ಪಾನಮತ್ತ ಪತ್ನಿ ಕೊಂದ ಪತಿ ಜೀವಾವಧಿ ಶಿಕ್ಷೆ ರದ್ದು
Team Udayavani, Oct 18, 2022, 11:28 AM IST
ಬೆಂಗಳೂರು: ಹಬ್ಬದ ದಿನ ಅಡುಗೆ ಮಾಡಿಲ್ಲ ಎಂದು ಕೋಪಗೊಂಡು ಪಾನಮತ್ತಳಾಗಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಮಾರ್ಪಡಿಸಿದ ಹೈಕೋರ್ಟ್, ಆತನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಆದೇಶಿಸಿದೆ.
ತನ್ನ ಪತ್ನಿ ರಾಧಾಳನ್ನು ಕೊಂದ ಆರೋಪದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿ ಸದ್ಯ ಜೈಲಿನಲ್ಲಿರುವ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಸುರೇಶ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಹಾಗೂ ನ್ಯಾ, ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
“ಹಬ್ಬದ ದಿನ ಅಡುಗೆ ಮಾಡಿಲ್ಲ, ಮಕ್ಕಳಿಗೆ ಊಟ ಕೊಟ್ಟಿಲ್ಲ. ಪಾನಮತ್ತಳಾಗಿ ಹೆಂಡತಿ ಮಲಗಿರುವುದಕ್ಕೆ ಕೋಪಗೊಂಡ ಪತಿ ದಿಢೀರ್ ಆಗಿ ಆವೇಷದಿಂದ ದೊಣ್ಣೆಯಿಂದ ಹೊಡೆದಿದ್ದಕ್ಕೆ ಸಾವು ಸಂಭವಿಸಿದೆ. ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಹಾಗಾಗಿ, ಆತನು ಮಾಡಿದ್ದು ಕೊಲೆಯೆಂದು ಪರಿಗಣಿಸಲಾಗುವು ದಿಲ್ಲ. ಬದಲಿಗೆ “ಉದ್ದೇಶಪೂರ್ವಕವಲ್ಲದ ನರಹತ್ಯೆ’ ಎಂದು ಪರಿಗಣಿಸಬೇಕಾಗುತ್ತದೆ. ಹಾಗಾಗಿ, ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 302 (ಕೊಲೆ) ಆರೋಪದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿರುವ ಆದೇಶವನ್ನು ಮಾರ್ಪಾಡಿಸಿ ಅದನ್ನು “ಉದ್ದೇಶಪೂರ್ವಕ ವಲ್ಲದ ನರಹತ್ಯೆ’ ಆರೋಪ ಎಂದು ಪರಿಗಣಿಸಿದೆ.
ಈಗಾಗಲೇ ಆರೋಪಿ 6 ವರ್ಷಕ್ಕೂ ಹೆಚ್ಚು ಕಾಲ ಜೈಲುವಾಸ ಆನುಭವಿಸಿರುವ ಕಾರಣ, ಆತನ ಮೇಲೆ ಬೇರೆ ಯಾವುದೇ ಪ್ರಕರಣ ಇಲ್ಲದಿದ್ದರೆ ಆತನನ್ನು ತಕ್ಷಣ ಜೈಲಿ ನಿಂದ ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಮೃತ ಮಹಿಳೆ ಮದ್ಯ ವ್ಯಸನಿಯಾಗಿದ್ದಳು ಎಂಬುದನ್ನೂ ಸಾಕ್ಷಿಗಳು ದೃಢಪಡಿಸುತ್ತಿವೆ. ಇಬ್ಬರು ಮಕ್ಕಳನ್ನು ಹೊಂದಿದ್ದ ಆಕೆ ಯಾವುದೇ ಮನೆ ಕೆಲಸ ಮಾಡುತ್ತಿರಲಿಲ್ಲ. ಗೌರಿ ಹಬ್ಬದ ದಿನ ಸಹ ಆಕೆ ಅಡುಗೆ ಮಾಡದೆ ಹಬ್ಬವನ್ನು ಆಚರಿಸದೆ ಕುಡಿದು ಮನೆಯಲ್ಲಿ ಮಲಗಿದ್ದಳು ಎಂಬುದನ್ನು ಹೈಕೋರ್ಟ್ ಆದೇಶದಲ್ಲಿ ಹೇಳಿದೆ.
ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸುತ್ತಿದ್ದ. ಇದೇ ವೇಳೆ ರಾಧಾ ಅವರ ಪತಿ ಅಗಲಿದ್ದರು. ಹೀಗಾಗಿ ಸುರೇಶ ಮತ್ತು ರಾಧಾ ಮದುವೆಯಾಗಿ ಇಬ್ಬರು ಮಕ್ಕಳನ್ನು ಹೊಂದಿದ್ದರು. 2016ರಲ್ಲಿ ಗಣೇಶ ಹಬ್ಬದ ದಿನ ಸುರೇಶ ಮನೆಗೆ ಬಂದಾಗ ಹಬ್ಬವನ್ನೂ ಆಚರಿಸದೆ, ಅಡುಗೆ ಮಾಡದೆ, ಮಕ್ಕಳಿಗೂ ಊಟ ಕೊಡದೆ ರಾಧಾ ಕುಡಿದು ಮಲಗಿದ್ದಳು. ಕೋಪಗೊಂಡ ಸುರೇಶ ದೊಣ್ಣೆಯಿಂದ ಹೊಡೆದ ಪರಿಣಾಮ ಆಕೆ ಸಾವನ್ನಪ್ಪಿದ್ದಳು. 2017ರಲ್ಲಿ ವಿಚಾರಣಾ ನ್ಯಾಯಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ಸುರೇಶ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.