ಕಿಡ್ನಿ ಕಸಿಗೆ ಅವಕಾಶ ನೀಡದ್ದಕ್ಕೆ ಹೈ ಕೋರ್ಟ್ ಮೊರೆ
Team Udayavani, Apr 14, 2018, 12:01 PM IST
ಬೆಂಗಳೂರು: ಸಂಬಂಧಿಕರೊಬ್ಬರು ಸ್ವಇಚ್ಛೆಯಿಂದ ಕಿಡ್ನಿದಾನ ಮಾಡಲು ಬಂದರೂ ಅದನ್ನು ಪಡೆಯಲು ಅನುಮತಿ ನಿರಾಕರಿಸಿದ ಆರೋಗ್ಯ ಇಲಾಖೆಯ ಕ್ರಮ ಪ್ರಶ್ನಿಸಿ 48 ವರ್ಷದ ರೈತರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ರಾಘವೇಂದ್ರ ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಬಡ ರೈತರಾಗಿರುವ ಅರ್ಜಿದಾರರು ಹಲವು ವರ್ಷಗಳಿಂದ ಅನುಮತಿಗಾಗಿ ಪರದಾಡುತ್ತಿದ್ದಾರೆ.
ಈ ಪ್ರಕರಣವನ್ನು ಮಾನವೀಯ ನೆಲೆಗಟ್ಟಿನಲ್ಲಿಯೂ ನೋಡಬೇಕಾಗುತ್ತದೆ. ಹೀಗಾಗಿ, ಅರ್ಜಿದಾರರಿಗೆ “ಕಿಡ್ನಿ’ ಕಸಿಗೆ ಅನುಮತಿ ನೀಡುವ ಬಗ್ಗೆ ಸ್ಪಷ್ಟ ನಿಲುವು ತಿಳಿಸುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿ ಏಪ್ರಿಲ್ 17ಕ್ಕೆ ವಿಚಾರಣೆ ಮುಂದೂಡಿತು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ರೈತ 2013ರಲ್ಲಿ ಡೆಂ ಜ್ವರಕ್ಕೆ ಒಳಗಾಗಿ, ಎರಡೂ ಕಿಡ್ನಿ ವೈಫಲ್ಯಕ್ಕೆ ತುತ್ತಾಗಿದ್ದರು.
ವಾರಕ್ಕೆ ಎರಡು ಬಾರಿ ಡಯಾಲಿಸಿಸ್ ಚಿಕಿತ್ಸೆ ಪಡೆದುಕೊಂಡೇ ದಿನ ದೂಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರ ಪತ್ನಿಯ ಸಂಬಂಧಿಕ ಮಹಿಳೆಯೊಬ್ಬರು ಸ್ವ ಇಚ್ಛೆಯಿಂದ ಒಂದು ಕಿಡ್ನಿದಾನ ಮಾಡಲು ಒಪ್ಪಿಕೊಂಡಿದ್ದರು. ಅಗತ್ಯ ದಾಖಲೆಯನ್ನೂ ನೀಡಿದ್ದರು ಆದರೆ ದಾಖಲೆ ಸಮರ್ಪಕವಾಗಿಲ್ಲ ಎಂಬ ಕಾರಣ ನೀಡಿ ಅನುಮತಿ ನಿರಾಕರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.