ಕೈಗೆ ಬಿಸಿ ತಟ್ಟಿತು, ಬಿಜೆಪಿ ತೊಡೆ ತಟ್ಟಿತು

Team Udayavani, Jul 7, 2018, 6:00 AM IST

hk-page-1.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಬಜೆಟ್‌ ಮಂಡನೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಪತ್ರ ಸಮರ ಸಾರಿದ್ದಾರೆ. 

ಇನ್ನೊಂದೆಡೆ, ಪೆಟ್ರೋಲ್‌-ಡೀಸೆಲ್‌ ಬೆಲೆ ಹೆಚ್ಚಳ ಖಂಡಿಸಿ ಕೇಂದ್ರದ ವಿರುದ್ಧ ಹೋರಾಟ ಮಾಡುತ್ತಿರುವ ನಾವು ಇದೀಗ ನಮ್ಮದೇ ಪಾಲುದಾರಿಕೆ ಇರುವ ಸರ್ಕಾರ ಬೆಲೆ ಹೆಚ್ಚಳ ಮಾಡಿರುವುದನ್ನು ಸಮರ್ಥಿಸಿಕೊಳ್ಳುವುದು ಹೇಗೆ ಎಂದು ಕಾಂಗ್ರೆ ಸ್‌ ಶಾಸ ಕರು ಸಮ ನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಬಳಿ ಅವಲತ್ತು ಕೊಂಡಿದ್ದಾರೆ.
 
ಮತ್ತೂಂದೆಡೆ ಅಲ್ಪಸಂಖ್ಯಾತರಿಗೆ ಬಜೆಟ್‌ನಲ್ಲಿ ಯಾವುದೇ ಹೊಸ ಕಾರ್ಯಕ್ರಮ ನೀಡದ ಬಗ್ಗೆ ಮತ್ತೂಬ್ಬ ಹಿರಿಯ ನಾಯಕ ರೋಷನ್‌ಬೇಗ್‌ ಸಹ ಅಸಮಾಧಾನಗೊಂಡಿದ್ದು ಹೈಕಮಾಂಡ್‌ಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. 

ಪರಮೇಶ್ವರ್‌ ಹೋಗಿದ್ದು ಒಂದೇ ಸಭೆಗೆ: 
ಕಾಂಗ್ರೆಸ್‌ ನಾಯಕರನ್ನು ತೀರಾ ಕಂಗೆಡಿಸಿರುವುದು, ಬಜೆಟ್‌ನಲ್ಲಿ ಪೆಟ್ರೋಲ್‌-ಡೀಸೆಲ್‌, ವಿದ್ಯುತ್‌ ಮೇಲಿನ ತೆರಿಗೆ ಹೆಚ್ಚಳದ ವಿಚಾರ. ಹಿರಿಯ ನಾಯಕರ ಸಹಿತ ಕಾಂಗ್ರೆಸ್‌ ಶಾಸಕರು ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು ಇದರಿಂದ ಜನಸಾಮಾನ್ಯರ ಆಕ್ರೋಶ ಎದುರಿಸುವಂತಾಗಿದೆ. ಬಜೆಟ್‌ ಸಿದ್ಧತೆ ಕುರಿತು ಪೂರ್ವಭಾವಿ ಸಭೆಗೆ ಕಾಂಗ್ರೆಸ್‌ ನಾಯಕರಿಗೆ ಆಹ್ವಾನ ನೀಡಿರಲಿಲ್ಲ. ಡಾ.ಜಿ.ಪರಮೇಶ್ವರ್‌ ಅವರು ಒಂದೇ ಒಂದು ಸಭೆಗೆ ಹೋಗಿದ್ದರು. ತೆರಿಗೆ ಹೆಚ್ಚಳ ಕುರಿತು ಸಮನ್ವಯ ಸಮಿತಿಯಲ್ಲೂ ಚರ್ಚಿಸದೆ ನಿರ್ಧಾರ ಕೈಗೊಂಡಿರುವುದು ಸರಿಯಲ್ಲ ಎಂದು ಶಾಸ ಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವಳಿ ಪತ್ರದ ಮೂಲಕ ಅಸಮಾಧಾನ ಪ್ರಕಟ
ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.ಕೆ.ಪಾಟೀಲ್‌ ಅವರು, ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿರುವ ಬಗ್ಗೆ ವಿವರಿಸಿ ತಕ್ಷಣ ಸರಿಪಡಿಸುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೂ  ಈ ಕುರಿತು ಪ್ರತ್ಯೇಕ ಪತ್ರ ಬರೆದಿದ್ದಾರೆ.

ರೈತರ ಸಾಲ ಮನ್ನಾ ಘೋಷಣೆ ಸ್ವಾಗತಿಸುತ್ತಲೇ ಅಲ್ಪಸಂಖ್ಯಾತ ಸಮುದಾಯ ಹಾಗೂ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಾಸೆಯುಂಟು ಮಾಡಿರುವ ಬಗ್ಗೆ ಪಾಟೀಲರು ಪತ್ರದಲ್ಲಿ ಬೇಸರ ಹೊರ ಹಾಕಿದ್ದಾರೆ.

