House burglary: ಕೆಲಸಕ್ಕೆ ಸೇರಿದ 1 ದಿನಕ್ಕೆ ಮನೆಕನ್ನ ಮುಂಬೈ ಗ್ಯಾಂಗ್‌ನ ಕಳ್ಳಿಯರ ಸೆರೆ
Team Udayavani, Jan 9, 2024, 11:10 AM IST
ಬೆಂಗಳೂರು: ಟೆಕಿಯೊಬ್ಬರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡ ಮರು ದಿನವೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮುಂಬೈ ಮೂಲದ ಇಬ್ಬರು ಮಹಿಳೆಯರನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ವನಿತಾ (38) ಮತ್ತು ಯಶೋಧಾ(40) ಬಂಧಿತರು. ಆರೋಪಿ ಗಳಿಂದ 127 ಗ್ರಾಂ ತೂಕದ ಚಿನ್ನದ ಗಟ್ಟಿ ಜಪ್ತಿ ಮಾಡ ಲಾಗಿದೆ. 2023ರ ನ.27ರಂದು ಸರ್ಜಾ ಪುರ ಮುಖ್ಯ ರಸ್ತೆಯ ದೊಡ್ಡಕನ್ನಹಳ್ಳಿಯಲ್ಲಿ ರುವ ಅಪಾರ್ಟ್ ಮೆಂಟ್‌ನಲ್ಲಿ ವಾಸವಾಗಿರುವ ಶೇಖರ್ ಆನಂದ್ ಎಂಬುವರ ಮನೆಯಲ್ಲಿ ಆರೋಪಿಗಳು ಕಳ್ಳತನ ಮಾಡಿ ಪರಾರಿ ಯಾಗಿದ್ದರು. ಈ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ಸವಿತಾ ಎಂಬಾಕೆ ತಲೆಮರೆಸಿ ಕೊಂಡಿದ್ದಾಳೆ.
ನಗರದ ಸಾಫ್ಟ್ವೇರ್ ಕಂಪನಿಯಲ್ಲಿ ಟೆಕಿ ಯಾಗಿರುವ ಶೇಖರ್ ಆನಂದ್, ಪತ್ನಿ ಮತ್ತು ಮಕ್ಕಳ ಜತೆ ದೊಡ್ಡಕನ್ನಹಳ್ಳಿಯಲ್ಲಿರುವ ಎಸ್‌ಜೆಆರ್ ಪ್ಲಾಜಾ ಸಿಟಿಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದಾರೆ. 2023ರ ನ.26ರಂದು ವನಿತಾ ಮತ್ತು ಸವಿತಾ ಎಂಬುವರು ಮನೆ ಕೆಲಸಕ್ಕೆ ಸೇರಿದ್ದರು. ನ.27ರಂದು ಮುಂಜಾನೆಯೇ ಇಬ್ಬರು ಮನೆಯ ಕಬೋರ್ಡ್
ನಲ್ಲಿ ಇಟ್ಟಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಆ ನಂತರ ಇಬ್ಬರೂ ಕೆಲಸಕ್ಕೆ ಬಂದಿರಲಿಲ್ಲ. ಕರೆ ಮಾಡಿದಾಗ ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಡಿ.3ರಂದು ಶೇಖರ್ ಆನಂದ್ ಪತ್ನಿ ಕಬೋರ್ಡ್ ನೋಡಿದಾಗ ಚಿನ್ನಾಭರಣ ಕಳ್ಳತನ ಬೆಳಕಿಗೆ ಬಂದಿದೆ. ಈ ಸಂಬಂಧ ಶೇಖರ್ ಆನಂದ್ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮುಂಬೈನಲ್ಲಿ 36 ಕೇಸ್ ದಾಖಲು!:
