ಪತ್ನಿಯ ಹೆದರಿಸಲು ಹೋಗಿ ಪ್ರಾಣ ಕಳಕೊಂಡ ಪತಿರಾಯ!

Team Udayavani, Sep 26, 2017, 11:29 AM IST

murder-naif.jpg

ಬೆಂಗಳೂರು: ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಯೊಂದಿಗೆ ನಿತ್ಯ ಜಗಳವಾಡುತ್ತಿದ್ದ ರೌಡಿಶೀಟರ್‌, ಚಾಕುವಿನಿಂದ ಎದೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಾಮಪುರದ ಕ್ರೈಸ್ತ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಅರವಿಂದ್‌ ಕ್ವಿಂಟನ್‌ (24) ಆತ್ಮಹತ್ಯೆ ಮಾಡಿಕೊಂಡ ರೌಡಿಶೀಟರ್‌. ಭಾನುವಾರ ರಾತ್ರಿ ಮದ್ಯದ ಅಮಲಿನಲ್ಲಿ ಮನೆಗೆ ಬಂದ ಅರವಿಂದ್‌, ಪತ್ನಿಯೊಂದಿಗೆ ಜಗಳವಾಡಿದ್ದಾನೆ. ಬೇಸತ್ತ ಪತ್ನಿ ತವರು ಮನೆಗೆ ಹೋಗುತ್ತೇನೆ ಎಂದು ಮನೆಯಿಂದ ಹೊರಬಂದಿದ್ದಾರೆ. ಇದೇ ವೇಳೆ ಅರವಿಂದ್‌ ಚಾಕುವಿನಿಂದ ಎದೆಗೆ ಇರಿದುಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿನವಿಡೀ ಕುಡಿತ: ಮೃತ ಅರವಿಂದ್‌ ವರ್ಷದ ಹಿಂದೆ ಉಮಾದೇವಿ ಎಂಬುವವರನ್ನು ಪ್ರೀತಿಸಿ ವಿವಾಹವಾಗಿದ್ದು, ದಂಪತಿ ಕ್ರೈಸ್ತ ಕಾಲೋನಿಯಲ್ಲಿ ನೆಲೆಸಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳಿಂದ ದೂರ ಉಳಿದಿದ್ದ ಈತ, ಪೇಂಟಿಂಗ್‌ ಕೆಲಸಕ್ಕೆ ಹೋಗುತ್ತಿದ್ದ. ಆದರೆ, ನಿತ್ಯ ಮದ್ಯ ಸೇವಿಸಿ ಬಂದು, ಹಣ ನೀಡುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಇತ್ತೀಚೆಗೆ ಕೆಲಸಕ್ಕೂ ಹೋಗದೆ ದಿನವಿಡೀ ಮದ್ಯ ಸೇವಿಸುತ್ತಿದ್ದ. ಇದೇ ವಿಚಾರವಾಗಿ ದಂಪತಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಪತ್ನಿ ಉಮಾದೇವಿ, ಈ ರೀತಿ ನಡೆದುಕೊಂಡರೆ ತವರು ಮನೆಗೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದರು. ಆದರೂ ಅರವಿಂದ್‌ ಕುಡಿತದ ಚಟ ಬಿಟ್ಟಿರಲಿಲ್ಲ.

