ಮುಂಚೆಯೇ ದೇಗುಲ ಇತ್ತಾ, ಇಲ್ಲವೇ ರಸ್ತೆ ಅತಿಕ್ರಮಿಸಿ ದೇಗಲ ಕಟ್ಟುತ್ತಿದ್ದಾರಾ?: ಕೋರ್ಟ್
Team Udayavani, Jan 12, 2024, 1:00 PM IST
ಬೆಂಗಳೂರು: ನಗರದ ಸುಂಕದಕಟ್ಟೆಯ ವ್ಯಾಪ್ತಿಯಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ದೇವಾಲಯ ನಿರ್ಮಿಸಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್, ಜಿಲ್ಲಾಧಿಕಾರಿಗಳಿಂದ ವಾಸ್ತವಿಕ ವರದಿ ಕೇಳಿದೆ.
ಈ ವಿಚಾರವಾಗಿ ಸುಂಕದಕಟ್ಟೆ ಸಿ. ಹೊನ್ನಯ್ಯ ಮತ್ತಿತರರು ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ ಸಲ್ಲಾಪುರದಮ್ಮ ದೇವಾಲಯ ಟ್ರಸ್ಟ್ ಸದಸ್ಯರು ದೇವಸ್ಥಾನ ನಿರ್ಮಿಸುತ್ತಿರುವುದಕ್ಕೆ ಆಕ್ಷೇ ಪಿಸಿ ಸಲ್ಲಿಸಿರುವ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯ ಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು, ಟ್ರಸ್ಟ್ ನವರು ಸರ್ಕಾರಿ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸುತ್ತಿರು ವುದಲ್ಲದೇ ಸಾರ್ವಜನಿಕರ ಓಡಾಟಕ್ಕೆ ರಸ್ತೆ ನಿರ್ಬಂಧಿಸಿ ದ್ದಾರೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿ, ದೇವಾಲಯ ನಿರ್ಮಿಸಲಾಗಿದೆಯೇ, ಬಿಬಿಎಂಪಿ ವರದಿಯಲ್ಲಿ ಏನಿದೆ, ಸಾರ್ವಜನಿಕ ರಸ್ತೆಯನ್ನು ದೇವಸ್ಥಾನ ಅಥವಾ ಬೇರೆ ಪೂಜಾ ಸ್ಥಳ ನಿರ್ಮಿಸಲು ಬಳಸಬಹುದು ಎಂಬುದಕ್ಕೆ ದಾಖಲೆ ಎಲ್ಲಿದೆ, ಬಿಬಿಎಂಪಿ ಕಥೆ ನಮಗೆ ಬೇಕಿಲ್ಲ. ಸಾರ್ವಜನಿಕ ರಸ್ತೆಯಲ್ಲಿ ದೇವಸ್ಥಾನ ನಿರ್ಮಿಸಲಾಗಿದೆಯೇ? ಇಲ್ಲವೇ ಎಂಬುದಷ್ಟೇ ನಮಗೆ ಬೇಕು. ನಾವು ಸಾರ್ವಜನಿಕ ಆಸ್ತಿಯ ರಕ್ಷಕರು. ಇದು ಖಾಸಗಿ ಆಸ್ತಿಯಲ್ಲ. ಸಾರ್ವಜನಿಕ ರಸ್ತೆಯಲ್ಲಿ ದೇವಾಲಯ, ಮಸೀದಿ, ಚರ್ಚ್ ನಿರ್ಮಿಸಿದರೇ ಜನರು ಏನು ಮಾಡಬೇಕು ಎಂದು ತೀಕ್ಷ್ಣವಾಗಿ ಪ್ರಶ್ನಿಸಿತು.
ಅಲ್ಲದೆ, ಬಿಬಿಎಂಪಿ ಪ್ರಮಾಣಪತ್ರದಲ್ಲಿ ಒತ್ತುವರಿಯಾಗಿದೆ ಎಂದು ಎಲ್ಲಿ ಉಲ್ಲೇಖೀಸಿದ್ದೀರಿ, ಸಾರ್ವಜನಿಕ ಸ್ಥಳದಲ್ಲಿ ದೇವಾಲಯ ನಿರ್ಮಿಸಿದ್ದರೆ ನಾವು ಅದನ್ನು ಸಹಿಸುವುದಿಲ್ಲ. ಬಿಬಿಎಂಪಿ ವರದಿಯ ಆಧಾರದಲ್ಲಿ ನಮಗೆ ಆ ಭಾವನೆ ಇದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಬಿಬಿಎಂಪಿ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ದೇವಸ್ಥಾನ ನಿರ್ಮಿಸಲು ರಸ್ತೆ ಒತ್ತುವರಿ ಮಾಡಲಾಗಿದೆಯೇ ಅಥವಾ ಟ್ರಸ್ಟ್ ಸದಸ್ಯರು ಹೇಳುವಂತೆ ಹಲವು ವರ್ಷಗಳಿಂದ ಅಲ್ಲಿ ದೇವಸ್ಥಾನ ಇತ್ತೇ ಎಂಬುದನ್ನು ಉಲ್ಲೇಖೀಸಲು ಬಿಬಿಎಂಪಿ ವಿಫಲವಾಗಿದೆ ಎಂದು ನ್ಯಾಯಪೀಠ ಹೇಳಿತು.
ಆ ಹಿನ್ನೆಲೆಯಲ್ಲಿ ಇದರ ಬಗ್ಗೆ ಸ್ವತಂತ್ರ ಪ್ರಾಧಿಕಾರದಿಂದ ಸ್ಪಷ್ಟವಾದ ವರದಿ ಪಡೆಯುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸಂಬಂಧಿಸಿದ ಎಲ್ಲರಿಗೂ ನೋಟಿಸ್ ಜಾರಿಗೊಳಿಸಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ನೇಮಿಸಿದ ಭೂ ದಾಖಲೆಗಳ ಉಪ ನಿರ್ದೇಶಕರು ತಾಂತ್ರಿಕ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಾಸ್ತವಿಕ ವರದಿಯನ್ನು ಮೂರು ವಾರಗಳಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.