ತೋಟಗಾರಿಕಾ ವಿದ್ಯಾರ್ಥಿಗಳ ಧರಣಿ
Team Udayavani, Jun 28, 2018, 3:19 PM IST
ಬೆಂಗಳೂರು: ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯವು ಖಾಸಗಿ ಕಾಲೇಜುಗಳ ಆರಂಭಕ್ಕೆ ಒಪ್ಪಿಗೆ ಸೂಚಿಸಿರುವ ಹಾಗೂ ತೋಟಗಾರಿಕಾ ಸಹಾಯಕರಿಗೆ ಸಹಾ ಯಕ ತೋಟಗಾರಿಕಾ ಅಧಿಕಾರಿಯಾಗಿ ಮುಂಬಡ್ತಿ ನೀಡುತ್ತಿರುವುದನ್ನು ವಿರೋಧಿಸಿ ತೋಟಗಾರಿಕಾ ವಿಶ್ವವಿದ್ಯಾನಿಲಯ ವ್ಯಾಪ್ತಿಯ ರಾಜ್ಯದ 10 ಕಾಲೇಜುಗಳ ವಿದ್ಯಾರ್ಥಿಗಳು ಜೂ.27ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ.
ನಗರದ ವಿದ್ಯಾರಣ್ಯಪುರದಲ್ಲಿರುವ ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಆರಂಭಿಸಿದರು.
ಪ್ರತಿಭಟನಾನಿರತರನ್ನು ಉದ್ದೇಶಿಸಿ ವಿದ್ಯಾರ್ಥಿ ಎಸ್.ಶಿವಪ್ರಸಾದ್ ಮಾತನಾಡಿ, ಖಾಸಗಿ ತೋಟಗಾರಿಕಾ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯಗಳ ಕೊರತೆಯಿದೆ. ಅಲ್ಲದೆ, ಕರ್ನಾಟಕ ಕೃಷಿ ವಿಶ್ವವಿದ್ಯಾಲಯಗಳ ಕಾಯ್ದೆ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಗಳ ಪರೀಕ್ಷಾ ನೀತಿಯನ್ನು ಖಾಸಗಿ ಕಾಲೇಜುಗಳು ಅಳವಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ, ಮಾರ್ಚ್ ತಿಂಗಳಲ್ಲಿ ನಡೆದ ತೊಟಗಾರಿಕಾ ವಿಶ್ವವಿದ್ಯಾಲಯದ ಮಂಡಳಿಯ 43ನೇ ಸಭೆಯಲ್ಲಿ ಮೂರು ಹೊಸ ಖಾಸಗಿ ಕಾಲೇಜುಗಳ ಸಂಯೋಜನೆಗೆ ನೀಡಿರುವ ಒಪ್ಪಿಗೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ತೋಟಗಾರಿಕಾ ಇಲಾಖೆಯಲ್ಲಿ ಎಸ್‌ಎಸ್ ಎಲ್‌ಸಿ ಅರ್ಹತೆ ಹೊಂದಿರುವ ತೋಟಗಾರಿಕಾ ಸಹಾಯಕರಿಗೆ ಕೇವಲ 3 ಅಥವಾ 5 ವರ್ಷಗಳ ಸೇವಾವಧಿ ಆಧಾರದಲ್ಲಿ ಸಹಾಯಕ ತೋಟಗಾರಿಕಾ ಅಧಿಕಾರಿ ಹುದ್ದೆಗೆ ಮುಂಬಡ್ತಿ ನೀಡಲು
ಇಲಾಖೆ ಮುಂದಾಗಿದೆ. ಇದರಿಂದಾಗಿ ವಿಜ್ಞಾನ ವಿಷಯದಲ್ಲಿ ಪದವಿ ಪೂರ್ವ ಶಿಕ್ಷಣ ಪೂರೈಸಿ ತೋಟಗಾರಿಕಾ ವಿಷಯದಲ್ಲಿ 4 ವರ್ಷಗಳ ಸ್ನಾತಕ ಪದವಿ ಪಡೆದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಂಟಕ ವಾಗುತ್ತದೆ ಎಂದು ಆರೋಪಿ ಸಿದರು. ಬಾಗಲಕೋಟೆಯ ತೋಟಗಾರಿಕಾ ವಿವಿ ಮುಖ್ಯ ಕ್ಯಾಂಪಸ್ ನಲ್ಲೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಕುಲಪತಿಗಳು ಹಾಗೂ ಆಡಳಿತ ಮಂಡಳಿ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೈಕ್‌ಗಳ ಮಧ್ಯೆ ಡಿಕ್ಕಿ: ಸವಾರ 3 ಪಲ್ಟಿ ಹೊಡೆದರೂ ಪಾರು
Metro Rail: ಮೆಟ್ರೋ ಹಳಿಗೆ ಜಿಗಿದ ಏರ್‌ಫೋರ್ಸ್ ನಿವೃತ ಅಧಿಕಾರಿ
Bengaluru: ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಸಾಮೂಹಿಕ ಅತ್ಯಾ*ಚಾರ!
Arrested: ಪತ್ನಿ, ಅತ್ತೆ ಮೇಲೆ ಹಲ್ಲೆ; ಆರೋಪಿ ಬಂಧನ
Bengaluru: ಟೆಕಿಯ 1 ತಿಂಗಳು ಡಿಜಿಟಲ್ ಅರೆಸ್ಟ್ ಮಾಡಿ 11.8 ಕೋಟಿ ರೂ. ವಂಚಿಸಿದ ಮೂವರ ಸೆರೆ