ಅಕ್ರಮ ಗ್ಯಾಸ್ ರೀಫಿಲ್ಲಿಂಗ್: ಆರೋಪಿ ಬಂಧನ,141 ಸಿಲಿಂಡರ್,2 ಕ್ಯಾಂಟರ್ ಜಪ್ತಿ
Team Udayavani, Feb 14, 2024, 12:38 PM IST
ಬೆಂಗಳೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಸೋಲದೇವನಹಳ್ಳಿಯ ಗುನಿ ಅಗ್ರಹಾರ ನಿವಾಸಿ ರಾಘವೇಂದ್ರ(34) ಬಂಧಿತ. ಆರೋಪಿಯಿಂದ 19 ಕೆ.ಜಿ. ತೂಕದ 31 ದೊಡ್ಡ ಸಿಲಿಂಡರ್ಗಳು ಹಾಗೂ 14.2 ಕೆ.ಜಿ. ತೂಕದ 110 ಗ್ಯಾಸ್ ಸಿಲಿಂಡರ್ಗಳು, ರೀಫಿಲ್ಲಿಂಗ್ ರಾಡ್ಗಳು ಮತ್ತು 2 ಗೂಡ್ಸ್ ಕ್ಯಾಂಟರ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸೋಲದೇವನಹಳ್ಳಿಯ ಗುನಿ ಅಗ್ರಹಾರದಲ್ಲಿ ಗೃಹ ಬಳಕೆ ಸಿಲಿಂಡರ್ ಏಜೆನ್ಸಿ ಹಾಗೂ ಉಗ್ರಾಣದಲ್ಲಿ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಫೆ.9ರಂದು ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿ ರಾಘವೇಂದ್ರ, ರಾಡ್ಗಳ ಮೂಲಕ ಅಧಿಕೃತ ಕಂಪನಿಯ ಸಿಲಿಂಡರ್ಗಳಿಂದ ಬೇರೆ ಸಿಲಿಂಡರ್ಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿರುವುದು ಹಾಗೂ ಅಧಿಕೃತ ಕಂಪನಿಗಳ ಲೇಬಲ್ ಅಂಟಿಸಿ, ಕಂಪನಿಯ ಸಿಲಿಂಡರ್ಗಳೆಂದು ಸಾರ್ವಜನಿಕರಿಗೆ ನಂಬಿಸಿ, ಸರಬರಾಜು ಮಾಡಿ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಆರೋಪಿ ಗ್ಯಾಸ್ ಏಜೆನ್ಸಿ ನಡೆಸಲು ಪರವಾನಗಿ ಇದ್ದರೂ ಅದನ್ನು ದುರುಪಯೋಗ ಪಡಿಸಿಕೊಂಡು ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿರು ವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಈ ಸಂಬಂಧ ಸೋಲದೇವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.