ಎಷ್ಟು ಜನರನ್ನು, ಯಾವ ರೀತಿ ಕಾಯಂ ಮಾಡಬೇಕು ಪಾಲಿಕೆ?

Team Udayavani, Jun 26, 2017, 11:24 AM IST

bbmp.jpg

ಬೆಂಗಳೂರು: ರಾಜ್ಯದ 11 ಸಾವಿರ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಮುಖ್ಯಮಂತ್ರಿಗಳು ಮೌಖೀಕವಾಗಿ ಆದೇಶಿಸಿದ್ದು, ಪಾಲಿಕೆಯಲ್ಲಿರುವ 30 ಸಾವಿರ ಕಾರ್ಮಿಕರ ಪೈಕಿ ಯಾರನ್ನು ಕಾಯಂಗೊಳಿಸಬೇಕು ಎಂಬ ಇಕ್ಕಟ್ಟಿಗೆ ಪಾಲಿಕೆ ಸಿಲುಕಿದೆ. ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಇತ್ತೀಚೆಗೆ ರಾಜ್ಯದಾದ್ಯಂತ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು 11 ಸಾವಿರ ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಆದೇಶಿಸಿದ್ದರು. 

ಪೌರಕಾರ್ಮಿಕರನ್ನು ಯಾವ ಆಧಾರದ ಮೇಲೆ ಕಾಯಂಗೊಳಿಸಬೇಕು, ಯಾವೆಲ್ಲ ಅರ್ಹತೆಗಳನ್ನು ಪರಿಗಣಿಸಬೇಕು ಮತ್ತು ಕಾಯಂಗೊಳಿಸಲು ಅನುಸರಿಸಬೇಕಾದ ಮಾನದಂಡಗಳ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಹೊರಬಿದ್ದಿಲ್ಲ. ಅದರ ಹಿನ್ನೆಲೆಯಲ್ಲಿ ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರ ಕಾಯಂ ಪ್ರಕ್ರಿಯೆ ಆರಂಭಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. 

ಇದರೊಂದಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಕಾನೂನಿನ ತೊಡಕು ಸಹ ಎದುರಾಗಿದ್ದು, ವೃಂದ ಮತ್ತು ನೇಮಕಾತಿ ನಿಯಮದಲ್ಲಿ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಲು ಅವಕಾಶವಿಲ್ಲ. ಹೀಗಾಗಿ ನಿಯಮಗಳಿಗೆ ತಿದ್ದುಪಡಿ ತರಬೇಕಿರುವುದರಿಂದ ಗುತ್ತಿಗೆ ಪೌರಕಾರ್ಮಿಕರ ಕಾಯಂಗೊಳಿಸುವ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆಯಿದೆ. 

ಕಳೆದೊಂದು ವರ್ಷದ ಹಿಂದೆ ಬಿಬಿಎಂಪಿಯಲ್ಲಿ 18-20 ಸಾವಿರ ಗುತ್ತಿಗೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಸರ್ಕಾರ ಬಿಸಿಯೂಟ, ಕನಿಷ್ಠ ವೇತನ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಕಾರ್ಮಿಕರ ಸಂಖ್ಯೆ 30ಸಾವಿರಕ್ಕೆ ಹೆಚ್ಚಿದೆ. ಅದರ ಹಿನ್ನೆಲೆಯಲ್ಲಿ ಕಾಯಂಗೊಳಿಸುವ ವೇಳೆ ಯಾವ ರೀತಿಯ ಮಾನದಂಡಗಳನ್ನು ಅನುಸರಿಸಲಾಗುತ್ತದೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. 

ಮುಖ್ಯಮಂತ್ರಿಗಳು ಪೌರಕಾರ್ಮಿಕರನ್ನು ಕಾಯಂಗೊಳಿಸುವಂತೆ ಮೌಖೀಕವಾಗಿ ಆದೇಶಿಸಿದ್ದಾರೆ. ಆದರೆ, ಕಾರ್ಮಿಕರ ಕಾಯಂಗೊಳಿಸುವ ವೇಳೆ ಯಾವ ರೀತಿಯ ಮಾನದಂಡಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಸಮರ್ಪಕವಾಗಿ ಮಾಹಿತಿಯಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತ ಆದೇಶ ಬಂದ ನಂತರ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ. 
– ಜಿ.ಪದ್ಮಾವತಿ, ಮೇಯರ್‌ 

ಸಿಎಂ ನಿರ್ಧಾರಕ್ಕೆ ಸ್ವಾಗತ 
ಬೆಂಗಳೂರು: ರಾಜ್ಯದ 11 ಸಾವಿರ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವುದಾಗಿ ಹೇಳಿರುವ  ಸಿಎಂ ಸಿದ್ದರಾಮಯ್ಯ ಅವರ ನಿರ್ಧಾರವನ್ನು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲ ಸ್ವಾಗತಿಸಿದೆ. ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಸಿಎಂ ನಿರ್ಧಾರ ಕೈಗೊಂಡಿರುವುದು ಶ್ಲಾಘನೀಯವಾಗಿದೆ.

ಅದೇ ರೀತಿ ರಾಜ್ಯದಲ್ಲಿ  ಗುತ್ತಿಗೆ ಸೇವೆ ಇರಬಾರದು ಎಂದೂ ಸಿಎಂ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಅರಣ್ಯ  ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಹಲವು ವರ್ಷಗಳಿಂದ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರ ಸೇವೆ ಕಾಯಂಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಘದ ಅಧ್ಯಕ್ಷ ಡಾ. ಕೆ.ಎಸ್‌ ಶರ್ಮಾ ಕೋರಿದ್ದಾರೆ.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್‌

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

Fraud Case: ಟೆಕಿಗೆ ವಂಚನೆ ಕೇಸ್‌; ಆರೋಪಿ ಪತ್ತೆಗೆ ತಂಡ ರಚನೆ

5

New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Fraud case: ಚಿನ್ನಾಭರಣ ವಂಚನೆ ಕೇಸ್‌; ವಿಚಾರಣೆಗೆ ಬಾರದ ವರ್ತೂರ್‌ಗೆ 3ನೇ ನೋಟಿಸ್‌ 

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

Bengaluru: ಕೌಟುಂಬಿಕ ಕಾರಣಕ್ಕೆ ಲಾರಿ ಉದ್ಯಮಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.