ಡ್ರಗ್ಸ್ ಮಾರಾಟ: ಇಬ್ಬರು ಪ್ರೇಮಿಗಳು ಸೇರಿ ಮೂವರ ಸೆರೆ
Team Udayavani, Mar 8, 2022, 1:32 PM IST
ಬೆಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂನಿಂದ ಮಾದಕ ವಸ್ತು ಹ್ಯಾಶಿಸ್ ಆಯಿಲ್ ತಂದು ಮಾರಾಟ ಮಾಡುತ್ತಿದ್ದ ಯುವತಿ, ಇಬ್ಬರು ಪ್ರೇಮಿಗಳು ಸೇರಿ ಮೂವರು ಡ್ರಗ್ಸ್ ಪೆಡ್ಲರ್‌ಗಳನ್ನು ಹುಳಿಮಾವು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಡಿವಾಳದ ವಿಕ್ರಂ ಅಲಿಯಾಸ್ ವಿಕ್ಕಿ (23), ಕೇರಳದ ಕೊಟ್ಟಾಯಂನ ಸಿಗಿಲ್ ವರ್ಗಿಸ್ (23) ಹಾಗೂ ಕೊಯಮತ್ತೂರಿನ ವಿಷ್ಣುಪ್ರಿಯಾ(22) ಬಂಧಿತರು. ಆರೋಪಿಗಳಿಂದ ಸುಮಾರು 7.76 ಕೋಟಿ ರೂ. ಮೌಲ್ಯದ 12 ಕೆ.ಜಿ. 940 ಗ್ರಾಂ ತೂಕದ ಹ್ಯಾಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಫೆ.5ರಂದು ಬೆಳಗ್ಗೆ 8.30ರ ಸುಮಾರಿಗೆ ಬಿಟಿಎಂ ಲೇಔಟ್ 4ನೇಹಂತದ ಅರಕೆರೆ ಗ್ರಾಮದ ಕಾರ್ ಪಾರ್ಕ್ ಬಳಿ ಆರೋಪಿ ವಿಕ್ರಂ ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆಹುಳಿಮಾವು ಠಾಣೆ ಇನ್ಸ್‌ಪೆಕ್ಟರ್ ಎಲ್.ಟಿ.ಚಂದ್ರಕಾಂತ್ ನೇತೃತ್ವದಪೊಲೀಸರ ತಂಡ ಆತನನ್ನು ವಶಕ್ಕೆ ಪಡೆದಿದೆ. ಈ ವೇಳೆ ಆರೋಪಿಯಿಂದ 80 ಗ್ರಾಂ ತೂಕದ ಹ್ಯಾಶಿಸ್ ಆಯಿಲ್ ಜಪ್ತಿ ಮಾಡಲಾಗಿದೆ. ಈತನ ವಿಚಾರಣೆ ಮೇರೆಗೆ ಇತರೆ ಆರೋಪಿಗಳನ್ನು ಬಂಧಿಸಲಾಗಿದೆಎಂದು ಪೊಲೀಸರು ಹೇಳಿದರು.
ಪ್ರೇಮಿಗಳ ದಂಧೆ: ಆರೋಪಿಗಳ ಪೈಕಿ ಕೇರಳ ಮೂಲದ ಸೀಗಿಲ್ ಮತ್ತು ತಮಿಳುನಾಡು ಮೂಲದ ವಿಷ್ಣುಪ್ರಿಯ ಪ್ರೇಮಿಗಳಾಗಿದ್ದು, ಕಳೆದ ಮೂರು ತಿಂಗಳಿಂದ ನಗರದ ಕೊತ್ತನೂರಿನ ಕುವೆಂಪು ಲೇಔಟ್‌ನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಆರ್ಥಿಕ ಸಮಸ್ಯೆ ಯಿಂದಾಗಿ ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ಹ್ಯಾಶಿಸ್ ಆಯಿಲ್ ತರಿಸಿಕೊಂಡು ಪ್ಲಾಸ್ಟಿಕ್‌ನ ಸಣ್ಣ ಕಂಟೈನರ್‌ಗಳಲ್ಲಿ ತುಂಬಿ ದುಬಾರಿ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದರು. ವಿಚಾರಣೆ ವೇಳೆ ಈ ಆರೋಪಿ ಗಳು ನೀಡಿದ ಮಾಹಿತಿ ಮೇರೆಗೆ ಅವರ ಮನೆಯಲ್ಲಿ ಬಚ್ಚಿಟ್ಟಿದ್ದ 10 ಕೆ.ಜಿ.500 ಗ್ರಾಂ ತೂಕದ ಮಾದಕ ವಸ್ತು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಇನ್ನು ಆರೋಪಿ ವಿಕ್ರಂ ಪ್ರೇಮಿಗಳ ಬಳಿ ಹ್ಯಾಶಿಸ್ ಆಯಿಲ್ ಖರೀದಿಸಿ ಮಾರಾಟ ಮಾಡುತ್ತಿದ್ದ. ಇದೇ ರೀತಿಹಲವರು ಗಿರಾಕಿ ಗಳಿಗೆ ಈ ಆರೋಪಿಗಳು ಡ್ರಗ್ಸ್ ಮಾರಾಟ ಮಾಡಿಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.