ಪೊಲೀಸರ ಕಾರ್ಯ ವೈಖರಿಗೆ ಹೈ ಬೇಸರ
Team Udayavani, Apr 14, 2018, 12:01 PM IST
ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ಎಚ್‌ಐವಿ ಸೋಂಕು ಹರಡಲು ಕಾರಣವಾಗಿದ್ದಾರೆ ಎಂಬ ಆರೋಪ ಸಂಬಂಧ ಖಾಸಗಿ ಆಸ್ಪತ್ರೆ ವೈದ್ಯರ ವಿರುದ್ಧ ದಾಖಲಾದ ಪ್ರಕರಣದ ತನಿಖೆಯಲ್ಲಿ ವಿಳಂಬ ಅನುಸರಿಸಿದ ಸದಾಶಿವನಗರ ಠಾಣೆ ಪೊಲೀಸರ ಕಾರ್ಯವೈಖರಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪೊಲೀಸ್ ತನಿಖೆಯ ಕ್ರಮ ಪ್ರಶ್ನಿಸಿ 45 ವರ್ಷದ ಎಚ್‌ಐವಿ ಬಾಧಿತ ಮಹಿಳೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾ. ರಾಘವೇಂದ್ರ ಎಸ್.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪೊಲೀಸರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆಯಿತ್ತು. ಆದರೆ, ಈ ಪ್ರಕರಣದಲ್ಲಿ ಪೊಲೀಸರ ಕಾರ್ಯವೈಖರಿ ಗಮನಿಸಿದರೆ ಪರಿಸ್ಥಿತಿ ಬೇರೆ ರಾಜ್ಯಗಳಿಗಿಂತ ಭಿನ್ನವಾಗಿಲ್ಲ ಎಂದೆನಿಸುತ್ತದೆ ಎಂದರು.
ಮಹಿಳೆ ದೂರು ನೀಡಿದ ಬಳಿಕ ನಿಸ್ಪಕ್ಷಪಾತ ತನಿಖೆ ನಡೆಸುವುದು ಪೊಲೀಸರ ಕರ್ತವ್ಯ. ಆದರೆ, ಎಫ್ಐಆರ್ ದಾಖಲಿಸಿಕೊಳ್ಳಲು ವಿಳಂಬ ಮಾಡಿರುವ ಕ್ರಮ ಸರಿಯಲ್ಲ. ಕೂಡಲೇ ಈ ಪ್ರಕರಣದಲ್ಲಿ ತನಿಖೆ ಚುರುಕುಕೊಳಿಸಿ ಕಾಲ ಕಾಲಕ್ಕೆ ವರದಿ ಸಲ್ಲಿಸುವಂತೆ ಸದಾಶಿವನಗರ ಇನ್ಸ್‌ಪೆಕ್ಟರ್‌ಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಏ. 25ಕ್ಕೆ ಮುಂದೂಡಿತು.
ಅನಾರೋಗ್ಯದಿಂದ ಬಳಲುತ್ತಿದ್ದ ಅರ್ಜಿದಾರ ಮಹಿಳೆ 2013ರ ಅಕ್ಟೋಬರ್‌ನಲ್ಲಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಹೊರ ರೋಗಿಯಾಗಿ ದಾಖಲಾಗಿದ್ದರು. ಚಿಕಿತ್ಸೆ ಸಮಯದಲ್ಲಿ ರಕ್ತ ನೀಡಿದಾಗ ಎಚ್‌ಐವಿ ಸೋಂಕಿರುವ ರಕ್ತ ಸೇರಿಕೊಂಡಿದ್ದು, ರಕ್ತ ಪರೀಕ್ಷೆ ಸಂದರ್ಭದಲ್ಲಿ ಎಚ್‌ಐವಿ ಪಾಸಿಟವ್ ಎಂದು ವರದಿ ಬಂದಿದೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಸದಾಶಿವನಗರ ಪೊಲೀಸರಿಗೆ ಮಹಿಳೆ ದೂರು ನೀಡಿದ್ದರೂ ಅದನ್ನು ಸ್ವೀಕರಿಸಿರಲಿಲ್ಲ. ಹೀಗಾಗಿ 2016ರಲ್ಲಿ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.