ಜೆಡಿಎಸ್ ಅಧಿಕಾರಕ್ಕೆ ಬಂದರೆ ಆರ್ಯವೈಶ್ಯರಿಗೆ ಸಬ್ಸಿಡಿ ಸಾಲ
Team Udayavani, Feb 19, 2018, 12:28 PM IST
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಆರ್ಯವೈಶ್ಯರಿಗೆ ಉದ್ಯೋಗ, ಶಿಕ್ಷಣದಲ್ಲಿ ಮೀಸಲಾತಿ ಜತೆಗೆ ಸಬ್ಸಿಡಿ ದರದಲ್ಲಿ ಸಾಲಸೌಲಭ್ಯ ಸೇರಿದಂತೆ ಸಮುದಾಯದ ಏಳ್ಗೆಗೆ ಬೇಕಾದ ಹಲವು ಕಾರ್ಯಕ್ರಮ ರೂಪಿಸಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿಯಿಂದ ಭಾನುವಾರ ನಗರದ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಆರ್ಯವೈಶ್ಯ ಸಮಾಜದ ರಾಜ್ಯ ಮಟ್ಟದ ಬೃಹತ್ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್ಯವೈಶ್ಯ ಸಮುದಾಯಕ್ಕೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಅಗತ್ಯವಾಗಿ ನೀಡಬೇಕು. ಆರ್ಯವೈಶ್ಯ ಅಭಿವೃದ್ಧಿ ನಿಗಮ ರಚಿಸಬೇಕು ಎಂಬ ಬೇಡಿಕೆ ನ್ಯಾಯಯುತವಾಗಿದೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಸೂಕ್ತ ಮೀಸಲಾತಿ ಕಲ್ಪಿಸಲು ನಿಯಮ ಮಾರ್ಪಾಡು ಮಾಡಲಾಗುತ್ತದೆ ಎಂದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಆರ್ಯವೈಶ್ಯ ಸಮುದಾಯ ಸಂಘಟನೆ, ಹೋರಾಟಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಇಂದು ತಮ್ಮ ಬೇಡಿಕೆ ಈಡೇರಿಸಿಕೊಳ್ಳಲು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸುವ ಮೂಲಕ ಕುಮಾರಸ್ವಾಮಿ ಅವರಿಗೆ ಮತ್ತೆ ಅಧಿಕಾರ ಕೊಡಿ. ಇದರಿಂದ ಆರ್ಯವೈಶ್ಯರು ರಾಜಕೀಯವಾಗಿ ಉತ್ತಮ ಪ್ರಾತಿನಿಧ್ಯ ಪಡೆಯಲಿದ್ದಾರೆ ಎಂದರು.
ಈ ಸಮುದಾಯದ ನಾಯಕ, ಮೇಲ್ಮನೆ ಸದಸ್ಯ ಟಿ.ಎ.ಶರವಣ ಅವರು ಸಮುದಾಯದ ಏಳ್ಗೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು. ಬೇಲಿಮಠದ ಶಿವರುದ್ರ ಸ್ವಾಮೀಜಿ, ಮಾಜಿ ಸಚಿವರಾದ ಪಿ.ಜಿ.ಆರ್.ಸಿಂಧ್ಯಾ, ಬಸವರಾಜ ಹೊರಟ್ಟಿ, ಮಾಜಿ ಶಾಸಕ ನಾಡಗೌಡ, ಜವಳಿ ಆಯುಕ್ತ ಗಿರೀಶ್, ನಟಿ ಮಯೂರಿ, ಸಂಘದ ಪ್ರಧಾನ ಕಾರ್ಯದರ್ಶಿ ಗಿರೀಶ್ ಪೆಂಡಕೂರ್, ವಿಜಯ ರಾಜೇಶ್ ಉಪಸ್ಥಿತರಿದ್ದರು.
ವಿಧಾನಸಭಾ ಚುನಾವಣೆಗೆ ರಾಮನಗರದಿಂದಲೇ ಸ್ಪರ್ಧಿಸುತ್ತೇನೆ. ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ. ಮುಂದಿನ ಎಂಟತ್ತು ದಿನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
-ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.