ಸರಕಾರ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
Team Udayavani, Mar 21, 2018, 10:20 AM IST
ಬೆಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಾದ ಮಂಡಿಸಲು ವಕೀಲ ಎಂ. ಶಾಂತಾರಾಮ ಶೆಟ್ಟಿ ಅವರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸಿರುವ ಸರಕಾರದ ಆದೇಶಕ್ಕೆ ಮಂಗಳವಾರ ಮಧ್ಯಾಂತರ ತಡೆಯಾಜ್ಞೆ ನೀಡಿರುವ ಹೈಕೋರ್ಟ್ ಈ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಸರಕಾರ ಹಾಗೂ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಭಾಸ್ಕರ್‌ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ|ರಾಘವೇಂದ್ರ ಎಸ್. ಚೌವ್ಹಾಣ್ ಅವರಿದ್ದ ಏಕಸದಸ್ಯ ಪೀಠ, ವಿಶೇಷ ಅಭಿಯೋಜಕರ ನೇಮಕಾತಿಗೆ ಎ.6ರವರೆಗೆ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಅರುಣ್ ಶ್ಯಾಮ್, ವಕೀಲ ಶಾಂತಾರಾಂ ಶೆಟ್ಟಿ ಅವರು ಪೂರ್ವಾಗ್ರಹ ಪೀಡಿತರಾಗಿದ್ದಾರೆ. ಅವರು ಆರೋಪಿಗಳ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಅಲ್ಲದೆ ದೂರುದಾರರಾದ ಗುಲಾಬಿ ಶೆಡ್ತಿ ಅವರ ಮನವಿ ಮೇರೆಗೆ ಶಾಂತಾರಾಮ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಅವರನ್ನು ಬಿಟ್ಟು ಬೇರೆ ಯಾವ ವಕೀಲರನ್ನಾದರೂ ನೇಮಕ ಮಾಡಬೇಕು. ಇಲ್ಲದಿದ್ದರೆ ಅವರಿಂದ ಅರ್ಜಿದಾರರಿಗೆ ಅನ್ಯಾಯವಾಗಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.