ಸೆರೆ ಸಿಕ್ಕ ಕುಖ್ಯಾತ ಮನೆಗಳ್ಳನ ಮೇಲೆ 25 ಪ್ರಕರಣ
Team Udayavani, May 3, 2023, 3:08 PM IST
ಬೆಂಗಳೂರು: ಬೀಗ ಹಾಕಿದ ಮನೆಗಳಿಗೆ ನುಗ್ಗಿ ಕನ್ನ ಹಾಕುತ್ತಿದ್ದ ರಘು ಅಲಿಯಾಸ್ ಪೆಪ್ಸಿ (23) ಎಂಬಾತನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಯಿಂದ ಕಳವು ಮಾಡಿದ್ದ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ಹಿತ್ತಾಳೆ ಸಾಮಗ್ರಿ, ಎರಡು ಬೈಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಮಿಳುನಾಡು ಮೂಲದ ರಘು ಉದ್ಯೋಗ ಅರಸಿ ಐದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ಸರಿಯಾದ ಉದ್ಯೋಗ ಸಿಗದೆ, ವಿಲಾಸಿ ಜೀವನ, ದುಶ್ಚಟಗಳಿಗೆ ಹಣ ಹೊಂದಿಸಲು ಕಳ್ಳತನ ವೃತ್ತಿಗೆ ಇಳಿದಿದ್ದ. 2019ರಿಂದ ನಗರದ ಬೇರೆ ಬೇರೆ ಭಾಗಗಳಲ್ಲಿ ಬೈಕ್ ಕಳವು, ಸುಲಿಗೆ, ಮನೆಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿದ್ದ, ಹೀಗೆ ಸುಮಾರು 25 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರಘು, ಹಲವು ಬಾರಿ ಜೈಲಿಗೆ ಹೋಗಿದ್ದರೂ ಜಾಮೀನು ಪಡೆದು ಹೊರಬಂದು ಪುನಃ ತನ್ನ ಚಾಳಿ ಮುಂದುವರಿಸಿದ್ದ. ಕಳ್ಳತನ ಮಾಡಲು ಮುಬಾರಕ್, ನಾಗರಾಜ, ಮುರುಗನ್ ಎಂಬ ಹುಡುಗರ ಪಡೆ ಕಟ್ಟಿಕೊಂಡಿದ್ದ ಆರೋಪಿ, ರಸ್ತೆ ಬದಿ ನಿಲ್ಲಿಸು ತ್ತಿದ್ದ ಬೈಕ್‌ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ. ಆರೋಪಿಗಳು ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡಿಕೊಂಡು ಕಳವು ಮಾಡಿ ಕದ್ದ ಆಭರಣ, ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಮೋಜಿನ ಜೀವನ ನಡೆಸುತ್ತಿದ್ದರು ಎಂದು ಪೊಲೀಸರು ಹೇಳಿದರು.
ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.