ವಿದ್ಯುತ್ ಉತ್ಪಾದಕ ಕಂಪನಿಗಳಿಗೆ ಸಕಾಲದಲ್ಲಿ ಹಣ ಪಾವತಿಸಿ: ಹೈ-ಕೋರ್ಟ್ ಸೂಚನೆ
Team Udayavani, Dec 13, 2021, 10:31 AM IST
ಬೆಂಗಳೂರು: ರಾಜ್ಯ ಸರ್ಕಾರ ಸ್ವಾಮ್ಯದ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ವಿದ್ಯುತ್ ಉತ್ಪಾದಕ ಕಂಪನಿಗಳ ಸದ್ಯದ ಬಾಕಿಯನ್ನು ಶೀಘ್ರ ಪಾವತಿಸಬೇಕು ಎಂದು ಆದೇಶಿಸಿರುವ ಹೈಕೋರ್ಟ್, ಇನ್ನು ಮುಂದೆ ಉತ್ಪಾದಕ ಕಂಪನಿಗಳಿಗೆ ಎಸ್ಕಾಂಗಳ ನಿಯಮಿತವಾಗಿ ಮತ್ತ ಸಕಾಲದಲ್ಲಿ ಹಣ ಪಾವತಿಸಬೇಕು ಎಂದು ಸೂಚಿಸಿದೆ.
ಹೆಸ್ಕಾಂ ಮತ್ತು ಜೆಸ್ಕಾಂ ಕಂಪನಿಗಳು ಸುಮಾರು 250 ಕೋಟಿ ರೂ. ಹಣ ಬಾಕಿ ಉಳಿಸಿಕೊಂಡಿವೆ ಎಂದು ರಿನೀವ್ ಪವರ್ ಲಿಮಿಟೆಡ್ ಮತ್ತು ಇತರೆ ಖಾಸಗಿ ಕಂಪನಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಸಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಎಲ್ಲ ಎಸ್ಕಾಂಗಳು ತಮ್ಮ ಬಾಧ್ಯತೆಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ, ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಸಕಾಲದಲ್ಲಿ ಬಾಕಿ ಪಾವತಿಸದಿರುವುದು ಸರಿಯಲ್ಲ .
ಇನ್ನು ಮುಂದೆ ವಿದ್ಯುತ್ ಖರೀದಿ ಒಪ್ಪಂದ (ಪಿಪಿಎ) ಪ್ರಕಾರ ಪ್ರತಿ ತಿಂಗಳು ಎಸ್ಕಾಂಗಳು ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಖರೀದಿ ಮಾಡಿರುವ ವಿದ್ಯುತ್‌ನ ಬಿಲ್ ಪಾವತಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಇದನ್ನೂ ಓದಿ;- ರಸ್ಸೆಲ್ ವೈಫರ್ – ಹಾವಿನ ಮರಿಗಳ ರಕ್ಷಣೆ
ವಿದ್ಯುತ್ ಸರಬರಾಜು ಕಂಪನಿಗಳು ಪಿಪಿಎ ಅನ್ವಯ ತಮ್ಮ ಕರ್ತವ್ಯ, ಹಕ್ಕು ಮತ್ತು ಬಾಧ್ಯತೆಗಳನ್ನು ನಿರ್ವಹಿಸಬೇಕು ಎಂದು ಹೇಳಿರುವ ನ್ಯಾಯಪೀಠ, ಹುಬ್ಬಳ್ಳಿ ವಿದ್ಯುತ್ ಪೂರೈಕೆ ಕಂಪನಿ ನಿಯಮತಿ (ಹೆಸ್ಕಾಂ) ಮತ್ತು ಗುಲ್ಬರ್ಗಾ ವಿದ್ಯುತ್ ಪೂರೈಕೆ ಕಂಪನಿ (ಜೆಸ್ಕಾಂ) ಪವನ ಮತ್ತು ಸೌರಶಕ್ತಿ ಖರೀದಿಸಿ ಅದಕ್ಕೆ ಸಕಾಲದಲ್ಲಿ ಹಣ ಪಾವತಿ ಮಾಡುವಲ್ಲಿ ನಿರಂತರವಾಗಿ ವಿಫಲವಾಗಿದೆ ಎಂದು ಹೇಳಿದೆ.
ಕೇಂದ್ರ ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯ ಏಪ್ರಿಲ್ 2020ರಲ್ಲಿ ಎಲ್ಲ ಎಸ್ಕಾಂಗಳು ವಿದ್ಯುತ್ ಉತ್ಪಾದನಾ ಕಂಪನಿಗಳಿಗೆ ಉಳಿಸಿಕೊಂಡಿರುವ ಬಾಕಿ ಹಣವನ್ನು ಪಾವತಿಸುವಂತೆ ಸೂಚಿಸಿದ್ದರೂ ಸಹ ಜೆಸ್ಕಾಂ ಮತ್ತು ಹೆಸ್ಕಾಂ ಪಾವತಿ ಮಾಡಿಲ್ಲ ಎಂದು ಅರ್ಜಿದಾರ ಕಂಪನಿಗಳು ವಾದಿಸಿದ್ದವು.
ಆದರೆ, ಪಿಪಿಎ ಒಪಂದದನ್ವಯ ಹಣ ಪಾವತಿಸದಿರುವುದರ ವಿರುದ್ಧ ಮೊದಲು ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಬೇಕಿತ್ತು. ಆದರೆ ಕಂಪನಿಗಳು ಏಕಾಏಕಿ ಕೋರ್ಟ್ ಮೆಟ್ಟಿಲೇರಿರುವುದು ಸರಿಯಲ್ಲ ಎಂದು ಎಸ್ಕಾಂಗಳು ವಾದಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.