ತವರಿಗೆ ಹೋದರೆ ಸಾಯ್ತೇನೆ ಅಂದ: ಭಾನುವಾರ ಕೂಡ ಕಂಠಪೂರ್ತಿ ಮದ್ಯ ಸೇವಿಸಿದ್ದ ಅರವಿಂದ್‌, ರಾತ್ರಿ 10 ಗಂಟೆ ಸುಮಾರಿಗೆ ಮನೆಗೆ ಬಂದವನೇ ಪತ್ನಿಯೊಂದಿಗೆ ಜಗಳ ತೆಗೆದಿದ್ದಾನೆ. ಮನೆಯಲ್ಲಿದ್ದ ಪಾತ್ರೆ ಹಾಗೂ ಇತರೆ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ. “ನೀನು ಹೀಗೇ ಹಿಂಸೆ ಕೊಡುತ್ತಿದ್ದರೆ ನಾನು ತವರು ಮನೆಗೆ ಹೋಗುತ್ತೇನೆ,’ ಎಂದು ಪತ್ನಿ ಉಮಾದೇವಿ ಎಚ್ಚರಿಸಿದ್ದಾರೆ. ಇದರಿಂದ ಮತ್ತಷ್ಟು ಆಕ್ರೋಶಗೊಂಡ ಅರವಿಂದ್‌, “ನೀನು ತವರು ಮನೆಗೆ ಹೋದರೆ ನಾನು ಸಾಯುತ್ತೇನೆ,’ ಎಂದು ಬೆದರಿಕೆ ಹಾಕಿದ್ದಾನೆ. ಇಂಥ ಬೆದರಿಕೆಗಳನ್ನು ಪ್ರತಿ ದಿನ ಕೇಳುತ್ತಿದ್ದ ಪತ್ನಿ, ಮನೆಯಿಂದ ಹೊರಬಂದು ಮೆಟ್ಟಿಲುಗಳ ಮೇಲೆ ಕುಳಿತು ಅಳಲಾರಂಭಿಸಿದ್ದಾರೆ.

ಅತ್ತ ಅಡುಗೆ ಮನೆಗೆ ಹೋದ ಅರವಿಂದ್‌, ಚಾಕುವಿನಿಂದ ಎದೆಗೆ ಇರಿದುಕೊಂಡು ಜೋರಾಗಿ ಕೂಗಿಕೊಂಡಿದ್ದಾನೆ. ಕೂಗು ಕೇಳಿದ ಉಮಾದೇವಿ, ಅಡುಗೆ ಮನೆಗೆ ಹೋಗಿ ನೋಡಿದಾಗ ಪತಿ ರಕ್ತದ ಮಡುವಲ್ಲಿ ಬಿದ್ದಿದ್ದ. ಕೂಡಲೆ ಸ್ಥಳೀಯರ ಸಹಾಯದಿಂದ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನಂತರ ವೈದ್ಯರ ಸಲಹೆ ಮೇರೆಗೆ ಅರವಿಂದ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುವಾಗ ಆತ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.

ಹುಚ್ಚು ಪ್ರೀತಿಗೆ ಮನಸೋತಳು!: ಈ ಹಿಂದೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದ ರೌಡಿಶೀಟರ್‌ ಅರವಿಂದ್‌, ಪತ್ನಿ ಉಮಾದೇವಿಯನ್ನು 6 ವರ್ಷಗಳಿಂದ ಪ್ರೀತಿಸುತ್ತಿದ್ದ. ತನ್ನ 18ನೇ ವಯಸ್ಸಿನಲ್ಲೇ 16ರ ಹರೆಯದ ಉಮಾರ ಹಿಂದೆ ಬಿದ್ದು, ಪ್ರೀತಿಸುವಂತೆ ಪೀಡಿಸುತ್ತಿದ್ದ. ಆರಂಭದಲ್ಲಿ ಉಮಾ ನಿರಾಕರಿಸಿದಾಗ ಚಾಕುವಿನಿಂದ ಕೈ, ಎದೆ ಮೇಲೆ ಕೊಯ್ದುಕೊಂಡು ಅರವಿಂದ್‌, ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಈತನ ಹುಚ್ಚು ಪ್ರೀತಿಗೆ ಮನಸೋತ ಉಮಾದೇವಿ ಕಡೆಗೂ ಒಪ್ಪಿಕೊಂಡಿದ್ದರು. ನಂತರ ರೌಡಿ ಚಟುವಟಿಕೆಗಳಿಂದ ದೂರ ಉಳಿದಿದ್ದ ಅರವಿಂದ್‌, ಸ್ಥಳೀಯರ ಸಮ್ಮುಖದಲ್ಲಿ ಕಳೆದ ವರ್ಷ ಉಮಾದೇವಿ ಅವರನ್ನು ವಿವಾಹವಾಗಿದ್ದ.

ಟಾಪ್ ನ್ಯೂಸ್

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

tobacc

Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ  ಸಂಪುಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.