ಸಿದ್ದುಗೆ ಬರೆದ ಪತ್ರದಲ್ಲಿ ಏನಿದೆ? 
ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ, ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಹುದೊಡ್ಡ ಶಕ್ತಿ ನೀಡಿದ ಅಲ್ಪಸಂಖ್ಯಾತ ಸಮುದಾಯಕ್ಕೆ ಯಾವುದೇ ಹೊಸ ಯೋಜನೆಗಳಾಗಲಿ, ಕಾರ್ಯಕ್ರಮಗಳಾಗಲಿ ವಿಶೇಷ ಹಣಕಾಸಿನ ಹಂಚಿಕೆಯಾಗಲಿ ಮಾಡಿಲ್ಲ. ನಮ್ಮ ಪಕ್ಷಕ್ಕೆ ಶಕ್ತಿ ನೀಡಿದ ಸಮುದಾಯವನ್ನು ಮೊದಲ ಬಜೆಟ್‌ನಲ್ಲೇ ನಿರ್ಲಕ್ಷಿಸಲಾಗದು. ವಿಶೇಷ ಹಂಚಿಕೆ, ಘೋಷಣೆ ಮಾಡಬೇಕಾದದ್ದು ಅತ್ಯಂತ ಅಗತ್ಯ. ಬಹಳಷಟು ಕಾರ್ಯಕ್ರಮಗಳು ಹಂಚಿಕೆ ಮುಖಾಂತರ ಪ್ರಕಟಿಸಲಾಗಿದೆ. ಸಹಜವಾಗಿ ಅಲ್ಪಸಂಖ್ಯಾತ ಸಮುದಾಯದ ಅಂಥದೇ ನಿಲುವುಗಳನ್ನು ಅಪೇಕ್ಷಿಸುವುದು ಸಹಜ.

ಉತ್ತರ ಕರ್ನಾಟದ ವಿಷಯವಾಗಿ 1999-2004  ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಮತ್ತು ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದ 2004-2006 ಮತ್ತು 2013-2018 ರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಹಲವಾರು ಕಾರ್ಯಕ್ರಮ ರೂಪಿಸಿ ಪ್ರಾದೇಶಿಕ ಅಸಮತೋಲನ ಸಮತೋಲನಗೊಳಿಸಲು ಪ್ರಯತ್ನ ಮಾಡಲಾಗಿದೆ. ಸಮ್ಮಿಶ್ರ ಸರ್ಕಾರದ  ಇ ಸಂದರ್ಭದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆ ಮಾಡಲು ಕೆಲವು ಕಾರ್ಯಕ್ರಮ ಘೋಷಣೆ ಮಾಡುವುದು ಸೂಕ್ತ.

ದಯವಿಟ್ಟು  ಈ ವಿಷಯವನ್ನು ಸಮನ್ವಯ ಸಮಿತಿಯ ತುರ್ತು ಸಭೆ ಕರೆದು  ಈ ಎರಡೂ ಗಂಭೀರ ವಿಷಯಗಳ ಬಗ್ಗೆ ಪರಿಹಾರ ದೊರಕಿಸಿಕೊಡಲು ಕೋರುವೆ..

ಸಿಎಂಗೆ ಬರೆದಿದ್ದೇನು?
ಚುನಾವಣೆಯಲ್ಲಿ ಜಾತ್ಯತೀತ ಪಕ್ಷಗಳ ಗೆಲುವಿಗೆ ಕಾರಣೀಕರ್ತರಾಗಿರುವ ಅಲ್ಪಸಂಖ್ಯಾ ತರ ಕಲ್ಯಾಣಕ್ಕಾಗಿ ಕೆಲವಾದರೂ ಹೊಸ ಕಾರ್ಯಕ್ರಮಗಳು ಬಜೆಟ್‌ನಲ್ಲಿ ಪ್ರಕಟಗೊಳ್ಳಬೇಕಿತ್ತು. ಅಲ್ಪಸಂಖ್ಯಾತರ ಮತ್ತು
ಅಲ್ಪಸಂಖ್ಯಾತ ಬಡವರ ಪರವಾಗಿ ಹಣಕಾಸಿನ ವಿಶೇಷ ಹಂಚಿಕೆ ಮುಂಗಡ ಪತ್ರದಲ್ಲಿ ಕಾಣಬೇಕಿತ್ತು. ಉತ್ತರ ಕರ್ನಾಟಕದ ಜನತೆ ಸಾಕಷ್ಟು ಅಪೇಕ್ಷೆ ಮತ್ತು ನಿರೀಕ್ಷೆ ಇಟ್ಟುಕೊಂಡಿದ್ದರು.ಉತ್ತರ ಕರ್ನಾಟಕದವರಿಗೆ ನಿರಾಸೆಯಾಗಿದೆ. ಅಲ್ಲಿನ ಜನರ ಭಾವನೆಗಳಿಗೆ ಘಾಸಿಯಾಗಿದೆ.ಜನರ ಭಾವನೆಗಳನ್ನು ಗೌರವಿಸುವುದು ಪ್ರಸ್ತುತ ಸಮ್ಮಿಶ್ರ ಸರ್ಕಾರದ ಆದ್ಯ ಕರ್ತವ್ಯಗಳಲ್ಲಿ ಒಂದು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.