ಗುಂಡಿ ಮುಚ್ಚದ ಪಾಲಿಕೆಗೆ ಮತ್ತೆ ಮತ್ತೆ ತರಾಟೆ

Team Udayavani, Jun 1, 2022, 2:53 PM IST

ಗುಂಡಿ ಮುಚ್ಚದ ಪಾಲಿಕೆಗೆ ಮತ್ತೆ ಮತ್ತೆ ತರಾಟೆ

ಬೆಂಗಳೂರು: ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಬಿಬಿಎಂಪಿಯನ್ನು ಮತ್ತೂಮ್ಮೆತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸುವ ಎಚ್ಚರಿಕೆ ನೀಡಿದೆ.

ನಗರದ ವ್ಯಾಪ್ತಿಯಲ್ಲಿ ರಸ್ತೆಗುಂಡಿ ಮುಚ್ಚಲು ಸರ್ಕಾರಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡುವಂತೆ ಕೋರಿ ವಿಜಯನ್‌ ಮೆನನ್‌ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯ ಮೂರ್ತಿ ರಿತುರಾಜ್‌ ಅವಸ್ಥಿನೇತೃತ್ವದ ವಿಭಾಗೀಯ ನ್ಯಾಯಪೀಠಪಾಲಿಕೆಯ ಕಾರ್ಯವೈಖರಿಗೆ ಕಟುಮಾತುಗಳಲ್ಲಿ ತರಾಟೆಗೆ ತೆಗೆದುಕೊಂಡಿತು.

ವಿಚಾರಣೆ ವೇಳೆ ಪಾಲಿಕೆ ಪರ ವಕೀಲರು, ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು.ಪ್ರಕರಣ ಕುರಿತು ಹೈಕೋರ್ಟ್‌ ಈ ಹಿಂದೆನೀಡಿರುವ ನಿರ್ದೇಶನಗಳ ಅನುಪಾಲನಾ ವರದಿಸಲ್ಲಿಸಲು ಎರಡು ದಿನ ಕಾಲಾವಕಾಶ ನೀಡಬೇಕು ಎಂದರು.

ಆಗ ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್‌, ನಿಮ್ಮ ಸಮಸ್ಯೆಏನಾದರೂ ಇರಬಹುದು. ಅದು ನ್ಯಾಯಾಲಯಕ್ಕೆ ಬೇಕಿಲ್ಲ. ರಸ್ತೆ ರಿಪೇರಿಯಾಗಬೇಕಷ್ಟೆ.ನ್ಯಾಯಾಲಯದ ಆದೇಶಗಳನ್ನು ಬಿಬಿಎಂಪಿ ಪಾಲಿಸುತ್ತಿಲ್ಲ. ಜೂನ್‌ 2ರಿಂದ ಮುಂಗಾರುರಾಜ್ಯಕ್ಕೆಪ್ರವೇಶಿಸಲಿದೆ ಎನ್ನಲಾಗುತ್ತಿದ್ದರೂ ಯಾವುದೇಕೆಲಸವಾಗಿಲ್ಲ. ಈಗ ನೋಡಿದರೆ ಕಚೇರಿಯಲ್ಲಿ ಹೊಡೆದಾಡುತ್ತಿದ್ದೀರಿ. ಪಾಲಿಕೆಸೂಕ್ತ ಪರಿಹಾರಗಳೊಂದಿಗೆ ಬರಬೇಕು. ತಪ್ಪಿದರೆ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲಾಗುವುದು. ಬಿಬಿಎಂಪಿಯನೂತನ ಮುಖ್ಯ ಆಯುಕ್ತರು ಉತ್ಸಾಹಿಯಾಗಿದ್ದು,ಕೆಲಸ ಮಾಡಲು ಅವರಿಗೆ ತಿಳಿಸಿ ಎಂದು ತೀಕ್ಷ್ಣವಾಗಿ ಹೇಳಿತು.

