ವಸತಿ ಸಂಕೀರ್ಣ ನಿರ್ಮಾಣ ಅವೈಜ್ಞಾನಿಕ
Team Udayavani, Sep 18, 2018, 12:22 PM IST
ಮಹದೇವಪುರ: ಮಂಡೂರು ತ್ಯಾಜ್ಯ ವಿಲೇವಾರಿ ಘಟಕದ ಬಳಿ ವಸತಿ ಸಂಕೀರ್ಣ ನಿರ್ಮಿಸುವ ನಿರ್ಧಾರ ಅವೈಜ್ಞಾನಿಕ ಎಂದು ಶಾಸಕ ಅರವಿಂದ ಲಿಂಬಾವಳಿ ಆರೋಪಿಸಿದರು.
ಮಂಡೂರು ಗ್ರಾ.ಪಂ ವತಿಯಿಂದ ನಿಂಬೆಕಾಯಿಪುರದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಘಟಕದ ಬಳಿ ರಾಜೀವ್ ಗಾಂಧಿಗೃಹ ನಿರ್ಮಾಣ ಸಹಕಾರ ಸಂಘದಿಂದ ವಸತಿರಹಿತರಿಗೆ ಸೂರೊದಗಿಸಲು ವಸತಿ ಸಮುಚ್ಚಯಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಇಲ್ಲಿ ಮನೆಗಳನ್ನು ನಿರ್ಮಿಸಿದರೆ ಕುಸಿದು ಬಿಳುವ ಸಾಧ್ಯತೆ ಇದ್ದು, ಈ ಬಗ್ಗೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ನಿರ್ದಾರ ಕೈಗೊಳ್ಳಬೇಕು ಎಂದರು.
ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ಸಾರ್ವಜನಿಕರಿಗೆ ಹಲವು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮೂಲಕ ರಾಜ್ಯ ಸರ್ಕಾರ 2,18,000 ಕೋಟಿ ರೂ. ಮೀಸಲಿಟ್ಟಿದೆ. ಆದರೆ, ಸೌಲಭ್ಯಗಳ ಕುರಿತು ಅಧಿಕಾರಿಗಳು ಜನತೆಗೆ ಮಾಹಿತಿ ನೀಡದ ಕಾರಣ ಅನುದಾನ ವಾಪಸಾಗುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಇದೇ ವೇಳೆ ಹುಸ್ಕೂರು ಕೋಡಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಗ್ರಾಮದಲ್ಲಿ ವಾಣಿಜ್ಯ ಮಳಿಗೆಗಳು, ಬೊಮ್ಮೇನಹಳ್ಳಿಯಲ್ಲಿ ಸಭಾಂಗಣವನ್ನು ಶಾಸಕರು ಉದ್ಘಾಟಿಸಿದರು. ಜಿ.ಪಂ ಸದಸ್ಯ ಕೆಂಪರಾಜು, ಮಂಡೂರು ಗ್ರಾ.ಪಂ ಅಧ್ಯಕ್ಷ ಜನಾರ್ದನ ಗೌಡ, ತಾ.ಪಂ ಉಪಾಧ್ಯಕ್ಷೆ ಭಾಗ್ಯಮ್ಮ ಸತೀಶ್, ಸದಸ್ಯೆ ಮಂಜುಳಾ, ಗ್ರಾ.ಪಂ ಸದಸ್ಯರಾದ ಗೋಪಾಲ್ ರಾವ್, ಬೊಮ್ಮೇನಹಳ್ಳಿ ಮುನಿರಾಜು, ವೇಣು, ತಾಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Industrial production ಕಳೆದ ನವೆಂಬರ್ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.