ಮಾಸ್ಕ್, ಅಂತರ ಮರೆತರೆ ಕ್ರಿಮಿನಲ್‌ಕೇಸ್‌

ಸಾವಿರ ರೂ. ದಂಡ ಸರ್ಕಾರದ ಅಧಿಕೃತ ಆದೇಶದ ಬಳಿಕ ಅಳವಡಿಕೆ; ಮಂಜುನಾಥ ಪ್ರಸಾದ್‌

Team Udayavani, Oct 2, 2020, 11:42 AM IST

ಮಾಸ್ಕ್, ಅಂತರ ಮರೆತರೆ ಕ್ರಿಮಿನಲ್‌ಕೇಸ್‌

ಬೆಂಗಳೂರು: ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ಮೇಲೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಎಚ್ಚರಿಸಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಆಯುಕ್ತರು, ಈಗಾಗಲೇ ಮಾಸ್ಕ್ ಹಾಕಿಕೊಳ್ಳದವರು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದವರ ಮೇಲೆ ದಂಡ ವಿಧಿಸಲಾಗುತ್ತಿದ್ದು, ಒಂದು ಸಾವಿರ ರೂ. ದಂಡ ವಿಧಿಸುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಬಂದ ಕೂಡಲೇ ಪಾಲಿಕೆ ವ್ಯಾಪ್ತಿಯಲ್ಲೂ ಅಳವಡಿಸಿಕೊಳ್ಳಲಾಗುವುದು ಎಂದು ಹೇಳಿದರು.

ಹೆಚ್ಚುವರಿ 120 ಮಾರ್ಷಲ್‌ ನೇಮಕ: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ ದಂಡ ವಿಧಿಸಲು 230 ಮಾರ್ಷಲ್‌ಗ‌ಳು ಕಾರ್ಯ ನಿರ್ವಹಿಸುತ್ತಿದ್ದು, ಇನ್ನೂ 120 ಮಂದಿ ಮಾರ್ಷಲ್‌ ಗಳನ್ನುನಿಯೋಜನೆಮಾಡಿಕೊಳ್ಳಲಾಗುತ್ತಿದೆ. ದಂಡ ವಿಧಿಸುವ ವೇಳೆ ಮಾರ್ಷಲ್‌ಗ‌ಳ ಜೊತೆ ಪೊಲೀಸ್‌ ಸಿಬ್ಬಂದಿ ಸಹ ಸಹಕಾರ ನೀಡಲಿದ್ದಾರೆ ಎಂದು ಹೇಳಿದರು.

ನಿಯಮ ಉಲ್ಲಂಘಿಸಿದರೂ ದಂಡ :  ನಗರದಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಇರುವವರ ಮೇಲೆ ಸಾವಿರ ರೂ. ದಂಡ ವಿಧಿಸಲು ಸರ್ಕಾರ ಮುಂದಾಗಿದೆ. ಆದರೆ, ಈಗ ಇರುವ 200 ರೂ. ದಂಡಕಟ್ಟುವುದಕ್ಕೆ ಸಾರ್ವಜನಿಕರು ಮಾರ್ಷಲ್‌ ಹಾಗೂ ಪೊಲೀಸ್‌ ಸಿಬ್ಬಂದಿಯೊಂದಿಗೆ ಜಗಳಕ್ಕೆ ಇಳಿಯುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾರ್ಷಲ್‌ಗ‌ಳೊಂದಿಗೆ ಸಾರ್ವಜನಿಕರು ಜಗಳಕ್ಕೆ ಇಳಿಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ನಿಯಮ ಉಲ್ಲಂಘನೆ ಸಾಬೀತಾದರೂ, ದಂಡ ಪಾವತಿ ಮಾಡುವುದಿಲ್ಲಎಂದು ವಾದಕ್ಕೆ ಇಳಿಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ, ಈ ರೀತಿ ಜಗಳಕ್ಕೆ ಇಳಿಯುವವರ ಮೇಲೂ ಕ್ರಿಮಿನಲ್‌ಕೇಸ್‌ ದಾಖಲಿಸಲು ಪಾಲಿಕೆ ಮುಂದಾಗಿದೆ.

 ಮಾರ್ಷಲ್‌ಗ‌ಳಿಗೆ ಗಸ್ತು ವಾಹನ :  ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿಕಸ ಎಸೆಯುವವರ ಮೇಲೆ,ಕಸ ವಿಂಗಡಣೆ ಮಾಡಿಕೊಡ ದವರ ಮೇಲೆ ಹಾಗೂ ನಿಯಮ ಉಲ್ಲಂಘನೆ ಮಾಡುವವರ ಮೇಲೆಕಣ್ಣಿಡುವ ಉದ್ದೇಶ ದಿಂದ ಪಾಲಿಕೆಯ ಎಂಟು ವಲಯಗಳಿಗೆ ಹೊಯ್ಸಳ ಗಸ್ತು ವಾಹನದ ಮಾದರಿಯಲ್ಲಿ ಮಾಷರ್ಲ್ ಗಳಿಗೆ ಗಸ್ತು ವಾಹನವನ್ನು ಇದೇ ಮೊದಲ ಬಾರಿಗೆ ಪಾಲಿಕೆ ಪರಿಚಯಿಸಿದೆ. 8 ವಲಯಗಳಿಗೆ ತಲಾ ಒಂದು ಮಾರ್ಷಲ್‌ ಗಸ್ತು ವಾಹನವನ್ನು ನೀಡಲಾಗಿದ್ದು, ಶನಿವಾರ ಪಾಲಿಕೆಯಕೇಂದ್ರಕಚೇರಿಯ ಆವರಣದಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್‌ಗುಪ್ತಾ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ 55 ಜನ ಮಾರ್ಷಲ್‌ಗ‌ಳು ಹಾಗೂ ತಂಡಕ್ಕೆ ಒಬ್ಬರು ಆರೋಗ್ಯಾಧಿಕಾಗಳಿಗೆ ಜವಾಬ್ದಾರಿ ನೀಡಲಾಗಿದೆ. ಪ್ರತಿ ವಾಹನಕ್ಕೂ 7.65 ಲಕ್ಷ ರೂ. ವೆಚ್ಚ ಮಾಡಲಾಗಿದೆ. ವಿಶೇಷ ಆಯುಕ್ತ ರಂದೀಪ್‌ ಪ್ರತಿಕ್ರಿಯಿಸಿ,ಕಸ ವಿಲೇವಾರಿ ಉಲ್ಲಂಘನೆ ಮಾಡುವವರ ಮೇಲೆಕಣ್ಣಿಡಲು ಮೊದಲ ಬಾರಿ ಗಸ್ತು ವಾಹನ ಪರಿಚಯ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.