ಠಾಕೂರ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಹೈ ತಡೆ
Team Udayavani, May 26, 2017, 12:18 PM IST
ಬೆಂಗಳೂರು: ಬೆಂಗಳೂರು ಮೆಟ್ರೋಪಾಲಿಟನ್ ಕಾರ್ಯಪಡೆಯ (ಬಿಎಂಟಿಎಫ್) ಎಡಿಜಿಪಿ ಹುದ್ದೆಯಿಂದ ಐಪಿಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ವರ್ಗಾವಣೆ ಮಾಡಿದ್ದ ರಾಜ್ಯಸರ್ಕಾರದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.
ಜನವರಿ 2ರಂದು ಬಿಎಂಟಿಎಫ್ ಎಡಿಜಿಪಿಯಾಗಿ ನೇಮಕಗೊಂಡಿದ್ದ ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಮಾರ್ಚ್ 23ರಂದು ಬೆಂಗಳೂರಿನ ಅರಣ್ಯ ಘಟಕ ಕಾರ್ಯಪಡೆಯ ಎಡಿಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿತ್ತು. ಹೀಗಾಗಿ ಅವಧಿಗೂ ಮುನ್ನವೇ ತಮ್ಮನ್ನು ವರ್ಗಾವಣೆಗೊಳಿಸಿರುವ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದ್ದು ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಶಾಂತ್ ಠಾಕೂರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ನ್ಯಾಯಮೂರ್ತಿ ರವಿ ಮಳೀಮಠ ಮತ್ತು ನ್ಯಾ.ಜಾನ್ ಮೈಕಲ್ ಕುನ್ಹಾ, ಅವರಿದ್ದ ರಜಾಕಾಲದ ವಿಭಾಗೀಯ ಪೀಠ, ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ವರ್ಗಾವಣೆಗೊಳಿಸಿದ್ದ ರಾಜ್ಯಸರ್ಕಾರ ಆದೇಶಕ್ಕೆ ತಡೆಯಾಜ್ಞೆ ನೀಡಿ ಬಿಎಂಟಿಎಫ್ ಎಡಿಜಿಪಿಯಾಗಿ ಮುಂದುವರೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಜೊತೆಗೆ ಪ್ರಶಾಂತ್ ಕುಮಾರ್ ಜಾಗಕ್ಕೆ ವರ್ಗಾವಣೆಯಾಗಿದ್ದ ಆರ್.ಪಿ.ಶರ್ಮಾ ಅವರು ಈ ಹಿಂದೆ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಎಡಿಜಿಪಿ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹುದ್ದೆಯಲ್ಲಿಯೇ ಮುಂದುವರಿಯಲಿ ಎಂದು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.