ಎಚ್‌.ಕೆ.ಪಾಟೀಲ್‌ ಅಧಿಕಾರ ಸ್ವೀಕಾರ ಸಮಾರಂಭ ಇಂದು


Team Udayavani, Jan 18, 2019, 6:05 AM IST

hkpatil.jpg

ಬೆಂಗಳೂರು: ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಚ್‌.ಕೆ. ಪಾಟೀಲ್‌ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಮೂಲಕ ಕಾಂಗ್ರೆಸ್‌ ಲೋಕಸಭೆ ಚುನಾವಣೆಗೆ ಒಗ್ಗಟ್ಟಿನ ಮಂತ್ರ ಹೇಳಲಿದ್ದು, ರಾಜ್ಯದ ಜನತೆಗೆ ಸಂದೇಶ ರವಾನಿಸಲು ತೀರ್ಮಾನಿಸಿದ್ದಾರೆ.

ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್‌.ಶಂಕರ್‌, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಪೈಪೋಟಿ ಇದೆ. ಹೀಗಾಗಿ ಎಚ್‌.ಕೆ. ಪಾಟೀಲ್‌ ಅವರ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚಿನ ಮತ ಗಳಿಸಿದ್ದರೂ ಹೆಚ್ಚಿನ ಸೀಟು ಗಳಿಸಲು ಸಾಧ್ಯವಾಗಲಿಲ್ಲ ಎಂದರು. ಆಪರೇಷನ್‌ ಕಮಲ ವಿಚಾರದಲ್ಲಿ ಬಿಜೆಪಿಯವರ ಸ್ಥಿತಿ ನಮಾಜ್‌ ಮಾಡಲಿಕ್ಕೆ ಹೋಗಿ ಮಸೀದಿಯನ್ನೇ ಮೈಮೇಲೆ ಕೆಡವಿಕೊಂಡಂತಾಗಿದೆ ಎಂದು ಹೇಳಿದರು.

ಕಳೆದ ಬಾರಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಕಾಂಗ್ರೆಸ್‌ ಈ ಬಾರಿ ತಳ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಕೆಲಸ ಮಾಡಲಿದೆ. ಪ್ರಚಾರ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರದ ನಂತರ ಜ.26 ರಿಂದ ಮನೆ ಮನೆಗೂ ಜನ ಸಂಪರ್ಕ ಅಭಿಯಾನ ನಡೆಸಲು ತೀರ್ಮಾನಿಸಲಾಗಿದೆ. ಈ ಅಭಿಯಾನದಲ್ಲಿ ಬಿಜೆಪಿಯ ನಾಲ್ಕೂವರೆ ವರ್ಷದ ಜನ ವಿರೋಧಿ ಆಡಳಿತ ಹಾಗೂ ಯುಪಿಎ ಅವಧಿಯಲ್ಲಿ ಆಗಿರುವ ಸಾಧನೆಗಳ ಬಗ್ಗೆ ಜನತೆಗೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಬಿಜೆಪಿಯವರು ಹತ್ತು ಪೈಸೆಯ ಕೆಲಸ ಮಾಡಿ ಒಂದು ರೂಪಾಯಿ ಪ್ರಚಾರ ಪಡೆಯುತ್ತಾರೆ. ಕಾಂಗ್ರೆಸ್‌ ಕೆಲಸ ಮಾಡಿದ್ದರೂ ಪ್ರಚಾರ ದೊರೆಯುವುದಿಲ್ಲ. ಹೀಗಾಗಿ ಈ ಬಾರಿ ವ್ಯವಸ್ಥಿತವಾಗಿ ಚುನಾವಣೆ ಪ್ರಚಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಮಾಜಿ ಸಚಿವ ಎ.ಎಂ.ಹಿಂಡಸಗೇರಿ, ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ, ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌, ಮಾಜಿ ಮೇಯರ್‌ ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ  

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

Atul Subhash: ಟೆಕಿ ಅತುಲ್‌ ಪತ್ನಿ ಬೇಲ್‌ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್ ‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.