ಗೃಹ ರಕ್ಷಕ ದಳ ಸಿಬ್ಬಂದಿ ಭತ್ಯೆ ಹೆಚ್ಚಳ
Team Udayavani, Dec 27, 2017, 1:25 PM IST
ಬೆಂಗಳೂರು: ಗೃಹ ರಕ್ಷಕರಿಗೆ ನೀಡುವ ದಿನ ಭತ್ಯೆಯನ್ನು 400ರಿಂದ 500 ರೂಗೆ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಬೆಂಗಳೂರು ಉತ್ತರ ಜಿಲ್ಲೆಯ ಗೃಹ ರಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೃಹ ರಕ್ಷಕ ದಳದ ಗೌರವ ಸ್ವೀಕರಿಸಿ ಮಾತನಾಡಿದರು.
ಗೃಹ ರಕ್ಷಕರಿಗೆ ದಿನ ಭತ್ಯೆಯನ್ನು 500ರೂಗೆ ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ 30 ಸಾವಿರ ಮಂದಿ ಗೃಹ ರಕ್ಷಕರಿದ್ದಾರೆ. ಅವರಲ್ಲಿ 15 ಸಾವಿರ ಮಂದಿ ನಿತ್ಯ ಪೊಲೀಸರ ಜತೆ ಕಾನೂನು ಸುವ್ಯವಸ್ಥೆ, ಸಂಚಾರ ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುತ್ತಿರುವ ರಕ್ಷಕರಿಗೆ ದಿನ ಭತ್ಯೆ ಹೆಚ್ಚಿಸುವುದನ್ನು ಬರುವ ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದರು.
ರಾಜ್ಯದ ಭದ್ರತೆ ಕಾಪಾಡುವಲ್ಲಿ ಪೊಲೀಸರ ಜತೆ ಕೈ ಜೋಡಿಸಿರುವ ಗೃಹರಕ್ಷಕರಿಗೆ ಕರ್ತವ್ಯದ ವೇಳೆ ಪೊಲೀಸರಿಗೆ ನೀಡುವ ಸೌಲಭ್ಯ ನೀಡಲಾಗುವುದು., ಗೃಹ ರಕ್ಷಕ ದಳ ಸ್ವಂತ ಬ್ಯಾಂಡ್ ರಚಿಸಿಕೊಂಡಿರುವದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಗೃಹ ರಕ್ಷಕರಿಗೆ ಪೊಲೀಸರಿಗೆ ನೀಡುವಂತೆ ಕಾಲಕಾಲಕ್ಕೆ ತರಬೇತಿ ಕೊಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಮತ್ತು ಗೃಹ ರಕ್ಷಕ ದಳದ ಮಹಾನಿರ್ದೇಶಕ ಎಂ.ಎನ್.ರೆಡ್ಡಿ, ಜಂಟಿ ಪೊಲೀಸ್ ಆಯುಕ್ತ ಡಾ ಡಿ.ಸಿ.ರಾಜಪ್ಪ, ಡಿಸಿಪಿ ಭೂಷಣ್ ಗುಲಾಬ್ ರಾವ್ ಬೊರಸೆ, ಕಮಾಂಡೆಂಟ್ ಅಮರ್‌ನಾಥ್ ಇತರುì ಇದ್ದರು. ಇದೇ ವೇಳೆ ಗೃಹರಕ್ಷಕದಳದ ಟೇಬಲ್ ಕ್ಯಾಲೆಂಡರ್ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.