ಕಾನೂನು ಕೈಗೆತ್ತಿಕೊಂಡರೆ ಜೈಲಿಗೆ ಕಳಿಸುತ್ತೇವೆ
Team Udayavani, Mar 12, 2019, 6:36 AM IST
ಬೆಂಗಳೂರು: ಲೋಕಸಭೆ ಚುನಾವಣೆ ಪ್ರಕ್ರಿಯೆ ವೇಳೆ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಜೈಲಿಗೆ ಕಳುಹಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಬಿಬಿಎಂಪಿ ಕಚೇರಿಯಲ್ಲಿ ನಗರ ಜಿಲ್ಲಾ ಚುನಾವಣಾಧಿಕಾರಿ ಮಂಜುನಾಥ ಪ್ರಸಾದ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಚುನಾವಣೆ ಸಂದರ್ಭದಲ್ಲಿ ಯಾರೇ ಆಗಲಿ ಕಾನೂನನ್ನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗುವುದು. ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ತಿಳಿಸಿದರು.
ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಈಗಾಗಲೇ 400ಕ್ಕೂ ಹೆಚ್ಚು ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ರೌಡಿಗಳು, ಗೂಂಡಾಗಳ ಬಗ್ಗೆ ಗಮನಹರಿಸಲಾಗಿದೆ ಎಂದು ಹೇಳಿದರು. ಬಂದೂಕುಗಳನ್ನು ಇಟ್ಟುಕೊಂಡಿರುವವರು ಕೂಡಲೇ ಅವುಗಳನ್ನು ಸ್ಥಳೀಯ ಠಾಣೆಗಳಿಗೆ ಒಪ್ಪಿಸಬೇಕು.
ಆಯುಧ ಹೊಂದಲು ಬ್ಯಾಂಕ್‌ನ ಭದ್ರತಾ ಸಿಬ್ಬಂದಿ, ಕೊಡಗು ಮಂದಿ ಮತ್ತು ಮಾಜಿ ಸೈನಿಕರಿಗೆ ವಿನಾಯಿತಿ ನೀಡಲಾಗಿದೆ. ವಿನಾಯಿತಿ ಬಯಸುವವರು ಡಿಸಿಪಿ ನೇತೃತ್ವದಲ್ಲಿ ರಚನೆ ಮಾಡಲಾಗಿರುವ ಸಮಿತಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.
ಮತದಾರರ ಮೇಲೆ ಪ್ರಭಾವ ಬೀರುವುದು, ಚುನಾವಣೆಗೆ ಅಡ್ಡಿಪಡಿಸುವ ಗೂಂಡಾಗಳ ಮೇಲೆ ಹದ್ದಿನ ಕಣ್ಣು ಇಡಲಾಗುವುದು ಎಂದು ಹೇಳಿದ ಪೊಲೀಸ್ ಆಯುಕ್ತರು, ಕಳೆದ ಬಾರಿ 300 ಪ್ರಕರಣಗಳನ್ನು ದಾಖಲಿಸಲಾಗಿದ್ದು, 299 ಪ್ರಕರಣಗಳನ್ನು ಇತ್ಯರ್ಥಪಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗಿದೆ. ತಾಂತ್ರಿಕ ಕಾರಣದಿಂದ ಒಂದು ಪ್ರಕರಣದಲ್ಲಿ ಕ್ರಮಕೈಗೊಳ್ಳಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.
ಚುನಾವಣೆ ಶಾಂತಿಯುತವಾಗಿ ನಡೆಸಲು ಕೇಂದ್ರದಿಂದ ಅರೆ ಸೇನಾಪಡೆ ಬೆಂಗಳೂರಿಗೆ ಆಗಮಿಸುತ್ತಿದೆ. ನಗರದ ಸೂಕ್ಷ್ಮಪ್ರದೇಶಗಳಲ್ಲಿ ರೆಸೇನಾ ಪಡೆ ಕವಾಯತು ನಡೆಸುವ ಮೂಲಕ ಮತದಾರರಲ್ಲಿ ಭದ್ರತೆಯ ಭರವಸೆ ಮೂಡಿಸುವ ಕಾರ್ಯ ಮಾಡಲಾಗುವುದು. ಹಾಗೇ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 1,600 ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.