ದಿಶಾ ಬಂಧನ ಖಂಡಿಸಿ ಗೃಹ ಸಚಿವರಿಗೆ ಹಲವು ಸಂಘಟನೆಗಳ ನಿಯೋಗ ಮನವಿ
Team Udayavani, Feb 19, 2021, 6:46 PM IST
ಬೆಂಗಳೂರು : ಟೂಲ್ ಕಿಟ್ ಪ್ರಕರಣದಡಿ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರ ಅಕ್ರಮ ಬಂಧನ ಹಾಗೂ ದಿಶಾ ಕೊಲೆಗೆ ಟ್ವಿಟರ್ ಮೂಲಕ ಕರೆ ಕೊಟ್ಟ ಹರಿಯಾಣ ಸಚಿವ ಅನಿಲ್ ವಿಜ್ ವಿರುದ್ದ ಎಫ್ಐಆರ್ ದಾಖಲಿಸಲು ಪೊಲೀಸರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿ ಹಲವು ಸಂಘಟನೆಗಳ ನಿಯೋಗ ಇಂದು (ಫೆ.19) ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿತು.
ದೆಹಲಿಯ ಪೊಲೀಸರು ನಮ್ಮ ರಾಜ್ಯದ ಪೊಲೀಸರಿಗೆ ತಿಳಿಸದೆ ದಿಶಾ ಅವರ ಬಂಧನ ಮಾಡಿದೆ. ಅವರ ವಕೀಲರ ಜತೆ ಸಮಾಲೋಚಿಸಲು ಅವಕಾಶ ನೀಡದೆ, ಇಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸದಿರುವುದು ಖಂಡನೀಯ. ದಿಶಾ ರವಿ ಬಂಧನ ಖಂಡಿಸಿ ಸಾರ್ವಜನಿಕರು ಫೆ. 15 ರಂದು ಬೆಂಗಳೂರು ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ಆದರೆ ಇಲ್ಲಿಯ ತನಕ ಯಾವುದೆ ಕ್ರಮ ತೆಗೆದುಕೊಂಡಿಲ್ಲ ಎಂದು ನಿಯೋಗದಲ್ಲಿದ್ದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನವಿ ಸ್ವೀಕರಿಸಿದ ಗೃಹ ಸಚಿವರು, ಎರಡು ದಿನಗಳಲ್ಲಿ ರಾಜ್ಯದ ಅಡ್ವೋಕೇಟ್ ಜನರಲ್ ಹಾಗು ಪೊಲೀಸ್ ಇಲಾಖೆಯ ಸಭೆ ಕರೆದು ಈ ವಿಷಯ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.
ಇನ್ನು ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ, ನಮ್ಮೂರ ಭೂಮಿ ನಮಗಿರಲಿ ವೇದಿಕೆ, ಅಖಿಲ ಭಾರತ ವಿಧ್ಯಾರ್ಥಿ ಸಂಘಟನೆ , ಅಖಿಲಾ ಭಾರತ ಪ್ರಗತಿಪರ ಮಹಿಳಾ ಸಂಘಟನೆ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್-ಕರ್ನಾಟಕ, ದ್ವೇಷದ ಮಾತಿನ ವಿರುದ್ದ ಜನಾಂದೋಲನ, ಆಲ್ ಇಂಡಿಯ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಹಾಗು ವಕೀಲರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.