ಪ್ರತಿ ಗಂಟೆಗೆ ಎಷ್ಟು ಹಣ ಪಾವತಿ? :  ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಬಳಸಲಾಗುತ್ತಿರುವ ಪೈಥಾನ್‌ ಯಂತ್ರಕ್ಕೆ ಪ್ರತಿ ಗಂಟೆಗೆ ಎಷ್ಟು ಹಣ ಪಾವತಿಸಲಾಗುತ್ತದೆ ಎಂಬಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಿ ಜೂ.6ರಂದು ವರದಿಸಲ್ಲಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತತುಷಾರ್‌ ಗಿರಿನಾಥ್‌ ಅವರಿಗೆ ನ್ಯಾಯಪೀಠ ಇದೇ ವೇಳೆ ನಿರ್ದೇಶನ ನೀಡಿತು.

ವಿಚಾರಣೆ ವೇಳೆಬಿಬಿಎಂಪಿ ಪರ ವಕೀಲರು ಹಾಜರಾಗಿ, ಬಿಬಿಎಂಪಿಮುಖ್ಯ ಆಯುಕ್ತರು ಪೈಥಾನ್‌ ಯಂತ್ರಕ್ಕೆ ಪ್ರತಿಗಂಟೆಗೆ ಎಷ್ಟು ಹಣ ಪಾವತಿಸಲಾಗುತ್ತದೆ ಎಂಬ ಬಗ್ಗೆ ವೈಯಕ್ತಿಕವಾಗಿ ಪರಿಶೀಲನೆ ನಡೆಸಿನಿರ್ಧರಿಸಲು ಉದ್ದೇಶಿಸಿದ್ದಾರೆ. ಅಲ್ಲದೆ, ಫೈಥಾನ್‌ ಯಂತ್ರಬಳಸಿ ಗುಂಡಿ ಮುಚ್ಚುವ ಕಾರ್ಯದ ಗುತ್ತಿಗೆ ಪಡೆದಿರುವ ಅಮೆರಿಕ್‌ ರೋಡ್‌ ಟೆಕ್ನಾಲಜೀಸ್‌ ಸಲ್ಯೂಷನ್ಸ್‌ಗೆ (ಎಆರ್‌ಟಿಸಿ) ಬಾಕಿ ಹಣ ಪಾವತಿಸುವುದಕ್ಕೂ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಕಾಲಾವಕಾಶ ನೀಡಬೇಕು ಎಂಬ ಕೋರಿದರು. ಆ ಮನವಿ ಒಪ್ಪಿ ಜೂನ್‌ 6ಕ್ಕೆ ಅರ್ಜಿ ವಿಚಾರಣೆ ಮುಂದೂಡಿದನ್ಯಾಯಪೀಠ, ಅಂದು ವರದಿ ಸಲ್ಲಿಸಬೇಕು ಎಂದು ಪಾಲಿಕೆಯ ಮುಖ್ಯ ಆಯುಕ್ತರಿಗೆ ಸೂಚಿಸಿತು.

10,608 ಪೈಕಿ 4,524 ಗುಂಡಿ ಮಾತ್ರ ದುರಸ್ತಿ :

ಬೆಂಗಳೂರು: ನಗರದಲ್ಲಿನ 10,608 ಗುಂಡಿಗಳ ಪೈಕಿ ಈವರೆಗೆ ಕೇವಲ 4,524 ಗುಂಡಿಗಳನ್ನು ಮಾತ್ರ ಮುಚ್ಚಲಾಗಿದೆ. ಬಿಬಿಎಂಪಿ ಕಳೆದ 20 ದಿನಗಳಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ. ಆದರೆ, ಫಿಕ್ಸ್‌ ಮೈಸ್ಟ್ರೀಟ್‌ ಆ್ಯಪ್‌ ಮೂಲಕ ಗುರುತಿಸಲಾದ ಗುಂಡಿಗಳಪೈಕಿ ಶೇ. 50ನ್ನು ಈವರೆಗೆ ಮುಚ್ಚಿಲ್ಲ. ಆ ಮೂಲಕಈ ಬಾರಿಯ ಮಳೆಗಾಲದಲ್ಲೂ ವಾಹನ ಸವಾರರು ರಸ್ತೆ ಗುಂಡಿಗಳಲ್ಲಿ ಮುಳುಗೇಳಬೇಕಾದ ಪರಿಸ್ಥಿತಿ ಎದುರಾಗಲಿದೆ.

