ಶಾಸಕ ಮುನಿರತ್ನಗೆ ಹೈಕೋರ್ಟ್ ನೋಟಿಸ್
Team Udayavani, Dec 15, 2018, 12:31 PM IST
ಬೆಂಗಳೂರು: ಬಿಬಿಎಂಪಿ ಕಾಮಗಾರಿಗಳ ಮಹತ್ವದ ಸರ್ಕಾರಿ ಕಡತಗಳು ಖಾಸಗಿ ಮನೆಯೊಂದರಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ಅವರಿಗೆ ಹೈಕೋರ್ಟ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ವಕೀಲ ಎನ್.ಪಿ.ಅಮೃತೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ, ನೋಟಿಸ್ ಜಾರಿಗೊಳಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಡಿ.15ಕ್ಕೆ ಮುಂದೂಡಿತು.
ಪ್ರಕರಣದ ದೋಷಾರೋಪ ಪಟ್ಟಿಯಿಂದ ಶಾಸಕ ಮುನಿರತ್ನ, ಅವರ ಪತ್ನಿ ಮಂಜುಳಾ ಹಾಗೂ ಚಿತ್ರ ನಿರ್ಮಾಪಕ ಸೂರಪ್ಪ ಬಾಬು ಅವರ ಹೆಸರುಗಳನ್ನು ಲೋಕಾಯುಕ್ತ ಪೊಲೀಸರು ಕೈಬಿಟ್ಟಿದ್ದರು. ಇದನ್ನು ಆಕ್ಷೇಪಿಸಿ ಅರ್ಜಿ ಸಲ್ಲಿಸಲಾಗಿದೆ. ವಿಚಾರಣೆ ವೇಳೆ “ಮುನಿರತ್ನ ಅವರ ಹೆಸರನ್ನು ದೋಷಾರೋಪ ಪಟ್ಟಿಯಿಂದ ಏಕೆ ಕೈಬಿಡಲಾಯಿತು’ ಎಂದು ಲೋಕಾಯುಕ್ತ ಪೊಲೀಸರನ್ನು ಪ್ರಶ್ನಿಸಿದ ನ್ಯಾಯಪೀಠ,
ಈ ಕುರಿತು ಪ್ರಮಾಣಪತ್ರದ ಮೂಲಕ ವಿವರಣೆ ಸಲ್ಲಿಸುವಂತೆ ನಿರ್ದೇಶಿಸಿತು. ಅಲ್ಲದೆ, ಅರ್ಜಿಯ ಮುಂದಿನ ವಿಚಾರಣೆವರೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯತ್ತಿರುವ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.
ಶಾಸಕ ಮುನಿರತ್ನ, ಪತ್ನಿ ಮಂಜುಳಾ ಹಾಗೂ ಸೂರಪ್ಪಬಾಬು ಅವರನ್ನೂ ಸಹ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಸೇರಿಸಬೇಕು ಎಂದು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ರದ್ದುಪಡಿಸುವಂತೆ ಕೋರಿ ಅಮೃತೇಶ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಏನಿದು ಪ್ರಕರಣ: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಂದಾಜು 120 ಕೋಟಿ ರೂ. ಮೊತ್ತದ ಸಿವಿಲ್ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬೋಗಸ್ ಬಿಲ್ ಸೃಷ್ಟಿಸಲು ಇದಕ್ಕೆ ಸೇರಿದ ಸಾವಿರಕ್ಕೂ ಹೆಚ್ಚು ಕಡತಗಳನ್ನು ಶಾಸಕ ಮುನಿರತ್ನ ಅವರಿಗೆ ಸೇರಿದ ವೈಯಾಲಿ ಕಾವಲ್‌ನ ಮನೆಯೊಂದಕ್ಕೆ ಸಾಗಿಸಲಾಗಿದೆ ಎಂದು ಆರೋಪಿಸಿ 2014ರ ಜ.26ರಂದು ವೈ.ಎಚ್.ಶ್ರೀನಿವಾಸ ಎಂಬುವವರು ದೂರು ಸಲ್ಲಿಸಿದ್ದರು.
ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, 2017ರಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ, ಇದರಲ್ಲಿ ಶಾಸಕ ಮುನಿರತ್ನ, ಪತ್ನಿ ಮಂಜುಳಾ ಹಾಗೂ ಚಿತ್ರ ನಿರ್ಮಾಪಕ ಸೂರಪ್ಪಬಾಬು ಅವರ ಹೆಸರು ಕೈಬಿಡಲಾಗಿತ್ತು. ಅದನ್ನು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.