ಹೈ-ಕ ದಲ್ಲಿ ಮುಂದುವರಿದ ವರುಣನ ಆರ್ಭಟ

Team Udayavani, Sep 16, 2017, 7:10 AM IST

170915kpn82.jpg

ಬೆಂಗಳೂರು: ರಾಯಚೂರು, ಕಲಬುರಗಿ ಸೇರಿದಂತೆ ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡಿನಲ್ಲಿ ರಾಜ್ಯದಲ್ಲಿಯೇ ಅಧಿಕ, 10 ಸೆಂ.ಮೀ.ಗಳಷ್ಟು ಮಳೆ ಸುರಿಯಿತು.

ರಾಯಚೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಹಲವು ಗ್ರಾಮಗಳಲ್ಲಿನ ಮನೆಗಳಿಗೆ ನೀರು ನುಗ್ಗಿದೆ. 30ಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 70,000 ಕ್ಯುಸೆಕ್‌ ನೀರು ಬಿಡಲಾಗುತ್ತಿದ್ದು, ನದಿ ದಡದ ಗ್ರಾಮಗಳ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಮಾನ್ವಿಯಲ್ಲಿ ಮನೆ ಕುಸಿದು ಐವರು ಗಾಯಗೊಂಡಿದ್ದು, ಅವರನ್ನು ರಿಮ್ಸ್‌ಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆ ಆಳಂದ ಸಮೀಪದ ತಡಕಲ್‌ ಮಾರ್ಗದ ಹೆದ್ದಾರಿ ರಸ್ತೆಯ ಸೇತುವೆ ಕೊಚ್ಚಿ ಹೋಗಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ತೊಗರಿ, ಸೂರ್ಯಕಾಂತಿ, ಸೋಯಾಬಿನ್‌ ಬೆಳೆಗಳು ಹಾನಿಗೊಳಗಾಗಿವೆ. ಗಂಡೋರಿ ನಾಲಾ ಜಲಾಶಯ ಹಾಗೂ ಅಮರ್ಜಾ ಜಲಾನಯನ ಪ್ರದೇಶ ವ್ಯಾಪ್ತಿಯ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ ಜಿಲ್ಲೆಯಾದ್ಯಂತ ಸುರಿದ ಮಳೆಗೆ ತುಂಗಭದ್ರಾ ಜಲಾಶಯದ ಎಸ್ಕೇಪ್‌ ಗೇಟ್‌ ಒಡೆದಿದ್ದು, 2 ಸಾವಿರಕ್ಕೂ ಹೆಚ್ಚು ಎಕರೆ ಬೆಳೆ ನಷ್ಟವಾಗಿದೆ. ಈ ಭಾಗದಲ್ಲಿ ಬಿತ್ತನೆ ಮಾಡಲಾಗಿದ್ದ ಮೆಣಸಿನಕಾಯಿ, ಭತ್ತ, ತೊಗರಿ, ನವಣೆ, ಸಜ್ಜೆ ಬೆಳೆಗಳು ಸಂಪೂರ್ಣ ಹಾಳಾಗಿವೆ. 79ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಬಳ್ಳಾರಿ ಮತ್ತು ಸಿರುಗುಪ್ಪ ನಗರಗಳಲ್ಲಿನ ತಗ್ಗು ಪ್ರದೇಶ ಮತ್ತು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದೇ ವೇಳೆ, ಕರಾವಳಿ, ಮಲೆನಾಡಿನ ಹಲವೆಡೆಯೂ ಮಳೆಯಾದ ವರದಿಯಾಗಿದೆ.

ಇಂದೂ ಮಳೆ ಸಾಧ್ಯತೆ: ಭಾನುವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಎಲ್ಲೆಡೆ, ಒಳನಾಡಿನ ಹಲವೆಡೆ ಸಾಧಾರಣ ಮಳೆಯಾಗಲಿದೆ. ಕರಾವಳಿಯ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

1-qeqeqe

HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್‌

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.