ಸರ್ಕಾರದ ಆಡಳಿತ ಕಾರ್ಯವೈಖರಿಗೆ ಹೈ ಗರಂ
Team Udayavani, Nov 23, 2017, 11:06 AM IST
ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಸೇರಿದಂತೆ ಕಾನೂನು ಬಾಹಿರವಾಗಿ ನಡೆದುಕೊಳ್ಳು ವವರ ವಿರುದ್ಧ ಸೂಕ್ತ ಕ್ರಮ ಜರುಗಿಸದೇ ವಿಳಂಬ ಮಾಡುವ ಆಡಳಿತ ವ್ಯವಸ್ಥೆ ನೋಡಿ ನ್ಯಾಯಾಲಯ ಕಣ್ಮುಚ್ಚಿಕೊಂಡಿರಲು ಆಗುವುದಿಲ್ಲ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ನಿಯಮ ಬಾಹಿರವಾಗಿ ಕಟ್ಟಡ ನಿರ್ಮಾಣ ಮಂಜೂ ರಾತಿ ರದ್ದುಪಡಿಸಿದ್ದ ಬೆಳ್ಮಾ ಗ್ರಾಪಂ ಅಧಿಕಾರಿ ಕ್ರಮ ಪ್ರಶ್ನಿಸಿ ಹೇಮಂತ್ ಶೆಟ್ಟಿ ಎಂಬುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬುಧವಾರ ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಒ ಸಲ್ಲಿಸಿದ್ದ ದಾಖಲೆಗಳು ಸಮರ್ಪಕವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಈ ಪ್ರಕರಣದಲ್ಲಿ ಹಿರಿಯ ಅಧಿಕಾರಿ ಹೊರಡಿಸಿದ್ದ ಆದೇಶವನ್ನೂ ಮೀರಿ ಗ್ರಾಪಂ ಸಭೆ ನಿರ್ಣಯದ ಅನ್ವಯ ಪಿಡಿಒ ನಡೆದುಕೊಂಡಿರುವುದು ಸರಿಯಲ್ಲ ಎಂದು ತರಾಟೆ ತೆಗೆದುಕೊಂಡಿತು.
ಜೊತೆಗೆ ಸೂಕ್ತ ಕಾರಣವಿಲ್ಲದೆ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರ ಸದಸ್ಯತ್ವ ರದ್ದು ಗೊಳಿಸುವ ಸಲುವಾಗಿ ರಾಜ್ಯ ಸರ್ಕಾರ ಶೋಕಾಸ್ ನೀಡಿ 10 ತಿಂಗಳು ಕಳೆದರೂ ಯಾಕೆ
ಕ್ರಮ ಕೈಗೊಂಡಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಈ ವಿಳಂಬ ಧೋರಣೆ ಪುನರಾವರ್ತನೆಯಾಗುತ್ತಲೇ ಇರುತ್ತದೆ. ಈ ಕಾರ್ಯವೈಖರಿ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಜೊತೆಗೆ ಗ್ರಾಪಂ ಸದಸ್ಯರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ನ್ಯಾಯಪೀಠ, ಸರ್ಕಾರ ನೀಡಿರುವ ಶೋಕಾಸ್ ನೋಟಿಸ್ ಸಂಬಂಧ ಮುಂದಿನ ಕ್ರಮ ಕೈಗೊಳ್ಳುತ್ತಿರೋ ಇಲ್ಲವೋ ಅಥವಾ ನ್ಯಾಯಾಲಯವೇ ಆದೇಶ ಹೊರಡಿಸಬೇಕೆ ಎಂದು ಪ್ರಶ್ನಿಸಿತು. ಜೊತೆಗೆ ಗ್ರಾಪಂ ಸದಸ್ಯರಿಗೆ ನೀಡಲಾಗಿರುವ ನೋಟಿಸ್ ಸಂಬಂಧ ಇದುವರೆಗೂ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಂಬುದರ ಬಗ್ಗೆ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸಿ ನ. 29ಕ್ಕೆ
ವಿಚಾರಣೆ ಮುಂದೂಡಿತು. ಅರ್ಜಿದಾರ ಹೇಮಂತ್ ಶೆಟ್ಟಿ ಪರ ವಕೀಲ ಕೇತನ್‌ಕುಮಾರ್ ಬೊಳನಾಥೂರ್ ವಾದ
ಮಂಡಿಸಿದ್ದರು.
