ಆಯೋಗದಲ್ಲೇ ಮಾನವ ಹಕ್ಕುಗಳ ಉಲ್ಲಂಘನೆ
Team Udayavani, Jul 9, 2018, 12:12 PM IST
ಬೆಂಗಳೂರು: “ಮಾನವ ಹಕ್ಕುಗಳ ಆಯೋಗದ ಕಚೇರಿಯಲ್ಲೇ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ’ ಎಂದು ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷ ಎಸ್.ಆರ್.ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ, ಮಾನವ ಹಕ್ಕುಗಳ ರಕ್ಷಣಾ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ “ಮಾನವ ಹಕ್ಕುಗಳ ಇಂದಿನ ಸ್ಥಿತಿಗತಿ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, “ಶಾಸಕಾಂಗ ರೂಪಿಸಿದ ಕಾನೂನುಗಳಿಂದ ಮಾನವ ಹಕ್ಕುಗಳ ರಕ್ಷಣೆ ಅಸಾಧ್ಯ.
ಮಾನವ ಹಕ್ಕುಗಳ ಆಯೋಗದ ಕಚೇರಿಯಲ್ಲೇ ಈ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ನಾನು, ಈ ಹಿಂದೆ ಆಯೋಗದ ಅಧ್ಯಕ್ಷನಾಗಿದ್ದ ವೇಳೆ ಇದು ಮನವರಿಕೆಯಾಗಿದೆ. ವೇತನ, ರಜೆ ಸೇರಿದಂತೆ ಹಲವು ವಿಚಾರಗಳಲ್ಲಿ ಅಲ್ಲಿ ಸಾಮಾಜಿಕ ಅಸಮಾನತೆ ಇದೆ’ ಎಂದು ಹೇಳಿದರು.
ಇತ್ತೀಚೆಗೆ ಹಲವು ವಿಚಾರಗಳಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಈ ಬಗ್ಗೆ ಜನರಿಗೆ ಸರಿಯಾದ ತಿಳುವಳಿಕೆ ಇಲ್ಲ. ನಾನು ಆಯೋಗದ ಅಧ್ಯಕ್ಷನಾಗಿದ್ದ ವೇಳೆ, ಹಳ್ಳಿಯವರೆಗೂ ಮಾನವಹಕ್ಕುಗಳ ಬಗ್ಗೆ ತಿಳುವಳಿಕೆ ನೀಡುವ ಪ್ರಯತ್ನ ಮಾಡಿದ್ದೆ.
ಇಂದು ಹಲವರು ಬೀದಿಯಲ್ಲಿ ಬಿಸಾಡಿದ ಆಹಾರವನ್ನು ಸೇವಿಸುತ್ತಿದ್ದಾರೆ. ಇಂತವರ ರಕ್ಷಣೆಗೆ ಮಾನವ ಹಕ್ಕುಗಳ ರಕ್ಷಣೆ ವೇದಿಕೆಯ ಕಾರ್ಯಕರ್ತರು ಮುಂದಾಗಬೇಕು ಎಂದು ಮನವಿ ಮಾಡಿದರು.
ಸೈನಿಕರು ಕೂಡ ಮನುಷ್ಯರು: ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಮಾತನಾಡಿ, ಕಾಶ್ಮೀರದಲ್ಲಿ ಸೇನೆಯ ಮೇಲೆ ಕಲ್ಲು ತೂರಾಟ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೇನೆ ಪ್ರತಿ ದಾಳಿ ನಡೆಸುತ್ತದೆ. ಹೀಗಾಗಿ, ಕೆಲವರು ಸೇನೆಯ ಮೇಲೆ ಮಾನವಹಕ್ಕುಗಳ ಉಲ್ಲಂಘನೆ ಬಗ್ಗೆ ಟೀಕೆ ಮಾಡುತ್ತಾರೆ.
ಈ ರೀತಿಯ ಟೀಕೆ ಮಾಡುವವರು ಸೈನಿಕರೂ ಕೂಡ ನಮ್ಮ ಹಾಗೆ ಮಾನವರು ಎಂಬುವುದನ್ನು ಮೊದಲು ಅರಿತುಕೊಳ್ಳಬೇಕು ಎಂದು ಹೇಳಿದರು. ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಲಕ್ಷಿನಾರಾಯಣ, ಸಾಹಿತಿ ಪುಸ್ತಕ ಮನೆ ಹರಿಪ್ರಿಯ, ಅರ್ಥಶಾಸ್ತ್ರಜ್ಞ ಸೂರ್ಯ ಮುಕುಂದರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.