ಮಾಲಿನ್ಯ ಮಂಡಳಿ ಅಧ್ಯಕ್ಷರ ನೇಮಕಕ್ಕೆ ಹೈಕೋರ್ಟ್ ಅಸ್ತು
Team Udayavani, Jan 7, 2017, 3:50 AM IST
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಲಕ್ಷ್ಮಣ ಅವರ ನೇಮಕ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಮಾಹಿತಿ ಹಕ್ಕು ಕಾರ್ಯಕರ್ತ ಟಿ.ನರಸಿಂಹಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ, ನಿಯಮಾನುಸಾರ ಲಕ್ಷ್ಮಣ ಅವರ ನೇಮಕಾತಿ ಪ್ರಕ್ರಿಯೆ ನಡೆಸಿದೆ ಎಂದು ಸರ್ಕಾರ ತಿಳಿಸಿದೆ. ಹೀಗಾಗಿ, ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನ್ಯಾಯಾಲಯಯ ಬಯಸುವುದಿಲ್ಲ ಎಂದು ತಿಳಿಸಿ ಅರ್ಜಿ ವಜಾಗೊಳಿಸಿತು.
ಕಾನೂನು ಪ್ರಕಾರ ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಪರಿಸರ ಮತ್ತು ವಿಜ್ಞಾನಕ್ಕೆ ಸಂಬಂಧಿಸಿದ ಸ್ನಾತಕೋತ್ತರ ಅಥವಾ ಪರಿಸರ ತಂತ್ರಜ್ಞಾನ ವಿಷಯದಲ್ಲಿ ಎಂಜಿನಿಯರಿಂಗ್ ಪದವಿ ಪಡೆದವರನ್ನು ನೇಮಕ ಮಾಡಬೇಕು. ಆದರೆ ಲಕ್ಷ¾ಣ ಅವರು ಸಿವಿಲ್ ಎಂಜಿನಿಯರಿಂಗ್ ಪದವೀಧರರಾಗಿ¨ªಾರೆ. ಇದು ರಾಜಕೀಯ ಪ್ರೇರಿತವಾಗಿದೆ. ಆದ್ದರಿಂದ ಈ ನೇಮಕವನ್ನು ಅಸಿಂಧುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಶುಕ್ರವಾರ ವಿಚಾರಣೆ ವೇಳೆ ರಾಜ್ಯ ಅಡ್ವೋಕೇಟ್ ಜನರಲ್ ವಾದಿಸಿ, ನಿಯಮಾನುಸಾರ ಲಕ್ಷ್ಮಣ ಅವರ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಅರ್ಜಿ ವಜಾಗೊಳಿಸಬೇಕು ಎಂದು ಕೋರಿದರು. ಈ ವಾದವನ್ನು ನ್ಯಾಯಪೀಠ ಪುರಸ್ಕರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.