ಹಸುವಿನ ಕೆಚ್ಚಲು ಕೊಯ್ದು ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ: ಆರ್‌.ಅಶೋಕ್‌

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆ ಬಗ್ಗೆ ತಾತ್ಸಾರ ಧೋರಣೆ: ಬಿ.ವೈ.ವಿಜಯೇಂದ್ರ

Team Udayavani, Jan 12, 2025, 8:49 PM IST

Ashok-Vijayendra

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವ ಘಟನೆಗೆ ಸಂಬಂಧಿಸಿ ವಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್‌ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ ಘಟನೆ ಅತ್ಯಂತ ಖಂಡನೀಯವಾಗಿದ್ದು, ಗೋಮಾತೆಯ ಕೆಚ್ಚಲು ಕತ್ತರಿಸಿದ ಪಾಪಿಗಳನ್ನು ರಾಜ್ಯ ಸರಕಾರ ಈ ಕೂಡಲೇ ಬಂಧಿಸಬೇಕು. ಗೋವು ಭಾರತೀಯರಿಗೆ ತಾಯಿ ಸಮಾನ. ಅದರಲ್ಲೂ ಸಂಕ್ರಾಂತಿ ಹಬ್ಬದಲ್ಲಿ ಗೋವನ್ನು ವಿಶೇಷವಾಗಿ ಪೂಜಿಸಲಾಗುತ್ತದೆ. ಸಂಕ್ರಾಂತಿ ಹಬ್ಬದ ಸಮಯದಲ್ಲೇ ಹಸುವಿನ ಕೆಚ್ಚಲು ಕೊಯ್ದು ಹಾಕುವ ಮೂಲಕ ಮತಾಂಧ ಶಕ್ತಿಗಳು ಹಿಂದೂಗಳಿಗೆ ಸವಾಲು ಹಾಕಿವೆ. ಇಂತಹ ಜಿಹಾದಿ ಮನಸ್ಥಿತಿಯನ್ನು ನಮ್ಮ ರಾಜ್ಯ ಈವರೆಗೂ ಕಂಡಿರರಿಲ್ಲ ಎಂದು ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ಪಶು ಆಸ್ಪತ್ರೆ ಉಳಿವಿಗಾಗಿ ಹಸುವಿನ ಮಾಲೀಕರು ಹೋರಾಟ ಮಾಡಿದರು. ಹಸುಗಳನ್ನ ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು ಎಂಬುದಕ್ಕೆ ಕಾಲು ಕಟ್ ಮಾಡಿದ್ದಾರೆ. ಕೆಚ್ಚಲಿಗೆ ಹಾನಿ ಮಾಡಿದ್ದಾರೆ. ಕಾಂಗ್ರೆಸ್ ಮಾತೆತ್ತಿದರೆ ದೇವಸ್ಥಾನ, ಹೋಮ ಮಾಡುತ್ತಾರೆ. ಇದು ವೋಟ್‌ಗಾಗಿ ಮಾಡುತ್ತಿರುವುದು ಎಂದು ಕಿಡಿಕಾರಿದರು.

ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಚಾಮರಾಜಪೇಟೆಯಲ್ಲಿ ನಡೆದಿರುವ ಈ ಅಮಾನುಷ ಘಟನೆಯನ್ನ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ತುಷ್ಟೀಕರಣ ರಾಜಕಾರಣಕ್ಕಾಗಿ ಸಮಾಜದ ಶಾಂತಿ, ಸುವ್ಯವಸ್ಥೆಯನ್ನು ಬಲಿ ಕೊಡದೆ ಮತಾಂಧ ಶಕ್ತಿಗಳ ಹೆಡೆಮುರಿ ಕಟ್ಟುವ ಕೆಲಸ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ಸರಕಾರದಿಂದ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ: ವಿಜಯೇಂದ್ರ
ಚಾಮರಾಜಪೇಟೆಯಲ್ಲಿ ರಾಕ್ಷಸಿ ಮನಸ್ಥಿತಿಯ ಪಾಪಿಗಳು ನಿರ್ದಯವಾಗಿ ಹಸುಗಳ ಕೆಚ್ಚಲನ್ನು ಭೀಕರವಾಗಿ ಕತ್ತರಿಸಿರುವುದು ಅತ್ಯಂತ ಹೇಯ, ಅಮಾನುಷ ಹಾಗೂ ಕ್ರೂರ ಕೃತ್ಯವಾಗಿದ್ದು, ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಾಧ್ಯಮ ಪ್ರಕಟಣೆ ನೀಡಿ ಗೋವು’ ಎಂದರೆ ಸಕಲ ಜೀವರಾಶಿಗಳಿಗೂ ಮಾತೆ. ಹೀಗಾಗಿ ಹಿಂದೂಗಳು ಗೋವನ್ನು ಮಾತೃದೇವತೆಯ ಸ್ಥಾನ ನೀಡಿ ಕಾಮಧೇನು ಎಂದು ಪೂಜಿಸುತ್ತಾರೆ. ಕರ್ನಾಟಕದ ಸಂಸ್ಕೃತಿಯಲ್ಲಿ ಪುಣ್ಯಕೋಟಿಯ ಕಥೆಯ ಹಾಡು ಜಗತ್ತಿನ ಮೂಲೆ ಮೂಲೆಗೂ ಪಸರಿಸಿದೆ. ನಾಡಿದ್ದು ಮಕರ ಸಂಕ್ರಾಂತಿಯಂದು ಗೋ ಮಾತೆಗೆ ಪೂಜೆ ಸಲ್ಲಿಸುವ ಪಾವಿತ್ರ್ಯತೆಯ ಸಂದರ್ಭದಲ್ಲಿ
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗೋ ಸುರಕ್ಷತೆಯ ಬಗ್ಗೆ ತಾತ್ಸಾರ ಧೋರಣೆ ಅನುಸರಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮಾತೃ ಕೊರತೆ ನೀಗಿಸಲು ಕ್ಷೀರಧಾರೆ ಹರಿಸುವ ಕೆಚ್ಚಲನ್ನೇ ಕತ್ತರಿಸುವಷ್ಟು ಪರಮ ನೀಚ ಕೃತ್ಯಕ್ಕೆ ಇಳಿದಿರುವ ಘಟನೆ ಕರ್ನಾಟಕದ ರಾಜಧಾನಿಯಲ್ಲೇ ನಡೆಯುತ್ತಿದೆ ಎಂದರೆ ಇದರ ಹಿಂದಿರುವ ಕುಮ್ಮಕ್ಕಿನ ಶಕ್ತಿ ಯಾವುದು ಎನ್ನುವುದು ಊಹಿಸಿಕೊಳ್ಳದಷ್ಟು ಕರುನಾಡಿನ ಜನತೆ ಮುಗ್ಧರಲ್ಲ, ಕೃತ್ಯ ನಡೆದಿರುವ ಕ್ಷೇತ್ರ ಯಾರ ಮುಷ್ಠಿಯಲ್ಲಿದೆ, ಈ ರಾಜ್ಯ ಆಳುತ್ತಿರುವವರ ಮನಸ್ಥಿತಿ ಯಾರ ಪರವಿದೆ ಎನ್ನುವುದು ಎಲ್ಲರಿಗೂ ತಿಳಿದ ವಿಚಾರವೇ. ಜನರ ತಾಳ್ಮೆಯ ಕಟ್ಟೆ ಒಡೆಯುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಎಚ್ಚೆತ್ತುಕೊಂಡು ಇಂತಹ ಕೃತ್ಯಗಳ ಹಿಂದಿರುವ ಶಕ್ತಿಯನ್ನು ಬಗ್ಗು ಬಡಿಯದಿದ್ದರೆ ಇದಕ್ಕೆ ಕುಮ್ಮಕ್ಕು ನೀಡುತ್ತಿರುವವರು ಸರ್ಕಾರದೊಳಗಿನ ಶಕ್ತಿಗಳು ಎಂಬ ತೀರ್ಮಾನಕ್ಕೆ ಜನ ಬರಬೇಕಾಗುತ್ತದೆ ಎಂದರು.

ಟಾಪ್ ನ್ಯೂಸ್

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cha-CM-zameer

Chamarajapete: ಹಸುಗಳ ಕೆಚ್ಚಲು ಕೊಯ್ದವರ ವಿರುದ್ಧ ಕಠಿನ ಕ್ರಮ: ಸಿಎಂ ಸಿದ್ದರಾಮಯ್ಯ

SS-Mallikarjun1

CM Post: ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌

CT-Ravi

ಮೋಹ ಪರವಶ, ಅಧಿಕಾರ ಮದ, ಮತ್ಸರದ ರಾಜಕಾರಣ ಮಾಡೋರಿಗೆ ಸತ್ಯ ಅರ್ಥವಾಗಲ್ಲ: ಸಿ.ಟಿ.ರವಿ

Chamarajpete–cow

Bengaluru: ಮಲಗಿದ್ದ ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುರುಳರು; ಭುಗಿಲೆದ್ದ ಆಕ್ರೋಶ

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

Mudhol:‌‌ ಎರಡು ದಿನಗಳ ಕಾರ್ಯಾಚರಣೆ ಬಳಿಕ ಮೊಸಳೆ‌ ಸೆರೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.