ಪಿಐಎಲ್ ದುರ್ಬಳಕೆಗೆ ಹೈ ಅಸಮಾಧಾನ
Team Udayavani, Jun 1, 2018, 11:55 AM IST
ಬೆಂಗಳೂರು: ನ್ಯಾಯ ವಂಚಿತ ಶೋಷಿತ ಹಾಗೂ ದುರ್ಬಲ ವರ್ಗದವರ ರಕ್ಷಣೆಗಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಇದ್ದು, ಇತ್ತೀಚಿಗೆ ವೈಯಕ್ತಿಕ ಹಿತಾಸಕ್ತಿ ಹಾಗೂ ಸಣ್ಣಪುಟ್ಟ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪಿಐಎಲ್ ಸಲ್ಲಿಸುತ್ತಾ, ಅದರ ವ್ಯಾಪ್ತಿ ಮೀರಲಾಗುತ್ತಿದೆ ಎಂದು ಹೈಕೋರ್ಟ್ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಪತ್ನಿಯು ಮಂಗಳೂರು ನಗರದ ಇದಿಯಾ ಗ್ರಾಮದ ಸರ್ವೇ ನಂಬರ್ 48/8ಪಿ ನಿವೇಶನದಲ್ಲಿ ಯಾವುದೇ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ. ನಂತರ ತಮ್ಮ ಪ್ರಭಾವ ಬಳಸಿ ಮಂಗಳೂರು ಮಹಾನಗರ ಪಾಲಿಕೆಯಿಂದ ಕಟ್ಟಡಕ್ಕೆ ಅನುಮತಿ ಪಡೆದಿದ್ದಾರೆ. ಈ ಬಗ್ಗೆ ಪಾಲಿಕೆಗೆ ದೂರು ನೀಡಿದರೂ ಅಧಿಕಾರಿಗಳು ಕ್ರಮ ಜರುಗಿಸುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯರಾದ ಹನುಮಂತ ಕಾಮತ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಆ ಅರ್ಜಿಯು ಗುರುವಾರ ನ್ಯಾಯಾಲಯದ ವಿಚಾರಣೆಗೆ ಬಂದಿತ್ತು.
ಅರ್ಜಿಯ ವಿಚಾರಣೆ ನಡೆಸಿ, ವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ವಿಭಾಗೀಯ ಪೀಠ, ಮಾಜಿ ಶಾಸಕರ ಪತ್ನಿ ಪ್ರಭಾವ ಬಳಸಿ ಅಕ್ರಮ ಕಟ್ಟಡ ನಿರ್ಮಿಸಿದ್ದರೆ, ಆ ಕುರಿತು ಸ್ಥಳೀಯ ಪ್ರಾಧಿಕಾರಗಳ ಅಧಿಕಾರಿಗಳು ಕ್ರಮ ಜರುಗಿಸಬೇಕು. ಇನ್ನು ಅರ್ಜಿದಾರರು ಸ್ಥಳೀಯ ಆಡಳಿತಕ್ಕೆ ದೂರು ಸಲ್ಲಿಸಿ ಬಗೆಹರಿಸಿಕೊಳ್ಳಬೇಕು. ಪಿಐಎಲ್ ಇರುವುದು ವೈಯಕ್ತಿಕ ಉದ್ದೇಶ ಹಾಗೂ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ಅಲ್ಲ.
ಬದಲಾಗಿ ನ್ಯಾಯವಂಚಿತರಾದ ಶೋಷಿತ, ಹಿಂದುಳಿದ ಹಾಗೂ ದುರ್ಬಲ ವರ್ಗದ ರಕ್ಷಣೆ ಮಾಡಲು. ಇತ್ತೀಚೆಗೆ ಅದರ ವ್ಯಾಪ್ತಿ ಮೀರಲಾಗುತ್ತಿದ್ದು, ಇಂತಹ ಪ್ರವೃತ್ತಿ ಸರಿಯಲ್ಲ. ಇದನ್ನು ಕೋರ್ಟ್‌ಗಳು ಉತ್ತೇಜಿಸುವುದಿಲ್ಲ. ಈ ಕುರಿತು ಜಾಗೃತಿ ಮೂಡಿಸಬೇಕಿದೆ ಎಂದು ಬೇಸರ ವ್ಯಕ್ತಪಡಿಸಿತು. ಹನುಮಂತ ಕಾಮತ್ ಸಲ್ಲಿಸಿದ್ದ ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿಯ ಅಂಶ ಇಲ್ಲ ಎಂದು ಅರ್ಜಿ ವಜಾಗೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.