ಕನ್ನಡ ಧ್ವಜದ ಸ್ವರೂಪ ಬದಲಾದರೆ ಹೋರಾಟ
Team Udayavani, Aug 13, 2017, 11:20 AM IST
ಬೆಂಗಳೂರು: “ಪ್ರತ್ಯೇಕ ನಾಡಧ್ವಜಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಿರುವುದರ ಹಿಂದೆ ಹುನ್ನಾರ ಅಡಗಿದೆ. ಈಗಿನ ಧ್ವಜದ ಸ್ವರೂಪವನ್ನು ಸರ್ಕಾರ ಬದಲಿಸಲು ಮುಂದಾದರೆ ಉಗ್ರ ಹೋರಾಟ ನಡೆಯಲಿದೆ,’ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಕನ್ನಡ ಒಕ್ಕೂಟವು ಶನಿವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ “ಕನ್ನಡ ಬಾವುಟ ಸಮ್ಮೇಳನ’ದಲ್ಲಿ ಮಾತನಾಡಿದ ಅವರು, ಈಗಿರುವ ಕನ್ನಡ ಬಾವುಟವನ್ನು ಸಾಹಿತಿಗಳು, ಹೋರಾಟಗಾರರು ಸೇರಿದಂತೆ ಪ್ರತಿಯೊಬ್ಬ ಕನ್ನಡಿಗರು ಒಪ್ಪಿಕೊಂಡಿದ್ದಾರೆ. ಸರ್ಕಾರವೂ ಇದನ್ನು ಒಪ್ಪಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಪ್ರತ್ಯೇಕ ಧ್ವಜದ ನೆಪದಲ್ಲಿ ಅದನ್ನು ಬದಲಾಯಿಸಬಾರದು. ಹಾಗೊಂದು ವೇಳೆ ಈಗಿರುವ ಬಾವುಟದಲ್ಲಿ ಬದಲಾವಣೆ ಮಾಡಿದರೆ, ಅದರ ವಿರುದ್ಧ ದೊಡ್ಡ ಹೋರಾಟ ನಡೆಯಲಿದೆ ಎಂದು ಹೇಳಿದರು.
ನಾಡಧ್ವಜವನ್ನು ಯಾವುದೇ ಕಾರಣಕ್ಕೂ ಬದಲಾಯಿಸಬಾರದು ಎಂದು ಆಗ್ರಹಿಸಿ ಸೆ. 10ಕ್ಕೆ ನಗರದ ಕೆ.ಆರ್. ಮಾರುಕಟ್ಟೆಯಿಂದ ಪುರಭವನದವರೆಗೆ ಕನ್ನಡ ಬಾವುಟದ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದ ಅವರು, ಕನ್ನಡಪರ ಸಂಘಟನೆಗಳಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿದ್ದರೂ ಬಾವುಟದ ರಕ್ಷಣೆಗಾಗಿ ಎಲ್ಲರೂ ಒಂದೇ ವೇದಿಕೆ ಅಡಿ ಬರಬೇಕು ಎಂದು ಮನವಿ ಮಾಡಿದರು.
ಸಾಹಿತಿಗಳು ಸೇರಿದಂತೆ ಬಹುತೇಕರಿಗೆ ನಾಡಧ್ವಜದ ಇತಿಹಾಸವೇ ಗೊತ್ತೇ ಇಲ್ಲ. 50 ವರ್ಷಗಳ ಹಿಂದೆ ಈ ಸಂಬಂಧ ಎರಡು ಸಭೆಗಳು ನಡೆದವು. ಎರಡನೇ ಸಭೆಯಲ್ಲಿ ಕೆಂಪು ಮತ್ತು ಹಳದಿ ಬಣ್ಣ ಇರುವ ಬಾವುಟವನ್ನು ಅಂತಿಮಗೊಳಿಸಲಾಯಿತು. ಈಗಿರುವ ಬಾವುಟವೇ ಅಂತಿಮ ಹಾಗೂ ಅದಕ್ಕೆ ಅಧಿಕೃತವಾದ ಮಾನ್ಯತೆ ನೀಡಬೇಕು ಎಂದರು. ಸಮ್ಮೇಳನದಲ್ಲಿ ಕನ್ನಡ ಜಾಗೃತಿ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ್ ದೇವ್, ಕನ್ನಡಪರ ಹೋರಾಟಗಾರರಾದ ಟಿ.ಪಿ. ಪ್ರಸನ್ನಕುಮಾರ್, ಜಿ. ಮುದ್ದೇಗೌಡ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Bengaluru: ಕೆರೆ ಒತ್ತುವರಿ ಮಾಡಿದ್ದ ಮೂವರಿಗೆ 1ವರ್ಷ ಜೈಲು
MUST WATCH
ಹೊಸ ಸೇರ್ಪಡೆ
Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು
Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!
Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.