ಪ್ರಕರಣ ಏನು?: ಬೆಳ್ಮಾ ಗ್ರಾಮದಲ್ಲಿ ಗಂಗಾಧರ್ ಶೆಟ್ಟಿ ಎಂಬುವವರಿಗೆ ಗ್ರಾಪಂ ವತಿಯಿಂದ 1983ರಲ್ಲಿ ಸರ್ವೇ ನಂಬರ್ 83/ಎನಲ್ಲಿ ನಿವೇಶನ ಕಟ್ಟಿಕೊಳ್ಳಲು ಸೈಟ್ ಮುಂಜೂರಾಗಿತ್ತು. ಗಂಗಾಧರ್ ಶೆಟ್ಟಿ ನಿಧನದ ನಂತರ ಸೈಟಿಗೆ ಸಂಬಂಧಿಸಿದ ದಾಖಲೆಗಳು, ಆರ್‌ಟಿಸಿ ಪುತ್ರ ಹೇಮಂತ್ ಶೆಟ್ಟಿಗೆ ವರ್ಗಾವಣೆಗೊಂಡಿದ್ದವು.
2015ರಲ್ಲಿ ಹೇಮಂತ್ ತಮಗೆ ಹಕ್ಕಿರುವ ಸೈಟಿನಲ್ಲಿ ಕಟ್ಟಡ ಕಟ್ಟಲು ಮಂಜೂರಾತಿಗೆ ಗ್ರಾಪಂಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಗ್ರಾಪಂ ಸದಸ್ಯರು ಸಾಮಾನ್ಯ ಸಭೆಯಲ್ಲಿ ಕಟ್ಟಡ ಮಂಜೂರಾತಿ ನೀಡಬಾರದು ಎಂದು ನಿರ್ಣಯ ಅಂಗೀಕರಿಸಿದ್ದಾರೆ ಎಂಬ ಕಾರಣ ನೀಡಿ ಪಿಡಿಒ ಮಂಜೂರಾತಿ ಪತ್ರ ನೀಡಲು ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಹೇಮಂತ್ ಶೆಟ್ಟಿ ತಾಪಂ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು. ಈ ದೂರು ವಿಚಾರಣೆ ನಡೆಸಿದ್ದ ಇಒ, ಕಾನೂನು ಪ್ರಕಾರ ಹೇಮಂತ್ ಶೆಟ್ಟಿಗೆ ಕಟ್ಟಡ ಮಂಜೂರಾತಿ ನೀಡುವಂತೆ ಆದೇಶಿಸಿದ್ದರು. ಆದರೆ, ಪುನಃ
ಗ್ರಾಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯಯನ್ನು ಪಿಡಿಒ ಮುಂದಿ ಟ್ಟಿದ್ದರು. ಈ ಕ್ರಮ ಪ್ರಶ್ನಿಸಿ ಹೇಮಂತ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಸರ್ಕಾರದ ಶೋಕಾಸ್ ನೋಟಿಸ್: ಈ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಪಂ, ನಿಯಮಬಾಹಿರವಾಗಿ ನಡೆದುಕೊಂಡ ಬೆಳ್ಮಾ ಗ್ರಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ಸದಸ್ಯರ ವಿರುದ್ಧ ಪಂಚಾಯತ್ ರಾಜ್ ಅಧಿನಿಯಮ (43)ಎ ಅನ್ವಯ
ಸದಸ್ಯತ್ವದಿಂದ ತೆಗೆದುಹಾಕಲು ಪ್ರಸ್ತಾವನೆ ಸಲ್ಲಿಸಲು ಇರುವ ಅವಕಾಶದ ಬಗ್ಗೆ ಡಿ.15, 2016ರಂದು ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗಿತ್ತು.
ಈ ಹಿನ್ನೆಲೆ ಗ್ರಾಪಂ ಸದಸ್ಯರೆಲ್ಲರಿಗೂ, ಸಕಾರಣ ವಿಲ್ಲದೆ ದುರ್ವರ್ತನೆ ಹಾಗೂ ಅಧಿಕಾರ ದುರುಪಯೋಗ ಎಂದು ಪರಿಗಣಿಸಿ ನಿಮ್ಮನ್ನು ಸದಸ್ಯತ್ವ ಸ್ಥಾನದಿಂದ ತೆಗೆದು ಹಾಕಲು ಏಕೆ ಕ್ರಮ ಕೈಗೊಳ್ಳಬಾರದು ಎಂದು ಜ. 4 ರಂದು
ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.