚ್ಚು ಇಳಿಕೆಯಾಗುತ್ತಿಲ್ಲ. ರವಿವಾರ ಮಂಗಳೂರಿನಲ್ಲಿ 35.9 ಡಿ.ಸೆ. ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3 ಡಿ.ಸೆ. ಹೆಚ್ಚಾಗಿದೆ. ಕನಿಷ್ಠ ತಾಪಮಾನ 25.2 ಡಿ.ಸೆ. ದಾಖಲಾಗಿದ್ದು, ಇದೂ ಸಾಮಾನ್ಯಕ್ಕಿಂತ 2 ಡಿ.ಸೆ. ಹೆಚ್ಚಾಗಿದೆ.

ಟಾಪ್ ನ್ಯೂಸ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Google Map: ಗೂಗಲ್‌ ಮ್ಯಾಪ್‌ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

2-ramanagara

Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Bengaluru: ರೋಡ್‌ ರೇಜ್‌: ಕಾರಿನ ಬಾನೆಟ್‌ ಮೇಲೆ ಹತ್ತಿ ಯುವಕರ‌ ಪುಂಡಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.