ನಾನೂ ನಗಬೇಕು, ಜನರೂ ನಗುತ್ತಿರಬೇಕು

Team Udayavani, Apr 13, 2019, 5:00 AM IST

nanu-nag

ಬೆಂಗಳೂರು: “ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ,’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಟಾಂಗ್‌ ನೀಡಿದರು.

ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ಸಂಜೆ ಬೃಹತ್‌ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಕುರುಬರಹಳ್ಳಿ ವೃತ್ತದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. “ನಾನು ಯಾವಾಗಲೂ ನಗುತ್ತಿರುತ್ತೇನೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ. ನಗು ಆರೋಗ್ಯಕ್ಕೆ ಒಳ್ಳೆಯದು. ಸಿದ್ದರಾಮಯ್ಯ ಇದನ್ನು ಅರ್ಥ ಮಾಡಿಕೊಳ್ಳಬೇಕು,’ ಎಂದು ತಿರುಗೇಟು ನೀಡಿದರು.

ನಾನು ಏನು ಅಭಿವೃದ್ಧಿ ಮಾಡಿದ್ದೇನೆ ಎಂದು ಕಾಂಗ್ರೆಸಿಗರು ಪ್ರಶ್ನಿಸುತ್ತಿದ್ದಾರೆ. ಎಲ್ಲೆಡೆ ಅಪಪ್ರಚಾರ ಮಾಡಿಕೊಂಡು ಬರುತ್ತಿದ್ದಾರೆ. ರಕ್ಷಣಾ ಇಲಾಖೆಗೆ ಸೇರಿದ ರಾಜ್ಯದ ಕೆಲ ಭೂಮಿಗಳ ವಿವಾದ ಹಲವು ವರ್ಷಗಳಿಂದ ಇತ್ಯರ್ಥವಾಗಿರಲಿಲ್ಲ. ನಾನು ಕೇಂದ್ರ ಸಚಿವನಾದ ನಂತರ ರಕ್ಷಣಾ ಸಚಿವ ಮನೋಹರ್‌ ಪರಿಕ್ಕರ್‌ ಅವರನ್ನೇ ಬೆಂಗಳೂರಿಗೆ ಕರೆಸಿ 28 ಪ್ರಕರಣದಲ್ಲಿ 21 ಸಮಸ್ಯೆ ಪರಿಹರಿಸಿಕೊಟ್ಟಿದ್ದೇನೆ ಎಂದು ಹೇಳಿದರು.

ಇದರಿಂದಾಗಿ ಬಿಬಿಎಂಪಿ, ಬಿಡಿಎ ಸೇರಿದಂತೆ ಹಲವು ಯೋಜನೆಗಳಿಗೆ ವೇಗ ಸಿಕ್ಕಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಾಯಕವಾಗಿದೆ. ನಾನು ಪ್ರಚಾರಕ್ಕೆ ಹಾತೊರೆಯುವುದಿಲ್ಲ. ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ. ನಯಾಪೈಸೆ ಭ್ರಷ್ಟಾಚಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಯಾವುದೋ ವ್ಯಕ್ತಿ ಅಥವಾ ಪಕ್ಷವನ್ನು ಅಧಿಕಾರಕ್ಕೆ ತರಲು ನಡೆಯುವ ಚುನಾವಣೆ ಇದಲ್ಲ. ಸಮರ್ಥ ನಾಯಕ, ಸ್ಥಿರ ಸರಕಾರಕ್ಕಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ನರೇಂದ್ರ ಮೋದಿಯವರನ್ನು ಪುನಃ ಪ್ರಧಾನಿ ಮಾಡಬೇಕು. ಕ್ಷೇತ್ರದಲ್ಲಿ ತಾವು ಕೈಗೊಂಡಿರುವ ಅಭವೃದ್ಧಿ ಕಾರ್ಯಗಳನ್ನು ಗಮನಿಸಿ ಪುನರಾಯ್ಕೆ ಮಾಡಬೇಕು.

ನಿಮ್ಮ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಮನವಿ ಮಾಡಿದರು. ಮುಖಂಡರಾದ ನರೇಂದ್ರ ಬಾಬು, ಹರೀಶ್‌, ನಾಗರಾಜ್‌, ರಾಜೇಂದ್ರಕುಮಾರ್‌, ಪ್ರಸನ್ನ, ಗಂಗಹನುಮಯ್ಯ, ಶಿವಾನಂದ್‌, ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.