“ರಾಜಕೀಯಕ್ಕಾಗಿ ಭಾಷೆ ಬಳಸಿಲ್ಲ,ನಾನು ಹುಟ್ಟು ಕನ್ನಡ ಪ್ರೇಮಿ
Team Udayavani, Nov 2, 2017, 6:45 AM IST
ಬೆಂಗಳೂರು: “ರಾಜಕೀಯಕ್ಕಾಗಿ ನಾನು ಕನ್ನಡ ಬಳಸಿಕೊಳ್ಳುತ್ತಿಲ್ಲ. ನಾನು ಹುಟ್ಟು ಕನ್ನಡ ಪ್ರೇಮಿ. ಕನ್ನಡ ಕಾವಲು ಸಮಿತಿ ಅಧ್ಯಕ್ಷನಾಗಿ ರಾಜಕೀಯ ಜೀವನ ಆರಂಭಿಸಿದ ನಾನು, ನಾಡು-ನುಡಿಯ ಬಗ್ಗೆ ರಾಜಿ ಮಾಡಿಕೊಂಡಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ರಾಜ್ಯೋತ್ಸವ ನಿಮಿತ್ತ, ರಾಜ್ಯದ ಜನತೆ ಉದ್ದೇಶಿಸಿ ಆಕಾಶವಾಣಿಯಲ್ಲಿ ಭಾಷಣ ಮಾಡಿದರು. ನಾಡಿನ ನೆಲ, ಜಲ, ಭಾಷೆಗೆ ಸಂಬಂಧಿಸಿದ ಪ್ರಶ್ನೆ ಬಂದಾಗ ನಮ್ಮೆಲ್ಲರದ್ದೂ ಒಂದೇ ಪಕ್ಷ ಎಂದು ಹೇಳಿದ್ದಾರೆ.
ಕನ್ನಡ ಅಭಿಜಾತ ಭಾಷೆ, ಜಗತ್ತಿನಲ್ಲಿ ಅತ್ಯುತ್ತಮ ಸಾಹಿತ್ಯ ಸಂಪತ್ತನ್ನು ಹೊಂದಿರುವ ಕೆಲವೇ ಭಾಷೆಗಳಲ್ಲಿ ಕನ್ನಡವೂ ಒಂದು. ಇದಕ್ಕೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ಕರ್ನಾಟಕದಲ್ಲಿ ವಾಸಿಸುವವರೆಲ್ಲರೂ ಕನ್ನಡಿಗರು ಎಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಹಾಗೆಯೇ ನಡೆದುಕೊಂಡಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಕನ್ನಡಕ್ಕೆ ಸಂಬಂಧಿಸಿದಂತೆ ರಾಜಕೀಯ ಲಾಭ-ನಷ್ಟದ ಲೆಕ್ಕ ಹಾಕದೇ ಕನ್ನಡ ಪ್ರೇಮಿಯಾಗಿ ನಿರ್ಧಾರ ಕೈಗೊಂಡಿದ್ದೇನೆಂದು ಹೇಳಿಕೊಂಡಿದ್ದಾರೆ.
ಮೀಸಲಾತಿ: ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಶೇ.5 ಮೀಸಲಾತಿ. ಖಾಸಗಿ ಕ್ಷೇತ್ರದ ಉದ್ದಿಮೆಗಳಲ್ಲಿ ಸಿ ಮತ್ತು ಡಿ ದರ್ಜೆಯ ನೌಕರರ ನೇಮಕಾತಿಯಲ್ಲಿ ಶೇ.100 ಉದ್ಯೋಗ ಮೀಸಲಾತಿ, ಸಿಬಿಎಸ್‌ಇ, ಐಸಿಎಸ್‌ಇ ಶಾಲೆಗಳು ಸೇರಿ ಎಲ್ಲ ಇಂಗ್ಲಿಷ್ ಮಾಧ್ಯಮದ ಶಾಲೆಗಳಲ್ಲಿ ಕನ್ನಡವನ್ನು ಒಂದನೇ ತರಗತಿಯಿಂದಲೇ ಕಡ್ಡಾಯವಾಗಿ ಕಲಿಸುವ ಭಾಷಾ ನೀತಿ ಜಾರಿಗೊಳಿಸಲಾಗಿದೆ. ಗ್ರಾಮೀಣ ಬ್ಯಾಂಕ್‌ಗಳ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಕೃತ, ಗ್ರಾಮೀಣ ಮತ್ತು ಷೆಡ್ನೂಲ್ಡ್ ಬ್ಯಾಂಕ್‌ಗಳ ಸಿಬ್ಬಂದಿ ಕಡ್ಡಾಯವಾಗಿ ಕನ್ನಡ ಕಲಿಯುವಂತೆ ಸೂಚಿಸಲಾಗಿದೆ. ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನ ಕಡ್ಡಾಯಗೊಳಿಸಿ ಆದೇಶ, ಗುಣಮಟ್ಟದ 125 ಕನ್ನಡ ಸಿನಿಮಾಗಳಿಗೆ ಪ್ರೋತ್ಸಾಹಧನ, ಅನ್ಯ ಭಾಷಿಗರಿಗೆ ಕನ್ನಡ ಕಲಿಸಲು ಬೆಂಗಳೂರಿನಲ್ಲಿ ಕನ್ನಡ ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.
