ಹೈದರಾಬಾದ್ ಕರ್ನಾಟಕದಲ್ಲಿ “ಬಿಸಿ ಗಾಳಿ ‘ಬೀಸುವ ಭೀತಿ…!
Team Udayavani, Apr 17, 2018, 6:05 AM IST
ಬೆಂಗಳೂರು : ರಾಜ್ಯದಲ್ಲಿ ಈ ವರ್ಷದ ಬೇಸಿಗೆಯಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಮೀರಿದರೆ ” ಬಿಸಿಗಾಳಿ ‘ ಬೀಸುವ ಅಪಾಯವಿದೆ. ಹೈದರಾಬಾದ್ ಕರ್ನಾಟಕದ ಪ್ರದೇಶದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾದರೆ ಬಿಸಿಗಾಳಿಯ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಮುನ್ನೆಚ್ಚರಿಕೆಯನ್ನ ನೀಡಿದೆ.
ಏಪ್ರಿಲ್ ನಿಂದ ಜೂನ್ ತಿಂಗಳ ಅವಧಿಯಲ್ಲಿ ದೇಶದಲ್ಲಿ ಬಿಸಿಗಾಳಿ ಉಂಟಾಗುವ ಸಾಧ್ಯತೆಗಳ ಬಗ್ಗೆ ಭಾರತೀಯ ಹವಮಾನ ಇಲಾಖೆಯೂ ಮಾಹಿತಿ ನೀಡಿದ್ದು ರಾಜ್ಯದ ನೆರೆಯ ಆಂಧ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಈ ಬಾರಿ ಬಿಸಿಗಾಳಿಯ ಸಂಭವ ಹೆಚ್ಚಾಗಿದೆ.ಈ ಭಾಗಕ್ಕೆ ಹೊಂದಿಕೊಂಡಿರುವ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಹಾಗು ಉತ್ತರ ಒಳನಾಡು ಪ್ರದೇಶದಲ್ಲಿ ವಾತಾವರಣದ ವೈಪರೀತ್ಯದಿಂದ ಉಂಟಾಗುವ ಬಿಸಿಗಾಳಿ ಎದುರಿಸಲು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನ ಕಳುಹಿಸಿದೆ.
ರಾಜ್ಯದ ವಿಪತ್ತು ನಿರ್ವಹಣಾ ಕೇಂದ್ರವು ಬಿಸಿಗಾಳಿ ಪರಿಸ್ಥಿತಿ ನಿಭಾಯಿಸಲು ಕಾರ್ಯಯೋಜನೆಯನ್ನು ಸಹ ಸಿದ್ದಪಡಿಸಿದ್ದು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ ಸುತ್ತೋಲೆಯಲ್ಲಿ ತಿಳಿಸಿದೆ.
ಬಿಸಿಗಾಳಿಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಸ್ವಲ್ಪ ಹೆಚ್ಚು ಕಡಿಮೆ ಯಾದರೆ ಪ್ರಾಣಕ್ಕೂ ಸಂಚಕಾರ ಬರಲಿದೆ. ನೆರೆಯ ಆಂಧ್ರದಲ್ಲಿ 2014 ರಿಂದ 2017 ರ ಅವಧಿಯಲ್ಲಿ 2276ಕ್ಕಿಂತ ಹೆಚ್ಚಿನ ಜನ ಮೃತಪಟ್ಟಿರುವುದು ಬಿಸಿಗಾಳಿಯ ತೀವ್ರತೆಯನ್ನು ತೋರಿಸುತ್ತದೆ. ಪ್ರಮುಖವಾಗಿ ಹಿರಿಯ ನಾಗರೀಕರು, ಮಹಿಳೆಯರು, ಮಕ್ಕಳು, ಕಡು ಬಡವರು,ಪ್ರಾಣಿ- ಪಕ್ಷಿಗಳಿಗೆ ಹೆಚ್ಚಿನ ಹಾನಿ ಉಂಟಾಗುವ ಸಾಧ್ಯತೆ ಇರುತ್ತದೆ.
ಆಂದ್ರ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಬಿಸಿಗಾಳಿ ಬೀಸಿದಂತೆ ರಾಜ್ಯದ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಾದ ಬಳ್ಳಾರಿ, ರಾಯಚೂರು,ಬೀದರ್,ಗುಲ್ಬರ್ಗ, ಯಾದಗಿರಿ, ಕೊಪ್ಪಳ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಉಷ್ಣಾಂಶ ಅಧಿಕವಾದರೆ ಬಿಸಿಗಾಳಿ ಉಂಟಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮತೆಗೆದುಕೊಳ್ಳಲು ಕಾರ್ಯಯೋಜನೆ ತಯಾರಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ” ಉದಯವಾಣಿ’ ಗೆ ತಿಳಿಸಿದ್ದಾರೆ.
ಬಿಸಿಗಾಳಿ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ, ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ರಿವು ಮೂಡಿಸಲು, ತಾಪಮಾನ 40 ಡಿಗ್ರಿ ಗಿಂತ ಅಧಿಕವಾಗಿದ್ದಲ್ಲಿ ಬೆಳಿಗ್ಗೆ 11ರಿಂದ ಸಂಜೆ 4 ಗಂಟೆಯ ತನಕ ಜನರು ಮನೆಯಿಂದ ಹೊರಗಡೆ ಬಿಸಿಲಿನಲ್ಲಿ ಓಡಾಡದಂತೆ ಎಚ್ಚರಿಕೆ ವಹಿಸಬೇಕೆಂದು ಕಾರ್ಯಯೋಜನೆಯಲ್ಲಿ ಸೂಚಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಸರ್ಕಾರಿ ಕಚೇರಿ,ಶಾಲೆ ಕಾಲೇಜು ಅವಧಿ ಬದಲಾವಣೆ ಜೊತೆಗೆ ಉದ್ಯೋಗ ಖಾತರಿ ಯೋಜನೆ ಕೆಲಸದ ಅವಧಿ ಕಡಿತಗೊಳಿಸಬೇಕು. ಬಿಸಿಲಿನ ಅವಧಿ ಹೊರತುಪಡಿಸಿ ತಂಪು ಹೊತ್ತಿನಲ್ಲಿ ಕೆಲಸದ ಸಮಯ ನಿಗದಿಪಡಿಸಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆಯೂ ಕಾರ್ಯಯೋಜನೆಯಲ್ಲಿ ತಿಳಿಸಲಾಗಿದೆ.ಆರೋಗ್ಯ ಇಲಾಖೆಯು ಬಿಸಿಗಾಳಿಯಿಂದ ಹಾನಿಗೊಳಗಾದ ಜನರಿಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಿಗಳನ್ನು ದಾಸ್ತಾನಿಟ್ಟುಕೊಳ್ಳಲು ಸಹಕಾರ್ಯಯೋಜನೆಯಲ್ಲಿ ಸಲಹೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Mother: ತಾಯಿಯ ಮಡಿಲು ನೆಮ್ಮದಿಯ ನೆರಳು
Mannagudda: ಗುಜರಿ ಕಾರುಗಳ ಪಾರ್ಕಿಂಗ್; ಸಾರ್ವಜನಿಕರಿಗೆ ಸಮಸ್ಯೆ
Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.