ಲಿಖೀತ ಉತ್ತರ ನೀಡಲು ಹೈಕೋರ್ಟ್‌ ಸೂಚನೆ


Team Udayavani, Nov 3, 2017, 12:45 PM IST

highcourt2.jpg

ಬೆಂಗಳೂರು: ಸಾರ್ವಜನಿಕರ ಕುಂದು-ಕೊರತೆ ಅಹವಾಲುಗಳಿಗೆ ರಾಜ್ಯ ಸರ್ಕಾರ ಇನ್ಮುಂದೆ ಲಿಖೀತ ಉತ್ತರ ನೀಡಬೇಕು ಎಂದು ಹೈಕೋರ್ಟ್‌ ತಿಳಿಸಿದೆ. ಗುರುವಾರ ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಈ ಕುರಿತು ಸೂಚನೆ ನೀಡಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ. ರಮೇಶ್‌ ನೇತೃತ್ವದ ವಿಭಾಗೀಯ ಪೀಠ, ಸಾರ್ವಜನಿಕರು ತಮ್ಮ ಕುಂದು-ಕೊರತೆಗಳಿಗೆ ಪರಿಹಾರ ಕೋರಿ ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸುವ ಸಂಬಂಧ ರಾಜ್ಯ ಸರ್ಕಾರ ಇನ್ನು ಮುಂದೆ ಲಿಖೀತ ಉತ್ತರ ನೀಡಬೇಕೇ ಹೊರತು ಮೌಖೀಕವಾಗಿ ತಿಳಿಸಬಾರದು ಎಂದು ಅಭಿಪ್ರಾಯಪಟ್ಟಿತು.

ಮಡಿಕೇರಿಯ ಕೊನ್ನಂಜಗೇರಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಕ್ಕದಲ್ಲಿಯೇ ನಿರ್ಮಾಣಗೊಂಡಿರುವ ಮದ್ಯದಂಗಡಿಗೆ ಪರವಾನಗಿ ನೀಡದಿರಲು ಕೊಡಗು ಜಿಲ್ಲಾಧಿಕಾರಿ ಮತ್ತು ಅಬಕಾರಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಎ.ಎಂ.ಪೂವಯ್ಯ ಹಾಗೂ ಇತರೆ ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ನೇತೃತ್ವದ ವಿಭಾಗೀಯಪೀಠ ನಡೆಸಿತು.

ಅರ್ಜಿ ಪರಿಗಣಿಸಿಲ್ಲ:ವಿಚಾರಣೆ ವೇಳೆ ಕೊನ್ನಂಜಗೇರಿ ಗ್ರಾಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ 60 ಮೀಟರ್‌ ಅಂತರದಲ್ಲೇ ಬಿ.ಸಿ.ಸೋಮಯ್ಯ  ಎಂಬುವರು ಮದ್ಯದಂಗಡಿ ತೆರೆದಿದ್ದಾರೆ. ಮದ್ಯ ಮಾರಾಟ ಪರವಾನಗಿ ಕೋರಿ ಅವರು ಅಬಕಾರಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ. ಶಾಲೆಯ ಪಕ್ಕದಲ್ಲಿ ಮದ್ಯದಂಗಡಿ ತೆರೆಯವುದು ಕಾನೂನು ಬಾಹಿರ.

ಆದ್ದರಿಂದ ಪರವಾನಗಿ ನೀಡದಂತೆ ಅರ್ಜಿದಾರರು ಕೊಡಗು ಜಿಲ್ಲಾಧಿಕಾರಿ ಮತ್ತು ಅಬಕಾರಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದು, ಈವರೆಗೆ ಪರಿಗಣಿಸಿಲ್ಲ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು. ಈ ವೇಳೆ ಸರ್ಕಾರಿ ವಕೀಲರು, ಈವರೆಗೂ ಮದ್ಯದಂಗಡಿಗೆ ಪರವಾನಗಿ ನೀಡಿಲ್ಲ. ಶೀಘ್ರ ಅರ್ಜಿದಾರರ ಮನವಿಯನ್ನು ಪರಿಶೀಲಿಸಲಾಗುವುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಸರ್ಕಾರವು ಅರ್ಜಿದಾರರ ಪರವಾನಗಿಯನ್ನು ಯಾವಾಗ ಪರಿಗಣಿಸುತ್ತೀರಾ?

ಎಂಬುದನ್ನು ಖಚಿತವಾಗಿ ತಿಳಿಸಿ ಅದಕ್ಕೆ ಹಿಂಬರಹವನ್ನೂ ನೀಡಬೇಕು. ಮೌಖೀಕವಾಗಿ ಪರಿಗಣಿಸಲಾಗುವುದು ಎಂದರೆ ಸಾಲದು ಎಂದು ಹೇಳುತ್ತಾ,  ಸಾರ್ವಜನಿಕರು ತಮ್ಮ ಕುಂದು ಕೊರತೆಗಳ ಪರಿಹಾರ ಕೋರಿ ಸಲ್ಲಿಸುವ ಅಹವಾಲುಗಳನ್ನು ಪರಿಗಣಿಸುವ ಬಗ್ಗೆ ಸರ್ಕಾರವು ಇನ್ನು ಮುಂದೆ ಲಖೀತವಾಗಿ ಉತ್ತರಿಸಬೇಕು. ಆ ಬಗ್ಗೆ ಹಿಂಬರಹ ನೀಡಬೇಕು ಎಂದು ಸರ್ಕಾರಿ ವಕೀಲರಿಗೆ ಸೂಚಿಸಿ ವಿಚಾರಣೆ ಡಿ.5ಕ್ಕೆ ಮುಂದೂಡಿತು.

ಟಾಪ್ ನ್ಯೂಸ್

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2(1)

Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.