ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ
Team Udayavani, Oct 27, 2017, 11:03 AM IST
ಬೆಂಗಳೂರು: ಜಡ್ಡುಗಟ್ಟಿದ ಆಡಳಿತ ವ್ಯವಸ್ಥೆ ಮತ್ತು ಸರ್ಕಾರಿ ಅಧಿಕಾರಿಗಳ ಅದಕ್ಷತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಸ್.ಜಿ.ರಮೇಶ್, ಪರಿಸ್ಥಿತಿ ಸುಧಾರಿಸಿಕೊಳ್ಳಿ. ಇಲ್ಲದಿದ್ದರೆ ನ್ಯಾಯಾಲಯವೇ ಸೂಕ್ತ ಪಾಠ ಕಲಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಮೌಖೀಕ ಎಚ್ಚರಿಕೆ ನೀಡಿದ ಪ್ರಸಂಗ ಗುರುವಾರ ನಡೆಯಿತು.
ಪ್ರಕರಣವೊಂದರ ವಿಚಾರಣೆ ವೇಳೆ ಹೈಕೋರ್ಟ್ ಹಂಗಾಮಿ ಮುಖ್ಯ ನಾಯಮೂರ್ತಿ ಎಚ್.ಜಿ.ರಮೇಶ್ ಅವರು, ಗುರುವಾರ ರಾಜ್ಯ ಸರ್ಕಾರದ ಆಡಳಿತ ಯಂತ್ರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನ್ಯೂಟ್ರಿಲೆಟ್ ಎಂಬ ಉತ್ಪನ್ನವನ್ನು ವ್ಯಾಟ್ ವ್ಯಾಪ್ತಿಗೆ ತಂದು, ತೆರಿಗೆ ಪಾವತಿಸಲು ವಾಣಿಜ್ಯ ತೆರಿಗೆ ಆಯುಕ್ತರು 2016ರಲ್ಲಿ ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ಮೆರ್ಸಸ್ ಪೈನೀಯರ್ ಮಾರ್ಕೆಟಿಂಗ್ ಕಂಪನಿ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿತ್ತು.
ಆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಏಕಸದಸ್ಯ ಪೀಠ, ವಾಣಿಜ್ಯ ತೆರಿಗೆ ಆಯುಕ್ತರ ಆದೇಶ ರದ್ದುಪಡಿಸಿ 2016ರ ಮಾರ್ಚ್ 22ರಂದು ತೀರ್ಪು ನೀಡಿತ್ತು. ಈ ಆದೇಶ ವಿರುದ್ಧ 2017ರ ಜುಲೈ 26ರಂದು ರಾಜ್ಯ ಸರ್ಕಾರ, ವಿಭಾಗೀಯ ಪೀಠಕ್ಕೆ ವಿಳಂಬವಾಗಿ ಮೇಲ್ಮನವಿ ಸಲ್ಲಿಸಿತ್ತು.
ಹಂಗಾಮಿ ಮುಖ್ಯ ನ್ಯಾ.ಎಚ್.ಜಿ. ರಮೇಶ್ ಮತ್ತು ನ್ಯಾ.ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಗುರುವಾರ ಅರ್ಜಿಯು ವಿಚಾರಣೆಗೆ ಬಂದಿತ್ತು. ಆದರೆ, ಸರ್ಕಾರವು ಇಷ್ಟು ವಿಳಂಬವಾಗಿ ಮೇಲ್ಮನವಿ ಸಲ್ಲಿಸಲು ಕೋರ್ಟ್‌ಗೆ ಸಕಾರಣವನ್ನು ನೀಡಲಿಲ್ಲ.
