3 ತಿಂಗಳಲ್ಲಿ ಸೂಕ್ತ ಆದೇಶ: ರೈಲ್ವೆ ಇಲಾಖೆಗೆ ಹೈಕೋರ್ಟ್ ಸೂಚನೆ
Team Udayavani, Oct 14, 2017, 6:45 AM IST
ಬೆಂಗಳೂರು: ಬೆಂಗಳೂರಿನಿಂದ ಕಾರವಾರಕ್ಕೆ ಶ್ರವಣಬೆಳಗೊಳದ ಮೂಲಕ ಪ್ರತ್ಯೇಕ ರೈಲು ಓಡಿಸುವ ಪ್ರಸ್ತಾವನೆಗೆ 3 ತಿಂಗಳಲ್ಲಿ ಸೂಕ್ತ ಆದೇಶ ಹೊರಡಿಸುವಂತೆ ಹೈಕೋರ್ಟ್ ಶುಕ್ರವಾರ ರೈಲ್ವೆ ಮಂಡಳಿಗೆ ನಿರ್ದೇಶನ ನೀಡಿದೆ.
ಹೊಸದಾಗಿ ನಿರ್ಮಾಣಗೊಂಡಿರುವ ಕುಣಿಗಲ್ ರೈಲು ಮಾರ್ಗಕ್ಕೆ ಬೆಂಗಳೂರು-ಕಾರವಾರ ನಡುವೆ ಪ್ರತಿದಿನ ಸಂಚರಿಸುವ ಎಕ್ಸ್‌ಪ್ರೆಸ್ ರೈಲು ಮಾರ್ಗವನ್ನು ಬದಲಿಸಲು ನೈರುತ್ಯ ರೈಲ್ವೆ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಸಂಜಯ್ ರೇವಣಕರ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.
ಹಾಸನ-ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ಮಾರ್ಗದಲ್ಲಿ ಘಟ್ಟಪ್ರದೇಶಗಳು ಹೆಚ್ಚಾಗಿದ್ದು, ಈ ಮಾರ್ಗವು ಉತ್ತಮ ಸಾಮರ್ಥ್ಯ ಹೊಂದಿಲ್ಲ. ಆದ್ದರಿಂದ ಬೆಂಗಳೂರು-ಕಾರವಾರ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲನ್ನು ಕುಣಿಗಲ್ ರೈಲು ಮಾರ್ಗಕ್ಕೆ ಬದಲಿಸಲು ಸಾಧ್ಯವಿಲ್ಲ. ಒಂದು ವೇಳೆ ಮಾರ್ಗ ಬದಲಿಸಿದ್ದೇ ಆದರೆ, ಮೈಸೂರು, ರಾಮನಗರ, ಮಂಡ್ಯ ಭಾಗದ ಜನರಿಗೆ ಮಂಗಳೂರು ರೈಲು ಸಂಪರ್ಕ ಕಷ್ಟವಾಗಲಿದೆ ಎಂದು ಅ.11ರಂದು ನೈರುತ್ಯ ರೈಲ್ವೆ ಮಂಡಳಿ ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿತ್ತು. ನ್ಯಾಯಾಲಯವು ಕೂಡ ಇದನ್ನು ಒಪ್ಪಿತ್ತು. ಆದರೂ ಅರ್ಜಿದಾರರ ಮನವಿಯನ್ನು ಮತ್ತೂಮ್ಮೆ ಪರಿಶೀಲಿಸಿ ನಿಲುವು ತಿಳಿಸುವಂತೆ ಸೂಚನೆ ನೀಡಿದ್ದ ಹೈಕೋರ್ಟ್, ವಿಚಾರಣೆ ಮುಂದೂಡಿತ್ತು.
ಶುಕ್ರವಾರ ಪುನಃ ಅರ್ಜಿ ವಿಚಾರಣೆಗೆ ಬಂದಿದ್ದು, ಬೆಂಗಳೂರು-ಕಣ್ಣೂರು ನಡುವೆ ಪ್ರತಿನಿತ್ಯ ಸಂಚರಿಸುವ ರೈಲನ್ನು ಕುಣಿಗಲ್ ಮಾರ್ಗವಾಗಿ ವಾರಕ್ಕೆ ನಾಲ್ಕು ದಿನ ಓಡಿಸಲು ನೈರುತ್ಯ ರೈಲ್ವೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ರೈಲ್ವೆ ಮಂಡಳಿ ಅ.11ರಂದು ಒಪ್ಪಿತ್ತು. ಈ ವಿಚಾರವನ್ನು ಶುಕ್ರವಾರ ವಿಚಾರಣೆ ವೇಳೆ ಹೈಕೋರ್ಟ್ ಗಮನಕ್ಕೆ ತರಲಾಯಿತು.
ಈ ಹಿನ್ನೆಲೆಯಲ್ಲಿ ಅರ್ಜಿದಾರರು ಕುಣಿಗಲ್ ಮಾರ್ಗವಾಗಿ ಬೆಂಗಳೂರು-ಮಂಗಳೂರುಗೆ ಪ್ರತ್ಯೇಕ ರೈಲು ಓಡಿಸುವ ವಿಚಾರದಲ್ಲಿ ಮಾರ್ಗ ನಕ್ಷೆಯೊಂದನ್ನು ಸಿದ್ಧಪಡಿಸಬೇಕು. ಅದರೊಂದಿಗೆ ಈ ವಿಚಾರದಲ್ಲಿ ಇಲ್ಲಿಯವರೆಗೂ ನಡೆದ ಎಲ್ಲ ಬೆಳವಣಿಗಳ ಮಾಹಿತಿ ಹಾಗೂ ದಾಖಲೆಗಳನ್ನು ರೈಲ್ವೆ ಮಂಡಳಿಗೆ ಮನವಿ ಪತ್ರ ಸಲ್ಲಿಸಬೇಕು. ರೈಲ್ವೆ ಮಂಡಳಿ ಆ ಮನವಿ ಸ್ವೀಕರಿಸಿ ಮೂರು ತಿಂಗಳಲ್ಲಿ ಅರ್ಜಿದಾರರ ಅಹವಾಲು ಆಲಿಸಿ ಸೂಕ್ತ ಆದೇಶ ಹೊರಡಿಸಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಅರ್ಜಿ ಇತ್ಯರ್ಥಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್ ಡಿನ್ನರ್‌ಗೆ ಹೈ ಕಮಾಂಡ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.