ಆರೋಪಿಗಳ ವಿಚಾರಣೆಯಲ್ಲಿ ಇಬ್ಬರ ವಿರುದ್ಧ ಈ ಹಿಂದೆ ಮುಂಬೈನ ವಿವಿಧ ಪೊಲೀಸ್ ಠಾಣೆಗಳಲ್ಲಿ 36 ಮನೆ ಕಳವು ಪ್ರಕರಣಗಳು ದಾಖಲಾಗಿರುವುದು ಗೊತ್ತಾಗಿದೆ. ಮುಂಬೈನ ಅಪಾರ್ಟ್‌ಮೆಂಟ್‌ಗಳಲ್ಲಿ ಮನೆಗೆಲಸಕ್ಕೆ ಸೇರಿಕೊಂಡು ಬಳಿಕ ಹೊಂಚು ಹಾಕಿ ನಗದು, ಚಿನ್ನಾಭರಣ ದೋಚಿ ಪರಾರಿಯಾ ಗುತ್ತಿದ್ದರು. ಈ ಸಂಬಂಧ ಹಲವು ಬಾರಿ ಜೈಲಿಗೆ ಹೋಗಿದ್ದು, ಜಾಮೀನು ಪಡೆದು ಹೊರಗೆ ಬಂದು ಮತ್ತೆ ಹಳೇ ಚಾಳಿ ಮುಂದುವರೆಸುತ್ತಿದ್ದರು. ಬಂಧಿತರ ವಿರುದ್ಧ 2022ರಲ್ಲಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆ ಕಳವು ಪ್ರಕರಣದಲ್ಲಿ ಜೈಲು ಸೇರಿದ್ದರು ಎಂಬುದು ಗೊತ್ತಾಗಿದೆ. ಅಲ್ಲದೆ, ನಗರಕ್ಕೆ ಬಂದಾಗ ಪಿಜಿಯಲ್ಲಿ ವಾಸವಾಗುತ್ತಿದ್ದ ಆರೋಪಿಗಳು, ನಗರದಲ್ಲಿ ಅಪಾರ್ಟ್‌ಮೆಂಟ್‌ಗಳು ಹೆಚ್ಚಿರುವ ಸ್ಥಳಗಳಲ್ಲಿ ಸುತ್ತಾಡುತ್ತಿದ್ದ ಆರೋಪಿಗಳು, ಸೆಕ್ಯೂರಿಟಿ ಗಾರ್ಡ್ ಗಳನ್ನು ಪರಿಚಯಿಸಿಕೊಂಡು, ಅಪಾರ್ಟ್‌ಮೆಂಟ್‌ಗಳಲ್ಲಿ ನಕಲಿ ಆಧಾರ್ ಕಾರ್ಡ್ ತೋರಿಸಿ ಕೆಲಸ ಪಡೆಯುತ್ತಿದ್ದರು. ಬಳಿಕ ಮನೆ ಸದಸ್ಯರ ಚಟುವಟಿಕೆಗಳನ್ನು ಗಮನಿಸಿ, ಕಳವು ಮಾಡಿ, ಪಿಜಿ ಖಾಲಿ ಮಾಡಿಕೊಂಡು ಪರಾರಿಯಾಗುತ್ತಿದ್ದರು ಎಂದು ಪೊಲೀಸರು ಹೇಳಿದರು.
“ಮನೆಗೆಲಸದವರು ಬೇಕಿದ್ದರೆ ಸಂಪರ್ಕಿಸಿ’ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು:
ಆರೋಪಿಗಳ ವಿಚಾರಣೆಯಲ್ಲಿ ಮತ್ತೂಂದು ಮಹತ್ವದ ವಿಚಾರ ಬೆಳಕಿಗೆ ಬಂದಿದ್ದು, ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ರಚಿಸಿಕೊಂಡು ಮನೆಗೆಲಸದವರು ಬೇಕಿದ್ದರೆ ಸಂಪರ್ಕಿಸಿ ಎಂದು ಕಳವು ಮಾಡಿದ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ಉಲ್ಲೇಖೀಸಿ ಜಾಹೀರಾತು ನೀಡುತ್ತಿದ್ದರು. ಈ ಗ್ರೂಪ್ ನೋಡಿ ಸಂಪರ್ಕಿಸುವ ಸಾರ್ವಜನಿಕರಿಗೆ, ನಕಲಿ ದಾಖಲೆಗಳನ್ನು ತೋರಿಸಿ ಕೆಲಸಕ್ಕೆ ಸೇರಿಕೊಳ್ಳುತ್ತಿದ್ದರು. ಆ ಬಳಿಕ ಮನೆಯ ಮಾಲೀಕರ ವಿಶ್ವಾಸ ಗಳಸಿ ಒಂದೆರಡು ದಿನಗಳಲ್ಲೇ ಕಳ್ಳತನ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.