ತ್ಯಾಜ್ಯ ಘಟಕದ ನಿರ್ವಹಣೆಗೆ ಹೈ ತಾಕೀತು

Team Udayavani, Apr 4, 2018, 12:08 PM IST

blore-3.jpg

ಬೆಂಗಳೂರು: ಕನ್ನಹಳ್ಳಿ ಹಾಗೂ ಸೀಗೆಹಳ್ಳಿ ಸೇರಿದಂತೆ ಪಾಲಿಕೆಯ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವ ಹಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲು ಹೈಕೋರ್ಟ್‌ ಮಂಗಳವಾರ ಬಿಬಿಎಂಪಿಗೆ ನಿರ್ದೇಶನ ನೀಡಿದೆ. ಘನತ್ಯಾಜ್ಯ ನಿರ್ವಹಣೆ, ವಾರ್ಡ್‌ ಕಮಿಟಿ ರಚನೆ ಸಂಬಂಧ ಸಲ್ಲಿಕೆಯಾಗಿರುವ ರಿಟ್‌ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಬಿ.ಎಸ್‌ ಪಾಟೀಲ್‌ ಹಾಗೂ ನ್ಯಾ. ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಸ್ವಯಂಸೇವಾ ಸಂಸ್ಥೆಗಳ ಅರ್ಜಿದಾರರು, ಪಾಲಿಕೆಯ ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಕೆಲವೆಡೆ ತ್ಯಾಜ್ಯ ಸಂಸ್ಕರಣೆಯೇ ಸೂಕ್ತವಾಗಿ ಮಾಡುತ್ತಿಲ್ಲ. ಇದರಿಂದ ಸ್ಥಳೀಯರು ಹಲವು ಸಮಸ್ಯೆಗಳನ್ನ ಎದುರಿಸುತ್ತಿದ್ದರೂ ಪಾಲಿಕೆ ಸ್ಪಂದಿಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ದೂರಿದರು.
ವಿಚಾರಣೆ ವೇಳೆ ಹಾಜರಿದ್ದ ಘನತ್ಯಾಜ್ಯ ನಿರ್ವಹಣೆ ವಿಭಾಗದ ಜಂಟಿ ಆಯುಕ್ತ ಸರ್ಫ‌ರಾಜ್‌ ಖಾನ್‌ ಮಾಹಿತಿ ನೀಡಿ, ಏಳು ತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಸಣ್ಣಪುಟ್ಟ ತೊಂದರೆಗಳಿದ್ದು. ಉಳಿದಂತೆ ಕಾರ್ಯ ನಿರ್ವಹಣೆ ನಡೆಯುತ್ತಿದೆ ಎಂದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ತ್ಯಾಜ್ಯ ನಿರ್ವಹಣಾ ಘಟಕಗಳು ಪರಿಸರ ದೃಷ್ಟಿಯಿಂದ ಯಾವುದೇ ಲೋಪವಿಲ್ಲದೆ ಕಾರ್ಯನಿರ್ವಹಿಸಬೇಕು. ಹೀಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಪಾಲಿಕೆಯ ಜವಾಬ್ದಾರಿಯಾಗಿದ್ದು, ತ್ಯಾಜ್ಯ ಸಂಸ್ಕರಣಾ ಘಟಕಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸರ್ಕಾರದ ಇನ್ನಿತರೆ ಯಾವ ಇಲಾಖೆಗಳಿಂದ ಸಹಕಾರ ಬೇಕಿದೆ? ಎಂಬುದರ ಪ್ರಮಾಣಪತ್ರದೊಂದಿಗೆ ಮಾಹಿತಿ ನೀಡಿದರೆ ಕೋರ್ಟ್‌ ಈ ಕುರಿತು ನಿರ್ದೇಶನ ನೀಡುವುದಾಗಿ ಪಾಲಿಕೆಗೆ ಸೂಚಿಸಿತು.

ನ್ಯಾಯಾಲಯದ ಆದೇಶದಂತೆ ಇದುವರೆಗೂ ವಾರ್ಡ್‌ ಸಮಿತಿ ಸಭೆ, ತ್ಯಾಜ್ಯ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸದ ವಾರ್ಡ್‌ ಸಮಿತಿ ಸಂಚಾಲಕರು, ಪಾಲಿಕೆ ಸದಸ್ಯರು, ಪಾಲಿಕೆ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಿ ಎಂದು ಆಯುಕ್ತರಿಗೆ ನಿರ್ದೇಶಿಸಿತು. ನ್ಯಾಯಾಲಯದ ಮುಂದಿನ ವಿಚಾರಣೆ ವೇಳೆ ಆದೇಶ ಪಾಲಿಸಿದವರ ಪಟ್ಟಿ ನೀಡುವಂತೆ ತಾಕೀತು ಮಾಡಿ, ಅವರ ವಿರುದ್ಧ ಕ್ರಮಕ್ಕೆ ಆದೇಶಿಸುವ ಎಚ್ಚರಿಕೆ ನೀಡಿತು. 

50 ಸಾವಿರ ರೂ. ದಂಡ ಪಾವತಿ: ವಾರ್ಡ್‌ ಸಮಿತಿ ಸಭೆಗಳನ್ನು ನಡೆಸದೆ ಹಾಗೂ ಘನತ್ಯಾಜ್ಯ ನಿರ್ವಹಣೆ ಸಂಬಂಧ ಸೂಕ್ತ ಕ್ರಮಗಳನ್ನು ತೆಗದುಕೊಳ್ಳುವಲ್ಲಿ ವಿಫ‌ಲವಾದ ಕಾರಣದಿಂದ ಈ ಹಿಂದೆ ನ್ಯಾಯಾಲಯ ವಿಧಿಸಿದ್ದ 50 ಸಾವಿರ ರೂ. ದಂಡವನ್ನು ಪಾಲಿಕೆ ಆಯುಕ್ತರು ಕಟ್ಟಿದರು. ಪಾಲಿಕೆ ಪರಆಯುಕ್ತರು ಈ ಸಂಬಂಧ ಹೈಕೋರ್ಟ್‌ ರಿಜಿಸ್ಟ್ರಾರ್‌ ಹೆಸರಿಗೆ 50 ಸಾವಿರ ರೂ. ಚೆಕ್‌ ನೀಡಿದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.