ವೇತನ ಹೆಚ್ಚಳಕ್ಕೆ ಬಿಸಿಯೂಟ ತಯಾರಕರ ಆಗ್ರಹ
Team Udayavani, Jan 22, 2020, 3:05 AM IST
ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ನ ಕಾರ್ಯಕರ್ತೆಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಫೆಡರೇಷನ್ ಅಧ್ಯಕ್ಷ ಹೊನ್ನಪ್ಪ ಮರೆಮ್ಮನವರ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಬಿಸಿಯೂಟ ತಯಾರಕರಿಗೆ 2 ಲಕ್ಷ ರೂ. ಅಪಘಾತ ಪರಿಹಾರ ಮತ್ತು 5 ಲಕ್ಷ ರೂ. ಮರಣ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸರ್ಕಾರ ಈಗ ನೀಡುತ್ತಿರುವ ವೇತನ ಸಾಲುತ್ತಿಲ್ಲ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳ ಮಾಡಬೇಕು. ಅಲ್ಲದೆ ಸರ್ಕಾರ ಬಿಸಿಯೂಟ ವ್ಯವಸ್ಥೆಯನ್ನು ಖಾಸಗಿ ಯವರಿಗೆ ನೀಡಲು ಹೊರಟಿದ್ದು ಇದನ್ನು ಕೂಡಲೇ ಕೈ ಬಿಡಬೇಕು ಎಂದು ಒತ್ತಾಯಿಸಿದರು. 60 ವರ್ಷ ವಯಸ್ಸಾದ ಬಿಸಿಯೂಟ ತಯಾರಕರಿಗೆ ಮಾಸಿಕ 3 ಸಾವಿರ ರೂ. ನಿವೃತ್ತಿ ಪಿಂಚಣಿ ಮತ್ತು 2 ಲಕ್ಷ ರೂ. ಇಡುಗಂಟು ಹಣ ನೀಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.