ಮೇ 9ರಂದು ಫಿಕ್ಸ್ ಮೈ ಸ್ಟ್ರೀಟ್‌ ಆ್ಯಪ್‌ ಅಭಿವೃದ್ಧಿಪಡಿಸಿದ್ದ ಅಧಿಕಾರಿಗಳು ನಗರದೆಲ್ಲೆಡೆಸಮೀಕ್ಷೆ ನಡೆಸಿ ಮೇ 24ರ ವೇಳೆಗೆ 10,608 ರಸ್ತೆ ಗುಂಡಿಗಳು ಗುರುತಿಸಲಾಗಿತ್ತು. ಆ ಗುಂಡಿಗಳನ್ನೆಲ್ಲ ಮೇ ತಿಂಗಳಾಂತ್ಯದೊಳಗೆ ಮುಚ್ಚಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದರು. ಆದರೆ, ಅದಕ್ಕೆ ತಕ್ಕಂತೆ ಗುಂಡಿಗಳು ಈವರೆಗೆ ಮುಚ್ಚಿಲ್ಲ. ಫಿಕ್ಸ್‌ ಮೈ ಸ್ಟ್ರೀಟ್‌ ಆ್ಯಪ್‌ ಮೂಲಕ ಗುರುತಿಸಲಾದ ರಸ್ತೆ ಗುಂಡಿಗಳನ್ನು ಮೊದಲ ಹಂತದಲ್ಲಿಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅದಕ್ಕೆಬೇಕಾಗುವ ವೆಟ್‌ಮಿಕ್ಸ್‌ ಮತ್ತು ಹಾಟ್‌ಮಿಕ್ಸ್‌ ಪ್ರಮಾಣವನ್ನು ವಲಯ ಮುಖ್ಯ ಎಂಜಿನಿಯರ್‌ಗೆ ಕಳುಹಿಸಬೇಕು. ವಲಯದ ಎಲ್ಲ ಭಾಗಗಳಿಂದ ಬರುವ ಮಾಹಿತಿ ಆಧರಿಸಿ ಅಗತ್ಯ ಸಾಮಗ್ರಿ ತರಿಸಿಕೊಂಡು ಗುಂಡಿ ಮುಚ್ಚಲಾಗುತ್ತಿದೆ.

ಅದರ ಜತೆಗೆ ಸಂಚಾರ ದಟ್ಟಣೆಯನ್ನು ನೋಡಿಕೊಂಡು ರಸ್ತೆ ಗುಂಡಿ ಮುಚ್ಚಬೇಕಿದೆ. ಈ ಎಲ್ಲದರಿಂದ ಗುಂಡಿಮುಚ್ಚುವ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿಸದ್ಯ 4,524 ರಸ್ಯೆ ಗುಂಡಿಗಳನ್ನು ಮುಚ್ಚಲಾಗಿದ್ದು, ಇನ್ನೂ 6,084 ರಸ್ತೆ ಗುಂಡಿ ದುರಸ್ತಿಪಡಿಸಬೇಕಿದೆ.

ವಾರದಲ್ಲಿ ಪೂರ್ಣ: ರಸ್ತೆ ಗುಂಡಿ ಮುಚ್ಚುವ ಕಾರ್ಯಕ್ಕೆ ವೇಗ ನೀಡಲಾಗಿದೆ. ಇನ್ನೊಂದುವಾರದಲ್ಲಿ ರಸ್ತೆ ಗುಂಡಿ ಮುಚ್ಚವ ಕಾರ್ಯಪೂರ್ಣಗೊಳಿಸಲಾಗುವುದು ಎಂದು ಪಾಲಿಕೆ ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.