ಅನುದಾನ ಸದ್ಬಳಕೆಯಾದರೆ ಸಮಾಜ ಅಭಿವೃದ್ದಿ
Team Udayavani, Jun 17, 2017, 12:41 PM IST
ಬೆಂಗಳೂರು: “ಸರ್ಕಾರ ನೀಡುವ ಅನುದಾನವನ್ನು ಜನ ಪ್ರತಿನಿಧಿಗಳು ಸಮರ್ಪಕವಾಗಿ ಬಳಿಸಿಕೊಂಡಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ,’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದ್ದಾರೆ.
ಮಹಾಲಕ್ಷ್ಮೀ ಬಡಾವಣೆಯ ನಾಗಪುರ ವಾರ್ಡ್ನಲ್ಲಿ ಬಿಬಿಎಂಪಿ ಅಭಿವೃದ್ಧಿಪಡಿಸಿರುವ ಬಾಲಗಂಗಾಧರನಾಥ ಸ್ವಾಮೀಜಿ ಉದ್ಯಾನ, ಬಯಲು ವ್ಯಾಯಾಮ ಹಾಗೂ ನಗೆಕೂಟದ ತಂಗುದಾಣ ಉದ್ಘಾಟಿಸಿ ಮಾತನಾಡಿದ ಅವರು, “ಜನ ಪ್ರತಿನಿಧಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಪರಿಹಾರ ಒದಗಿಸಲು ಪ್ರಯತ್ನಿಸಬೇಕು,’ ಎಂದು ಹೇಳಿದರು.
“ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ಉಪಯೋಗವಾಗುವ ಯೋಜನೆಗಳನ್ನು ಜನಪ್ರತಿನಿಧಿಗಳು ಜಾರಿಗೊಳಿಸಬೇಕು. ರಾಜಕೀಯ ಕ್ಷೇತ್ರದೊಂದಿಗೆ ಸಮಾಜ ಸೇವೆಯಲ್ಲಿಯೂ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಾರ್ವಜನಿಕರೂ ಸಹ ಸಮಾಜ ಸೇವೆಯಂಥ ಕಾರ್ಯಕ್ರಮಗಳಿಗೆ ಸಹಕಾರ ನೀಡಬೇಕು,’ ಎಂದು ಸಲಹೆ ನೀಡಿದರು.
ಮೇಯರ್ ಜಿ.ಪದ್ಮಾವತಿ ಮಾತನಾಡಿ, “ಪಾಲಿಕೆಯ ಎಲ್ಲ ವಾರ್ಡ್ಗಳ ಉದ್ಯಾನಗಳನ್ನು ಅಭಿವೃದ್ಧಿ ಮಾಡುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅದಕ್ಕೆ ಪಾಲಿಕೆಯಿಂದ ಅನುದಾನವನ್ನೂ ನೀಡಲಾಗುವುದು. ಪಾಲಿಕೆ ಸದಸ್ಯರು ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು,’ ಎಂದು ಹೇಳಿದರು.
“ನಗರದ ಅಭಿವೃದ್ಧಿಗೆ ಸರ್ಕಾರದಿಂದಲೂ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಪಾಲಿಕೆಯಲ್ಲಿನ ಉದ್ಯಾನ, ಶಾಲೆಗಳು ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಇದರೊಂದಿಗೆ ಅಗತ್ಯವಾಗಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳಿಗೆ ಮೇಯರ್ ನಿಧಿಯಿಂದಲೇ ಅನುದಾನ ನೀಡಲಾಗುವುದು,’ ಎಂದು ತಿಳಿಸಿದರು.
ಸ್ಥಳೀಯ ಪಾಲಿಕೆ ಸದಸ್ಯ ಭದ್ರೇಗೌಡ ಮಾತನಾಡಿ, “ನಾಗಪುರ ವಾರ್ಡ್ನ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಹಂತ ಹಂತವಾಗಿ ವಾರ್ಡ್ಅನ್ನು ಅಭಿವೃದ್ಧಿಪಡಿಸಲಾಗುವುದು,’ ಎಂದರು. ಶಾಸಕ ಕೆ.ಗೋಪಾಲಯ್ಯ, ಉಪಮೇಯರ್ ಎಂ.ಆನಂದರ್, ಮಾಜಿ ಉಪಮೇಯರ್ ಹೇಮಲತಾ ಗೋಪಾಲಯ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.