ಅಪ್ರಾಪ್ತರಿಗೂ ಮದ್ಯ ಮಾರಾಟ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌


Team Udayavani, Sep 15, 2017, 11:48 AM IST

highcourt.jpg

ಬೆಂಗಳೂರು: ರಾಜ್ಯದಲ್ಲಿ ನಿಯಮ ಉಲ್ಲಂಘಿಸಿ 21 ವರ್ಷಕ್ಕಿಂತ ಕಡಿಮೆ ವಯೋಮಾನದವರಿಗೂ ಮದ್ಯ ಮಾರಾಟ ಮಾಡುತ್ತಿದ್ದು ಈ ಸಂಬಂಧ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಿ ಕ್ರಮಕೈಗೊಳ್ಳಲು  ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ 17  ವರ್ಷದ ಯುವತಿಯೊಬ್ಬರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಈ  ಕುರಿತು ಬೆಂಗಳೂರಿನ ಲಯ ಸಜನ್‌ ಮರಿಯಂಡಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಕೆ ಮುಖರ್ಜಿ ಹಾಗೂ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ರಾಜ್ಯಸರ್ಕಾರ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ  ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ರಾಜ್ಯಸರ್ಕಾರ ಹಾಗೂ  ಅಬಕಾರಿ ಇಲಾಖೆ ಸೇರಿದಂತೆ ಸಕ್ಷಮ ಪ್ರಾಧಿಕಾರಗಳು ಕರ್ನಾಟಕ ಅಬಕಾರಿ ಕಾಯಿದೆ (1965) ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿಫ‌ಲವಾಗಿವೆ. ಇದರಿಂದ 21 ವರ್ಷಕ್ಕಿಂತ ಕಡಿಮೆ  ವಯೋಮಾನದವರಿಗೂ ಬಾರ್‌ ಅಂಡ್‌ ರೆಸ್ಟೋರೆಂಟ್‌ಗಳಲ್ಲಿ  ಮದ್ಯ, ಸೇರಿದಂತೆ ಇನ್ನಿತರೆ ಆಲ್ಕೋಹಾಲಿಕ್‌ ಪದಾರ್ಥಗಳನ್ನು  ಮಾರಾಟ ಮಾಡಲಾಗುತ್ತಿದೆ. ಇದರಿಂದ ಅಪ್ರಾಪ್ತರು ಮದ್ಯವ್ಯಸನಿಗಳಾಗುತ್ತಿರುವುದು ಗಣನೀಯವಾಗಿ  ಏರಿಕೆಯಾಗುತ್ತಿದೆ.

ಅಲ್ಲದೆ ಬಾರ್‌ ಅಂಡ್‌ ರೆಸ್ಟೊರೆಂಟ್‌ಗಳಿಗೆ  ಪರವಾನಿಗೆ ನೀಡುವಾಗ ಅಪ್ರಾಪ್ತರಿಗೆ ಮದ್ಯಮಾರಾಟ ಮಾಡುವುದನ್ನು ತಡೆಯುವ ಸಲುವಾಗಿ, ಮದ್ಯ ಕೊಂಡುಕೊಳ್ಳುವವರನ್ನು ಪರಿಶೀಲಿಸಿ ಮಾರಾಟ ಮಾಡಬೇಕು ಎಂಬ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡದಿರುವುದೇ ಇದಕ್ಕೆ ಕಾರಣವಾಗಿದೆ  ಎಂದು ಅರ್ಜಿದಾರರು ವಿವರಿಸಿದ್ದಾರೆ.

ಈ ನಿಟ್ಟಿನಲ್ಲಿ ಮದ್ಯಮಾರಾಟ ಮಾಡುವ ವೇಳೆ ವಯಸ್ಸಿನ ಪ್ರಮಾಣ ಪರಿಶೀಲಿಸಲು ಸೂಕ್ತ ಮಾರ್ಗಸೂಚಿಗಳನ್ನು ರಚಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಕರ್ನಾಟಕ ಅಬಕಾರಿ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಹಾಗೂ ಇದುವರೆಗೂ ಕಾಯಿದೆ ಉಲ್ಲಂಘನೆಯಾದ ಸಂಬಂಧ  21 ವರ್ಷಕ್ಕಿಂತ ಕಡಿಮೆ ವಯೋಮಾನದವರ ವಿರುದ್ಧ ದಾಖಲಾದ ಪ್ರಕರಣಗಳ ವರದಿಯನ್ನು ಸಲ್ಲಿಸುವಂತೆ  ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Auto Draft

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.