ಹೊಸಕೆರೆಹಳ್ಳಿ ಮೇಲ್ಸೇತುವೆ ಇಂದು ಲೋಕಾರ್ಪಣೆ
Team Udayavani, Sep 16, 2017, 12:49 PM IST
ಬೆಂಗಳೂರು: ಸಿಗ್ನಲ್ವುುಕ್ತ ಸಂಚಾರಕ್ಕಾಗಿ ಹೊಸಕೆರೆಹಳ್ಳಿ ರಸ್ತೆಯ ಕೆಇಬಿ ಜಂಕ್ಷನ್ನಲ್ಲಿ ನಿರ್ಮಿಸಿರುವ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಲ್ಸೇತುವೆಯನ್ನು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಿದ್ದಾರೆ.
ಸಿಲ್ಕ್ಬೋರ್ಡ್ ಜಂಕ್ಷನ್ನಿಂದ ಮೈಸೂರು ರಸ್ತೆ ಜಂಕ್ಷನ್ವರೆಗೆ ಸಿಗ್ನಲ್ ಮುಕ್ತ ಸಂಚಾರಕ್ಕಾಗಿ ಮುತ್ತುರಾಜ ಜಂಕ್ಷನ್, ಫುಡ್ ವರ್ಲ್ಡ್ ಜಂಕ್ಷನ್ ಹಾಗೂ ಜೇಡಿಮರ ಜಂಕ್ಷನ್ಗಳಲ್ಲಿ ಅಂಡರ್ಪಾಸ್ ಮತ್ತು ಡಾಲರ್ ಕಾಲೋನಿ, ಹೊಸಕೆರೆ ಹಳ್ಳಿಯ ಕೆಇಬಿ ಜಂಕ್ಷನ್ಗಳಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಬಿಬಿಎಂಪಿ ವತಿಯಿಂದ ನಡೆಸಲಾಗುತ್ತಿದೆ. ಇದರಿಂಗಾಗಿ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಮೈಸೂರು ರಸ್ತೆ ಜಂಕ್ಷನ್ವರೆಗಿನ ರಸ್ತೆ ಸಂಪೂರ್ಣವಾಗಿ ಸಿಗ್ನಲ್ ಮುಕ್ತವಾಗಲಿದೆ.
ಮೇಲ್ಸೇತುವೆಯ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಉದ್ಘಾಟನೆಗೆ ಮೇಲ್ಸೇತುವೆ ಸಿದ್ಧಗೊಳಿಸಲಾಗುತ್ತಿದೆ. ಮೇಲ್ಸೇತುವೆ ಕೆಳ ಭಾಗದ ವೃತ್ತ ಹಾಗೂ ಪಾದಚಾರಿ ಮಾರ್ಗಗಳ ದುರಸ್ತಿ ಕಾರ್ಯವನ್ನೂ ಪೂರ್ಣಗೊಳಿಸಲಾಗಿದೆ ಎಂದು ಪಾಲಿಕೆಯ ಎಂಜಿನಿಯರ್ ತಿಳಿಸಿದ್ದಾರೆ.
ಯೋಜನೆ ವಿವರ
-ಯೋಜನೆ: ಕೆಇಬಿ ಜಂಕ್ಷನ್ ಮೇಲ್ಸೇತುವೆ
-ಕಾರ್ಯಾದೇಶ ನೀಡಿದ ದಿನಾಂಕ: 01 ಸೆಪ್ಟಂಬರ್ 2015
-ಕಾಮಗಾರಿ ಆರಂಭ ದಿನಾಂಕ: ಜನವರಿ 2016
-ಕಾಮಗಾರಿ ಅವಧಿ: 18 ತಿಂಗಳು
-ಈವರೆಗಿನ ಪ್ರಗತಿ: ಶೇ.95
-ಅಂದಾಜು ವೆಚ್ಚ: 190 ಕೋಟಿ ರೂ.
-ಯೋಜನಾ ವೆಚ್ಚ: 154.42 ಕೋಟಿ ರೂ.
-ಕಾಮಗಾರಿ ಪೂರ್ಣಗೊಳ್ಳಬೇಕಾದ ದಿನಾಂಕ: 31 ಡಿಸೆಂಬರ್ 2017
-ಗುತ್ತಿಗೆದಾರ: ಎಂವಿಆರ್ ಇನಾ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.