ಆಯುಕ್ತರಿಗೆ ಹೈಕೋರ್ಟ್ ನೋಟಿಸ್
Team Udayavani, Aug 8, 2017, 11:54 AM IST
ಬೆಂಗಳೂರು: ವಿಜಯನಗರ ಮೆಟ್ರೋ ನಿಲ್ದಾಣ ಮುಂಭಾಗದ ಫುಟ್ಪಾತ್ನಲ್ಲಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಿ, ವಾಹನ ನಿಲುಗಡೆಗೆ ಕಡಿವಾಣ ಹಾಕುವಂತೆ ನಿರ್ದೇಶಿಸಲು ಕೋರಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಸೋಮವಾರ ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.ಕೆ ಮುಖರ್ಜಿ ಹಾಗೂ ಪಿ.ಎಸ್ ದಿನೇಶ್ಕುಮಾರ್ ಅವರಿದ್ದ ವಿಭಾಗೀಯಪೀಠ, ಪ್ರತಿವಾದಿಗಳಾದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿತು.
ವಿಜಯನಗರ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಮೆಟ್ರೋ ನಿಲ್ದಾಣದ ಮುಂಭಾಗದ ಫುಟ್ಪಾತ್ ಒತ್ತುವರಿ ಮಾಡಿಕೊಂಡಿರುವ ಕೆಲ ವ್ಯಕ್ತಿಗಳು, ಬಟ್ಟೆ ಅಂಗಡಿ, ಹೋಟೆಲ್ ಸೇರಿದಂತೆ ಇನ್ನಿತರೆ 140 ಅಂಗಡಿಗಳನ್ನು ನಡೆಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಓಡಾಡಲು ಜಾಗವಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ. ಅಲ್ಲದೆ ಮೆಟ್ರೋ ರೈಲಿನ ಸಂಚಾರ ಅವಲಂಬಿಸಿರುವ ಬಹುತೇಕರು ಸರ್ವೀಸ್ ರಸ್ತೆಯಲ್ಲಿಯೇ ತಮ್ಮ ಬೈಕ್ ಹಾಗೂ ವಾಹನಗಳನ್ನು ನಿಲ್ಲಿಸುತ್ತಾರೆ.
ಕೆಲವು ಮನೆಗಳ ಮುಂದೆಯೂ ವಾಹನ ನಿಲ್ಲಿಸಿ ಹೋಗುತ್ತಿರುವುದರಿಂದ ಸ್ಥಳೀಯರಿಗೆ ಕಿರಿಕಿರಿ ಉಂಟಾಗುತ್ತಿದ್ದು, ಸಂಚಾರ ದಟ್ಟಣೆಗೂ ಕಾರಣವಾಗಿದೆ. ಹೀಗಾಗಿ, ಫುಟ್ಪಾತ್ ಮೇಲಿನ ಅಂಗಡಿಗಳನ್ನು ತೆರವುಗೊಳಿಸಲು ಬಿಬಿಎಂಪಿ ಹಾಗೂ ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಿ, ವಾಹನ ನಿಲುಗಡೆಗೆ ಸೂಕ್ತ ಸ್ಥಳ ನಿಗದಿ ಮಾಡಲು ಸಂಚಾರ ಪೊಲೀಸ್ ವಿಭಾಗಕ್ಕೆ ನಿರ್ದೇಶಿಸುವಂತೆ ಕೋರಿ ದೇಸಾಯಿ ಡಿ. ಹೇಮೇಶ್ ಬಾಬು ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.