“ಕ್ಲೇಮ್‌ ಕಮೀಷನರ್‌’ ನೇಮಿಸಿದ ಹೈಕೋರ್ಟ್‌

Team Udayavani, Feb 26, 2020, 3:07 AM IST

highcourt4

ಬೆಂಗಳೂರು: ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ಮತ್ತು ಐಟಿ ದಾಳಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ್ದನ್ನು ಖಂಡಿಸಿ ನಡೆದ ಪ್ರತ್ಯೇಕ ಬಂದ್‌ ಹಾಗೂ ಪ್ರತಿಭಟನೆಗಳಿಂದ ರಾಜ್ಯದಲ್ಲಿ ಉಂಟಾದ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ-ಪಾಸ್ತಿ ನಷ್ಟದ ಪ್ರಮಾಣ ಅಂದಾಜಿಸಲು ಇಬ್ಬರು ನಿವೃತ್ತ ಜಿಲ್ಲಾ ನ್ಯಾಯಾಧೀಶರನ್ನು “ಕ್ಲೇಮು ಕಮೀಷನರ್‌’ ಆಗಿ ನೇಮಕ ಮಾಡಿ ಹೈಕೋರ್ಟ್‌ ಮಂಗಳವಾರ ಆದೇಶ ನೀಡಿದೆ.

ಮಹದಾಯಿ ನ್ಯಾಯಾಧೀಕರಣದ ತೀರ್ಪು ವಿರೋಧಿ 2018ರಲ್ಲಿ ಕನ್ನಡ ಚಳವಳಿ ಪಕ್ಷದ ವಾಟಾಳ್‌ ನಾಗರಾಜ್‌ ಹಾಗೂ ಇತರರು ಕರೆ ನೀಡಿದ್ದ ಕರ್ನಾಟಕ ಬಂದ್‌ ವಿರೋಧಿಸಿ ಶ್ರದ್ಧಾ ಪೋಷಕರ ಸಂಘ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಅವರನ್ನು ಜಾರಿ ನಿದೇಶನಾಲಯ ಬಂಧಿಸಿದ್ದನ್ನು ಖಂಡಿಸಿ 2019ರಲ್ಲಿ ರಾಮನಗರ, ಕನಕಪುರ ತಾಲೂಕಿನಲ್ಲಿ ನಡೆದ ಬಂದ್‌-ಪ್ರತಿಭಟನೆ ಆಕ್ಷೇಪಿಸಿ ರವಿಕುಮಾರ್‌ ಕಂಚನಹಳ್ಳಿ ಸಲ್ಲಿಸಿದ್ದ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ ಹಾಗೂ ನ್ಯಾ. ಹೇಮಂತ್‌ ಚಂದನಗೌಡರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.

ಅದರಂತೆ, ಮಹದಾಯಿ ನ್ಯಾಯಾಧೀಕರಣದ ತೀರ್ಪು ಖಂಡಿಸಿ 2018ರ ಜ.25, ಫೆ.4 ಮತ್ತು ಏ.12ರಂದು ಕರ್ನಾಟಕ ಬಂದ್‌ ನಡೆಸಲಾಗಿದೆ. ಈ ವೇಳೆ ಉಂಟಾದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಪ್ರಮಾಣ ಅಂದಾಜಿಸಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಮಹ್ಮದ್‌ ಗೌಸ್‌ ಎಂ. ಪಟೇಲ್‌ ಅವರನ್ನು ಮತ್ತು ಐಟಿ ದಾಳಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದ್ದನ್ನು ಖಂಡಿಸಿ 2019ರ ಫೆ.4ರಿಂದ 11ರವರೆಗೆ ರಾಮನಗರ ಜಿಲ್ಲೆಯ ಕನಕಪುರ, ಚನ್ನಪಟ್ಟಣ ಸೇರಿದಂತೆ ವಿವಿಧ ಕಡೆ ನಡೆದ ಬಂದ್‌ ಮತ್ತು ಪ್ರತಿಭಟನೆ ವೇಳೆ ಉಂಟಾದ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಬಗ್ಗೆ ಅಂದಾಜು ಮಾಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶ ಸಿ.ಆರ್‌. ಬೆನಕನಹಳ್ಳಿ ಅವರನ್ನು ಕ್ಲೇಮು ಕಮಿಷರ್‌ಗಳನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.

ಸಿಬ್ಬಂದಿ ನೇಮಿಸಲು 3 ತಿಂಗಳ ಗಡುವು: ಈ ಆದೇಶದ ಪ್ರತಿ ಹೈಕೋರ್ಟ್‌ ವೆಬ್‌ ಸೈಟ್‌ನಲ್ಲಿ ಲಭ್ಯವಾದ ದಿನದಿಂದ ಮೂರು ತಿಂಗಳೊಳಗೆ ಕ್ಲೇಮು ಕಮೀಷನರ್‌ ಹಾಗೂ ಅವರಿಗೆ ಒದಗಿಸುವ ಸಿಬ್ಬಂದಿ ವರ್ಗವನ್ನು ನೇಮಿಸಿ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಅದಾದ ಆರು ತಿಂಗಳಲ್ಲಿ ಕ್ಲೇಮು ಕಮೀಷನರ್‌ಗೆ ಸುಸಜ್ಜಿತ ಕಚೇರಿ, ಕಾರು, ಚಾಲಕ ಮತ್ತು ಪೀಠೊಪಕರಣ ಸೇರಿದಂತೆ ಎಲ್ಲಾ ಮೂಲ ಸೌಕರ್ಯ ಒದಗಿಸಬೇಕು. ಇನ್ನೂ ಸರ್ಕಾರ ಒದಗಿಸಿರುವ ಮೌಲ್ಯ ಮಾಪಕರ ಪಟ್ಟಿಯಲ್ಲಿ ಯಾರನ್ನು ತಮ್ಮ ಸಲಹೆಗಾರರಾಗಿ ನಿಯೋಜಿಸಬೇಕು ಎಂಬುದನ್ನು ಕ್ಲೇಮು ಕಮೀಷನರ್‌ ನಿರ್ಧರಿಸಬೇಕು. ಅವರು ಕಾಲ ಕಾಲಕ್ಕೆ ಸೂಚಿಸಿದ ಮೌಲ್ಯ ಮಾಪಕರನ್ನು ಸಲಹಾಗಾರರನ್ನಾಗಿ ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.