ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Team Udayavani, Oct 17, 2018, 7:11 AM IST

z-29.jpg

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿಗದಿಪಡಿಸಿ ಸೆ.6ಕ್ಕೆ ಹೊರಡಿಸಿದ್ದ ಪರಿಷ್ಕೃತ ಅಧಿಸೂಚನೆಯನ್ನು ಹಿಂದಕ್ಕೆ ಪಡೆದಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾದ ತಕರಾರು ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿಗೊಳಿಸಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಗರಸಭೆಯ ನೂತನ ಸದಸ್ಯ ಆಲಂ ಬಾಷಾ ಸೇರಿ 20 ಮಂದಿ ಸದಸ್ಯರು ಸಲ್ಲಿಸಿದ್ದ ತಕರಾರು ಅರ್ಜಿ ಜತೆಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಇತರ ಏಳು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಎಸ್‌. ಸುಜಾತ ಅವರಿದ್ದ ರಜಾ ಕಾಲದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿ ಉಳಿದ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌
ಜಾರಿಗೊಳಿಸಿ ಆದೇಶಿಸಿತು. ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ 2018ರ ಸೆ.3ರಂದು ರಾಜ್ಯ ಸರ್ಕಾರ ಮೊದಲ ಅಧಿಸೂಚನೆ ಹೊರಡಿಸಿತ್ತು. ಬಳಿಕ ಆ ಅಧಿಸೂಚನೆಯನ್ನು ಮಾರ್ಪಾಡು ಗೊಳಿಸಿ ಸೆ.6ರಂದು ಪರಿಷ್ಕೃತ ಅಧಿಸೂಚನೆ ಹೊರಡಿಸಲಾಗಿತ್ತು. ಅದನ್ನು ಕೆಲವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಪರಿಷ್ಕೃತ
ಅಧಿಸೂಚನೆ ವಾಪಸ್‌ ಪಡೆದು ಅ.9ರಂದು ಅಧಿಸೂಚನೆ ಹೊರಡಿಸಿತ್ತು. ಇದೀಗ ಸೆ.6ರ ಪರಿಷ್ಕೃತ ಅಧಿಸೂಚನೆಯನ್ನು ವಾಪಸ್‌ ಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ನಿಗದಿಪಡಿಸಿ ಸೆ.3ರಂದು ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಕೆಲವೊಂದು ಲೋಪಗಳು ಇದ್ದ ಕಾರಣಕ್ಕೆ ಸರ್ಕಾರ ಅದನ್ನು ವಾಪಸ್‌ ಪಡೆದು ಸೆ.6ಕ್ಕೆ ಪರಿಷ್ಕೃತ ಅಧಿಸೂಚನೆ ಹೊರಡಿಸಿತು. ಆದರೆ, ಈಗ ಪರಿಷ್ಕೃತ ಅಧಿಸೂಚನೆ ವಾಪಸ್‌ ಪಡೆದು ಹಿಂದಿನ ಅಧಿಸೂಚನೆಯಂತೆ  ಮೀಸಲು ಪಟ್ಟಿ ಮುಂದುವರಿಸಲು ಸರ್ಕಾರ ಮುಂದಾಗಿದೆ. ಹಾಗಾಗಿ, ಲೋಪವಿರುವ ಪಟ್ಟಿಯಂತೆ ನಡೆದುಕೊಳ್ಳುವ ಮೂಲಕ ಸರ್ಕಾರ ಪುನಃ ತಪ್ಪು ಮಾಡುತ್ತಿದೆ. ಅಲ್ಲದೇ ಪರಿಷ್ಕೃತ ಅಧಿಸೂಚನೆ ವಾಪಸ್‌ ಪಡೆದುಕೊಳ್ಳುವಾಗ ಸಂಬಂಧಪಟ್ಟ
ಬಾಧಿತರ ಆಕ್ಷೇಪಣೆಗೆ ಅವಕಾಶ ಕೊಟ್ಟಿಲ್ಲ. ಆದ್ದರಿಂದ ಸೆ.6ರ ಪರಿಷ್ಕೃತ ಅಧಿಸೂಚನೆ ವಾಪಸ್‌ ಪಡೆದಿರುವ ಬಗ್ಗೆ ಅ.9ರಂದು ಹೊರಡಿಸಲಾದ ಅಧಿಸೂಚನೆ ರದ್ದುಗೊಳಿಸಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.  ಅರ್ಜಿದಾರರ ಪರ ವಕೀಲ ಎ. ಮಹ್ಮದ್‌ ತಾಹಿರ್‌ ವಾದ ಮಂಡಿಸಿದರು. 

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.