ಹೋಂ ಗಾರ್ಡ್ ಅತ್ಯಾಚಾರ ಆರೋಪ: ಮುಖ್ಯ ಪೇದೆ ಬಂಧನ
Team Udayavani, Nov 20, 2018, 12:07 PM IST
ಬೆಂಗಳೂರು: ಮಹಿಳಾ ಹೋಂ ಗಾರ್ಡ್ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಪೊಲೀಸ್ ಮುಖ್ಯ ಪೇದೆಯೊಬ್ಬರನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜ್ಞಾನಭಾರತಿ ಠಾಣೆಯ ಮುಖ್ಯ ಪೇದೆ ಚಂದ್ರಶೇಖರ್ ಬಂಧಿತ ಆರೋಪಿ.
ಸಂತ್ರಸ್ತ ಮಹಿಳೆ ನೀಡಿದ ದೂರಿನ ಅನ್ವಯ ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದರು. “ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಹೋಂ ಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದು. ನ.2ರಂದು ಆರೋಪಿ ಮಹಿಳೆ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿದ್ದು ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಆಕೆಯನ್ನು ಮನೆಯವರೆಗೂ ಡ್ರಾಪ್ ಮಾಡಿದ್ದು ಮೊಬೈಲ್ ನಂಬರ್ ಪಡೆದುಕೊಂಡಿದ್ದಾನೆ.
ಬಳಿಕ ತನ್ನ ವರಸೆ ಬದಲಿಸಿದ ಚಂದ್ರಶೇಖರ್, ಆಕೆಯ ಜೊತೆ ಅಶ್ಲೀಲವಾಗಿ ಮಾತನಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ನ.16ರಂದು ಕೆಲಸ ಮಾಡುತ್ತಿದ್ದಾಗ ರಾತ್ರಿ 8.30ರ ಸುಮಾರಿಗೆ ಅಲ್ಲಿಗೆ ಬಂದು ಲೈಂಗಿಕ ದೌರ್ಜನ್ಯ ಎಸಗಲು ಬಲವಂತ ಪಡಿಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಮನೆಗೆ ಬಂದು ಅತ್ಯಾಚಾರ: ಆರೋಪಿ ಚಂದ್ರಶೇಖರ್ ಲೈಂಗಿಕ ಕಿರುಕುಳ ನೀಡುತ್ತಿದ್ದ ಕುರಿತು ಜ್ಞಾನಭಾರತಿ ಠಾಣೆ ಇನ್ಸ್ಪೆಕ್ಟರ್ಗೆ ಮಾಹಿತಿ ನೀಡಿದ್ದರಿಂದ, ಅವರು ನ.17ರಂದು ಇಬ್ಬರನ್ನೂ ವಿಚಾರಣೆ ನಡೆಸಿ ಮುಂದೆ ಆ ರೀತಿ ನಡೆಸದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಆದರೆ ರಾತ್ರಿ 9 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಬಂದಿದ್ದು ಬಾಗಿಲು ಹಾಕಿಕೊಂಡಿದ್ದೆ. ಕೆಲಹೊತ್ತಿನ ಬಳಿಕ ಬಾಗಿಲು ಬಡಿದ ಶಬ್ಧವಾಯಿತು. ಪತಿ ಎಂದು ತಿಳಿದುಕೊಂಡು ಬಾಗಿಲು ತೆಗೆದ ಕೂಡಲೇ ಚಂದ್ರಶೇಖರ್ ಒಳನುಗ್ಗಿ ಬಲಾತ್ಕಾರಕ್ಕೆ ಮುಂದಾದ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.