ಹೆಲಿಕಾಪ್ಟರ್ ಉತ್ಪಾದನೆ ಎಚ್‌ಎಎಲ್‌ಗೇ ನೀಡಿ
Team Udayavani, Nov 30, 2017, 11:43 AM IST
ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ., (ಎಚ್‌ಎಎಲ್)ಗೆ ನೀಡಿದ್ದ ರಾಫೆಲ್ ಹೆಲಿಕಾಪ್ಟರ್ ಉತ್ಪಾದನೆ ಗುತ್ತಿಗೆ ರದ್ದುಪಡಿಸಿ ರಿಲಾಯನ್ಸ್ ಕಂಪನಿಗೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿ ನೀತಿ ಅನುಸರಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಯುಪಿಎ ಸರ್ಕಾರದ ಅವಧಿಯಲ್ಲಿ ರಾಫೆಲ್ ಹೆಲಿಕಾಪ್ಟರ್ ಉತ್ಪಾದನೆ ಗುತ್ತಿಗೆಯನ್ನು ಎಚ್‌ಎಎಲ್‌ಗೆ ನೀಡುವಂತೆ ಫ್ರಾನ್ಸ್‌ನ ಡಸಾಲ್ಟ್ ಕಂಪನಿ ಜತೆ ಒಪ್ಪಂದವಾಗಿತ್ತು. 18 ಏರ್‌ಕ್ರಾಪ್ಟ್ಗಳನ್ನು ನೇರವಾಗಿ ಖರೀದಿ ಮಾಡುವುದು ಹಾಗೂ 108 ಹೆಲಿಕಾಪ್ಟರ್‌ಗಳನ್ನು ಎಚ್‌ಎಎಲ್ ಮೂಲಕ ಉತ್ಪಾದನೆ ಮಾಡುವ ಒಪ್ಪಂದ ಮಾಡಿಕೊಳ್ಳಲಾಗಿತ್ತು.
ಆದರೆ ಪ್ರಧಾನಿ ನರೇಂದ್ರ ಮೋದಿ, ಅನಿಲ್ ಅಂಬಾನಿಯನ್ನು ಜತೆ ಕರೆದುಕೊಂಡು ಏಕಾ ಏಕಿ ಫ್ರಾನ್ಸ್‌ಗೆ ತೆರಳಿ ಹಳೆಯ ಒಪ್ಪಂದ ರದ್ದು ಮಾಡಿ, ರಿಲಾಯನ್ಸ್ ಕಂಪನಿ ಜತೆ ಹೊಸ ಒಪ್ಪಂದ ಮಾಡಿಕೊಂಡಿರುವುದಾಗಿ ಘೋಷಣೆ ಮಾಡಿದ್ದಾರೆ,’ ಎಂದು ಬೇಸರ ವ್ಯಕ್ತಪಡಿಸಿದರು.
“ಮೇಲಾಗಿ ಅನಿಲ್ ಅಂಬಾನಿ ಅವರ ರಿಲಾಯನ್ಸ್ ಕಂಪನಿಗೆ ಹೆಲಿಕಾಪ್ಟರ್ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲ. ಆದರೂ ಪ್ರಧಾನಿ, ಅವರ ಕಂಪನಿಗೇ ಟೆಂಡರ್ ನೀಡುವ ಮೂಲಕ “ಮೇಕ್ ಇನ್ ಇಂಡಿಯಾ’ ಯೋಜನೆಗೆ ತಿಲಾಂಜಲಿ ಇಟ್ಟಿದ್ದಾರೆ,’ ಎಂದು ಆರೋಪಿಸಿದರು.
ರಾಜ್ಯಕ್ಕೆ ಅನ್ಯಾಯ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದಿಂದ ಆಯ್ಕೆಯಾಗಿ ಹೋಗಿದ್ದಾರೆ. ಆದರೆ, ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ಮಹತ್ವದ ಯೋಜನೆ ಕೈತಪ್ಪಿಸಿ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಅವರೂ ರಾಜ್ಯವನ್ನು ಪ್ರತಿನಿಧಿಸುತ್ತಿದ್ದು, ಎಚ್‌ಎಎಲ್‌ನ ಕೈತಪ್ಪಿ ಹೋಗಿರುವ ಯೋಜನೆಯನ್ನು ವಾಪಸ್ ತರಲು ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದರು.
ಅವರ ಮನಸ್ಸೇ ಕಸದ ತೊಟ್ಟಿ ಇದ್ಹಾಗೆ!: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಹರಿ ಹಾಯ್ದ ದಿನೇಶ್ ಗುಂಡೂರಾವ್, “ಬಿಜೆಪಿಯವರ ಮನಸ್ಸೇ ಕಸದ ತೊಟ್ಟಿ ಇದ್ದ ಹಾಗೆ. ರಾಜ್ಯ ಸರ್ಕಾರ ಕಾಂಗ್ರೆಸ್‌ಗೆ ಅವಮಾನ ಮಾಡಿದೆ ಎಂದು ಹೇಳುವ ಬಿಜೆಪಿಯವರು, ತಮ್ಮ ಪಕ್ಷದ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರವನ್ನು ಕಸದ ನಡುವೆ ಮೂಲೆಯಲ್ಲಿ ಇಟ್ಟು ಅವಮಾನ ಮಾಡಿದ್ದಾರೆ.
ಇದಕ್ಕಾಗಿ ಬಿಜೆಪಿಯವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ ಕುಮಾರ್ ಹೆಗಡೆ ಅವರಿಗೆ ಸಂಸ್ಕೃತಿಯೇ ಇಲ್ಲ. ಅವರಿಗೆ ಮೊದಲು ಸಂಸ್ಕೃತಿಯ ಕೌಶಲ್ಯ ಕಲಿಸಬೇಕು,’ ಎಂದು ದಿನೇಶ್ ಗುಂಡೂರಾವ್ ವ್ಯಂಗ್ಯ ಮಾಡಿದರು.
ಅಂಬರೀಷ್ ನಮ್ಮ ನಾಯಕರು: ಮಾಜಿ ಸಚಿವ ಹಾಗೂ ಮಂಡ್ಯದ ಶಾಸಕ ಅಂಬರೀಷ್ ಅವರಿಗೆ ನಮ್ಮ ಪಕ್ಷದಲ್ಲಿ ಸದಾ ಗೌರವದ ಸ್ಥಾನವಿದೆ. ಪಕ್ಷಕ್ಕೆ ಸಂಬಂಧಿಸಿದ ಯಾವುದೇ ತೀರ್ಮಾನ ಕೈಗೊಂಡಾಗಲೂ ಅವರ ಸಲಹೆ ಪಡೆದೇ ಪಡೆಯುತ್ತೇವೆ. ಅವರು ನಮ್ಮ ಪಕ್ಷದ ಹಿರಿಯ ಮತ್ತು ಪ್ರಮುಖ ನಾಯಕರು,’ ಎಂದು ದಿನೇಶ್ ಗುಂಡೂರಾವ್ ಹೇಳಿದರು. ಇದೇ ಸಂದರ್ಭದಲ್ಲಿ ಮಾಜಿ ಸಂಸದೆ ರಮ್ಯಾ ಬಗ್ಗೆ ಕೇಳಿದ ಪ್ರಶ್ನೆಗೆ, “ಅವರ ಬಗ್ಗೆ ಮಾಹಿತಿ ಇಲ್ಲ,’ ಎಂದಷ್ಟೇ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.