ಹೇರಿಕೆ ಒಪ್ಪಲ್ಲ: ರಾಜ್ಯ ಭಾಷೆಯ ಸಾರ್ವಭೌಮತ್ವವನ್ನು ನಾವು ಕಾಪಾಡಿಕೊಂಡು ಬಂದಿದ್ದು, ಇಂಗ್ಲಿಷ್ ಮತ್ತು
ಹಿಂದಿ ಭಾಷೆಗೆ ನಮ್ಮ ವಿರೋಧವಿಲ್ಲ. ಆದರೆ, ಕನ್ನಡದ ಬೆಲೆ ತೆತ್ತು ಬೇರೆ ಭಾಷೆಗಳ ಹೇರಿಕೆಯನ್ನು ನಾವು ಒಪ್ಪುವುದಿಲ್ಲ. ಮೆಟ್ರೋ ರೈಲ್ವೆ ನಿಲ್ದಾಣಗಳಲ್ಲಿ ಹಿಂದಿ ಭಾಷೆ ಹೇರಿಕೆ ವಿರುದಟಛಿ ಕನ್ನಡ ಸಂಘಟನಗೆಳು ದನಿ ಎತ್ತಿದಾಗ ಸ್ಪಂದಿಸಿ, ಕೇಂದ್ರ ಸರ್ಕಾರದೊಂದಿಗೆ ವ್ಯವಹರಿಸಿ ಹಿಂದಿ ಫಲಕಗಳನ್ನು ತೆರವುಗೊಳಿಸಲಾಯಿತು ಎಂದು ಹೇಳಿದರು.
ಇಂದು ಕನ್ನಡ ಭಾಷೆ ಅಷ್ಟೇ ಅಲ್ಲ, ಎಲ್ಲಾ ಪ್ರಾದೇಶಿಕ ಭಾಷೆಗಳು ಬಹುದೊಡ್ಡ ಆತಂಕ ಎದುರಿಸುತ್ತಿವೆ.
ಇತ್ತೀಚೆಗೆ ಸುಪ್ರೀಂಕೋರ್ಟ್ ಕೂಡ ಮಗು ಯಾವ ಭಾಷೆಯಲ್ಲಿ ಕಲಿಯಬೇಕೆಂಬ ತೀರ್ಮಾನ ಪಾಲಕರಿಗೆ ಸೇರಿದ್ದು ಎಂದು ಹೇಳಿದೆ. ಇದು ಇಡೀ ಸಮಾಜಕ್ಕೆ ಬಂದಿರುವ ದೊಡ್ಡ ಕುತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸುವ ಅಗತ್ಯವಿದೆ. ಅದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವ ಅಗತ್ಯವಿದ್ದು, ಈ ಕುರಿತು ಪ್ರಧಾನಮಂತ್ರಿಗೆ ಎರಡು ಬಾರಿ ಪತ್ರ ಬರೆದಿದ್ದು, ಪ್ರಧಾನಿಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಹೇಳಿದರು.
ಶಿಕ್ಷಕರಿಗೆ ತರಬೇತಿ: ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದವರು ವಿಜ್ಞಾನಿಗಳು, ರಾಜಕಾರಣಿಗಳು ಹಾಗೂ ಉನ್ನತ ಹುದ್ದೆಯ ಅಧಿಕಾರಿಗಳಾಗಿದ್ದಾರೆ. ಆದ್ದರಿಂದ ಕನ್ನಡ ಮಾಧ್ಯಮದಲ್ಲಿ ಕಲಿತರೆ ಅವಕಾಶ ಇಲ್ಲ ಎನ್ನುವುದು ಸರಿಯಲ್ಲ. ಅಲ್ಲದೇ, ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಭಾಷೆಯನ್ನು ಒಂದು ವಿಷಯವಾಗಿ ಬೊಧಿಸಲು 5,000 ಶಿಕ್ಷಕರಿಗೆ ದೀರ್ಘಾವಧಿ ತರಬೇತಿ ನೀಡಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ನಮ್ಮ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜದ ಅಗತ್ಯವಿದೆ ಎಂದು ಸರ್ಕಾರ ಈಗಾಗಲೇ ಮನಗಂಡಿದೆ. ಈ ಕುರಿತು ಕಾನೂನಿನ ಸಾಧಕ-ಬಾಧಕ ಕುರಿತು ಅಧ್ಯಯನ ನಡೆಸಲು ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಕೂಡಲೇ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
2025: ಬರುವುದೆಲ್ಲಾ ಬರಲಿ ಗೆಲುವು ನಮ್ಮದಾಗಲಿ: ಸಿನಿಮಾದ 6 ವಿಭಾಗದವರ ನಿರೀಕ್ಷೆಯ ಮಾತು
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.