ಇದರಿಂದ ಕೋಪಗೊಂಡ ಮುಖ್ಯ ನ್ಯಾ. ಎಚ್.ಜಿ. ರಮೇಶ್ ಅವರು, ಏನ್ರೀ ಏಕಸದಸ್ಯ ಪೀಠದ ಆದೇಶ ಹೊರಬಿದ್ದು 460 ದಿನಗಳ ನಂತರ ಮೇಲ್ಮನವಿ ಸಲ್ಲಿಸುತ್ತೀರಾ? ಏಕೆ ಇಷ್ಟು ವಿಳಂಬ ಮಾಡಿದ್ದೀರಾ? ಸರ್ಕಾರದ ವಿರುದ್ಧ ಆದೇಶ ಬಂದಾಗ ಕೂಡಲೇ ಎಚ್ಚೆತ್ತುಕೊಂಡು ಮೇಲ್ಮನವಿ ಸಲ್ಲಿಸಲು ಅಧಿಕಾರಿಗಳು ಏಕೆ ಗಮನ ಹರಿಸಲಿಲ್ಲ? 460 ದಿನ ಸರ್ಕಾರಿ ಅಧಿಕಾರಿಗಳು ಏನು ಮಾಡುತ್ತಿದ್ದರು? ಎಂದು ಸರ್ಕಾರಿ ವಕೀಲರನ್ನು ಖಾರವಾಗಿ ಪ್ರಶ್ನಿಸಿದರು.
“ಕಾರ್ಯದೊತ್ತಡದಿಂದ ವಿಳಂಬವಾಗಿದೆ ಎನ್ನುವುದಾದರೆ ಸರ್ಕಾರಿ ಅಧಿಕಾರಿಗಳು ಯಾವ ಕೆಲಸವನ್ನೂ ಸರಿಯಾದ ಸಮಯಕ್ಕೆ ಮಾಡಲ್ಲ. ಕೋರ್ಟ್‌ಗೆ ಬೇಕಾದ ಮಾಹಿತಿಯನ್ನು ದಾಖಲೆಗಳನ್ನು ನಿಗದಿತ ಸಮಯಕ್ಕೆ ಒದಗಿಸುವುದಿಲ್ಲ. ಅಧಿಕಾರಿಗಳು ಕೆಲಸ ಮಾಡದೆ ಸೋಮಾರಿಗಳಾಗಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಅಸಮರ್ಥರಾಗಿದ್ದಾರೆ.
ಸಮಯಕ್ಕೆ ಸರಿಯಾಗಿ ಕೆಲಸ ಮಾಡದೆ ಸೋಮಾರಿಗಳಾಗಿದ್ದಾರೆ. ಆದರೆ, ಪ್ರತಿ ತಿಂಗಳು ತಪ್ಪದೇ ಸಂಬಳ ಡ್ರಾ ಮಾಡುತ್ತಾರೆ. ಇದು ನಮ್ಮ ರಾಜ್ಯದ ಆಡಳಿತ ವರ್ಗದ ಸಂಸ್ಕೃತಿ!?. ಇನ್ನಾದರೂ ಅಧಿಕಾರಿಗಳು ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು. ಇಲ್ಲದಿದ್ದರೆ ನ್ಯಾಯಾಲಯವೇ ಸೂಕ್ತ ಪಾಠ ಕಲಿಸಬೇಕಾಗುತ್ತದೆ. ಈ ಮಾತನ್ನು ಆಡಳಿತ ವಿಭಾಗದ ಅತ್ಯುನ್ನತ ಅಧಿಕಾರಿಗೆ ತಿಳಿಸಿ” ಎಂದು ಎಚ್ಚರಿಸಿದರು.
ಅಲ್ಲದೇ “ಸರ್ಕಾರದ ಯಾವ ಇಲಾಖೆ ಸರಿ ಇದೆ ಹೇಳಿ, ರಾಜ್ಯದಲ್ಲಿ ಸಮರ್ಥ ಅಧಿಕಾರಿಗಳು ಕೊರತೆ ಇದೆಯೇ?” ಎಂದು ಸರ್ಕಾರಿ ವಕೀಲರನ್ನು ಕೇಳಿದರು. ನಂತರ ಅರ್ಜಿ ದಾಖಲಿಸುವುದರಲ್ಲಿ ಮಾಡಿದ ವಿಳಂಬಕ್ಕೆ ಮನ್ನಿಸಿ, ಪ್ರಾಥಮಿಕ ವಿಚಾರಣೆಗೆ ಅರ್ಜಿಯನ್ನು ನಿಗದಿಪಡಿಸಿಕೊಳ್ಳಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.